ಹಾಸನ

ಹೆಣ್ಣು ಸಂತಾನ ಕ್ಷೀಣಿಸಲು ಪುರುಷ ಪ್ರಾಧಾನ್ಯತೆ ಕಾರಣ

Published On :

ಕ.ಪ್ರ.ವಾರ್ತೆ    ಹಾಸನ    ಜ. 23
ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ಗುರುವಾರ ನಗರದಲ್ಲಿ ಆಚರಿಸಲಾಯಿತು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಜಿಲ್ಲಾ ಸಮಗ್ರ ಮಕ್ಕಳ ರಕ್ಷಣಾ ಘಟಕ, ಸಾರ್ವಜನಿಕ ಶಿಕ್ಷಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ನಗರಾಭಿವೃದ್ಧಿ ಕೋಶಗಳ ಸಂಯುಕ್ತಾಶ್ರಯದಲ್ಲಿ ನಡೆದ ದಿನಾಚರಣೆಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟಂಬ ಕಲ್ಯಾಣಾಧಿಕಾರಿ ಶ್ಯಾಮಲಾದೇವಿ ಅವರು ಉದ್ಘಾಟಿಸಿದರು.
ಆರ್ಥಿಕ ಸಬಲತೆಗಾಗಿ ಕಾಯ್ದೆ: ನಂತರ ಮಾತನಾಡಿದ ಅವರು, ಪ್ರತಿ 6 ವರ್ಷದೊಳಗಿನ ಮಕ್ಕಳ ಸಂಖ್ಯೆಯಲ್ಲಿ ಹೆಣ್ಣುಮಕ್ಕಳ ಸಂಖ್ಯೆ ಕಡಿಮೆ ಇದೆ. ಹೆಣ್ಣು ಮಕ್ಕಳ ಸಂಖ್ಯೆ ಕಡಿಮೆಯಾಗುವುದಕ್ಕೆ ಪುರುಷ ಪ್ರಧಾನ ಸಮಾಜವಾಗಿದ್ದು, ಹಿಂದೆ ಆಸ್ತಿಯ ಹಕ್ಕು ಹೆಣ್ಣುಮಕ್ಕಳಿಗೆ ಇರದ ಕಾರಣ ಸಮಸ್ಯೆ ಹೆಚ್ಚಾಗಿದೆ. ಆದರೆ, ಆರ್ಥಿಕ ಸಬಲತೆ ಇದ್ದರೆ ಮಾತ್ರ ಸಮಾನತೆ ಸಾಧ್ಯ ಎಂಬ ಕಾರಣಕ್ಕೆ ಹೆಣ್ಣು ಮಕ್ಕಳಿಗೆ ಆಸ್ತಿಯಲ್ಲಿ ಪಾಲನ್ನು ನೀಡುವ ಕಾಯ್ದೆ ಜಾರಿಗೊಳಿಸಲಾಗಿದೆ.
ಮಾತ್ರೆ ಸೇವಿಸಿ: ಇತರೆ ಜಿಲ್ಲೆಗಳಿಗೆ ಹೋಲಿಸಿದರೆ, 1 ಸಾವಿರ ಪುರುಷರಿಗೆ 965 ಮಹಿಳೆಯರಿದ್ದಾರೆ. ಆದರೆ ಬೇರೆ ಜಿಲ್ಲೆಗಳಲ್ಲಿ 1 ಸಾವಿರ ಪುರುಷರಿಗೆ 920, 930ರಷ್ಟಿದ್ದಾರೆ ಎಂದ ಅವರು, ಹೆಣ್ಣುಮಕ್ಕಳ ಪೌಷ್ಠಿಕತೆ ಹೆಚ್ಚಿಸುವ ನಿಟ್ಟಿನಲ್ಲಿ ಪ್ರತಿಸೋಮವಾರ ಕಬ್ಬಿಣಾಂಶದ ಮಾತ್ರೆ ಹಾಗೂ 6 ತಿಂಗಳಿಗೊಮ್ಮೆ ಜಂತುಳದ ಮಾತ್ರೆಗಳನ್ನು ನೀಡಲಾಗುತ್ತಿದೆ. ಅದನ್ನು ಮಕ್ಕಳಿಗೆ ನೀಡಬೇಕು ಹಾಗೂ ಶಿಕ್ಷಕರೂ ಅದನ್ನು ಸೇವಿಸಬೇಕು ಎಂದು ಹೇಳಿದರು.
ತಾರತಮ್ಯದಲ್ಲಿ ಸುಧಾರಣೆ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಚಿದಾನಂದ್ ಮಾತನಾಡಿ, ಕೇಂದ್ರಸರ್ಕಾರ ಹೆಣ್ಣುಮಕ್ಕಳ ಅಭಿವೃದ್ಧಿ ಅಭಿಯಾನವನ್ನು ಮಾಡುವ ಮೂಲಕ ಹೆಚ್ಚಿನ ಮಾಹಿತಿ, ಗೌರವ ಮತ್ತು ರಕ್ಷಣೆ ಒದಗಿಸುವ ನಿಟ್ಟಿನಲ್ಲಿ ಕೆಲಸ ಮಾಡಲಾಗುತ್ತಿದೆ. ಜೊತೆಗೆ ಅಪೌಷ್ಠಿಕತೆಯಿಂದ ಬಳಲುತ್ತಿರುವ ಹೆಣ್ಣುಮಕ್ಕಳಿಗೆ ಪೌಷ್ಠಿಕ ಆಹಾರ ನೀಡುವಂಥದ್ದು, ಲಿಂಗ ತಾರತಮ್ಯದಲ್ಲಿ ಸುಧಾರಣೆ ತರುವಂತಹ ಕಾರ್ಯ ನಡೆಸಲಾಗುತ್ತಿದೆ ಎಂದರು.
ಜಿಲ್ಲೆಯಲ್ಲಿ 1 ಸಾವಿರ ಪುರುಷರಿಗೆ 965 ಹೆಣ್ಣು ಮಕ್ಕಳಿದ್ದು, 35 ಹೆಣ್ಣು ಮಕ್ಕಳು ಏನಾಗುತ್ತಿದ್ದಾರೆ ಅಂತ ತಿಳಿಯುತ್ತಿಲ್ಲ. ಈ ಲಿಂಗ ತಾರತಮ್ಯವನ್ನು ತಡೆಗಟ್ಟಲು ಸರ್ಕಾರ ನಾನಾ ಯೋಜನಗೆಳನ್ನು ಕೈಗೊಂಡಿದೆ ಹಾಗೂ ಸೌಲಭ್ಯಗಳನ್ನು ಒದಗಿಸಿದೆ. ಆದರೂ ಸಹ ಹೆಣ್ಣು ಮಕ್ಕಳು ತಮ್ಮ ಹಕ್ಕನ್ನು ತೊಂದರೆಯ ಮೂಲಕವೇ ಅನುಭವಿಸುತ್ತಿದ್ದಾರೆ. ಈ ಬಗ್ಗೆ ಹೆಣ್ಣುಮಕ್ಕಳಿಗೆ ಅರಿವನ್ನು ಮೂಡಿಸಬೇಕಾದಂತಹ ಅನಿವಾರ್ಯತೆ ಇದೆ ಎಂದರು. ಶಿಕ್ಷಣ ಇಲಾಖೆಯ ಪರಿವೀಕ್ಷಕಿ ಪ್ರಭಾಮಣಿ, ಬಾಲಕಿಯರ ಬಾಲ ಮಂದಿರದ ಅದೀಕ್ಷಕಿ ಪ್ರೀಯ ಹಾಗೂ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.