ಜಿಎಸ್ಎಸ್ಗೆ ಇಂದು ಗೀತ ನಮನ
ಅರಕಲಗೂಡು: ಇಲ್ಲಿನ ಸಮಾಜಮುಖಿ ಚಿಂತನಾ ವೇದಿಕೆ ವತಿಯಿಂದ ಶನಿವಾರ ಸಂಜೆ 6 ಗಂಟೆಗೆ ರಾಷ್ಟ್ರಕವಿ ಜಿ.ಎಸ್. ಶಿವರುದ್ರಪ್ಪ ಅವರ ಸ್ಮರಣಾರ್ಥ ಗೀತನಮನ ಕಾರ್ಯಕ್ರಮವನ್ನು ಪಟ್ಟಣದ ಶಿಕ್ಷಕರ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಶಾಸಕ ಎ. ಮಂಜು ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದ ಉದ್ಘಾಟನೆಯನ್ನು ಸಂಗೀತ ವಿದ್ವಾನ್ ಶ್ರೀ ಆರ್.ಕೆ. ಪದ್ಮನಾಭ ನೆರವೇರಿಸುವರು. ಮುಖ್ಯ ಅಥಿತಿಗಳಾಗಿ ಎಂ.ಆರ್.ರಂಗಸ್ವಾಮಿ,ಕ್ಷೇತ್ರ ಶಿಕ್ಷಣಾಧಿಕಾರಿ ಬಿ. ರೇವಣ್ಣ ಇತರರು ಉಪಸ್ಥಿತರಿರುವರು.
ಜಿಲ್ಲಾ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವ
ಹಾಸನ: ಜಿಲ್ಲಾಡಳಿತ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಗಣರಾಜ್ಯೋತ್ಸವ ಸಮಾರಂಭವನ್ನು ಜ. 26ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ಬೆಳಗ್ಗೆ 9ಕ್ಕೆ ಆಯೋಜಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಮತ್ತು ಲೋಕೋಪಯೋಗಿ ಇಲಾಖೆ ಸಚಿವ ಎಚ್.ಸಿ.ಮಹದೇವಪ್ಪ ಧ್ವಜಾರೋಹಣ ನೆರವೇರಿಸಿ, ಗಣರಾಜ್ಯೋತ್ಸವ ಸಂದೇಶ ನೀಡುವರು. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಗೌರವಾನ್ವಿತ ಉಪಸ್ಥಿತಿಯಲ್ಲಿ ಶಾಸಕ ಎಚ್.ಎಸ್. ಪ್ರಕಾಶ್ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಜಿಪಂ ಅಧ್ಯಕ್ಷೆ ಅಂಬಿಕಾ ರಾಮಣ್ಣ, ನಗರಸಭೆ ಅಧ್ಯಕ್ಷೆ ಎಚ್.ಎಚ್.ಶ್ರೀವಿದ್ಯಾ, ತಾಪಂ ಅಧ್ಯಕ್ಷೆ ಡಿ. ರತ್ನ ಹನುಮೇಗೌಡ ಹಾಗೂ ಜಿಲ್ಲೆಯ ಎಲ್ಲಾ ಶಾಸಕರು ಭಾಗವಹಿಸುವರು.
ಇಂದು ಅರಿವು- ನೆರವು ಕಾರ್ಯಕ್ರಮ
ಹಾಸನ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಹಾಗೂ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಇವರ ಸಂಯುಕ್ತಾಶ್ರಯದಲ್ಲಿ ಜ. 25ರಂದು ಬೆಳಿಗ್ಗೆ 9.30ಕ್ಕೆ ನಗರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾನೂನು ಅರಿವು- ನೆರವು ಕಾರ್ಯಕ್ರಮ ನಡೆಯಲಿದೆ. ಜೆಎಂಎಫ್ಸಿ ನ್ಯಾ.ಬಿ.ಜಯಂತಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸುವರು.
ಇಂದು ಮತದಾರರ ದಿನಾಚರಣೆ
ಹಾಸನ: ಭಾರತ ಚುನಾವಣಾ ಆಯೋಗದಿಂದ ಜ. 25ರಂದು ಬೆಳಿಗ್ಗೆ 9ಕ್ಕೆ ಹಾಸನಾಂಬ ಕಲಾ ಕ್ಷೇತ್ರದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ ನಡೆಯಲಿದೆ. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ವಿ.ಜಿ. ಬೋಪಯ್ಯ ಉದ್ಘಾಟಿಸುವರು. ಜಿಲ್ಲಾಧಿಕಾರಿ ವಿ. ಅನ್ಬುಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ.ಡಿ. ಚನ್ನಣ್ಣನವರ್ ಭಾಗವಹಿಸಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

