ಹಾಸನ

27ರಂದು ಹೊಳೆನರಸೀಪುರ ತಾಪಂ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ

Published On :

ಹೊಳೆನರಸೀಪುರ: ನಂಜುಂಡಪ್ಪ ಅವರ ರಾಜೀನಾಮೆಯಿಂದ ತೆರವಾಗಿರುವ ಇಲ್ಲಿನ ತಾಲೂಕು ಪಂಚಾಯ್ತಿಯ ಉಪಾಧ್ಯಕ್ಷ ಸ್ಥಾನಕ್ಕೆ ಜ. 27ರಂದು ಚುನಾವಣೆ ನಡೆಯಲಿದೆ ಎಂದು ಇಲ್ಲಿನ ತಾಪಂ ಕಾರ್ಯನಿರ್ವಹಣಾಧಿಕಾರಿ ತಮ್ಮಣ್ಣೇಗೌಡ ತಿಳಿಸಿದ್ದಾರೆ. ಇಲ್ಲಿನ ತಾಲೂಕು ಪಂಚಾಯ್ತಿ ಅಧ್ಯಕ್ಷೆಯಾಗಿದ್ದ ಜೆಡಿಎಸ್ನ ಪುಷ್ಪಾಗೌಡೇಗೌಡ ಹಾಗೂ ಉಪಾಧ್ಯಕ್ಷ ನಂಜುಂಡಪ್ಪ ಅವರುಗಳು ಕೇವಲ ಐದು ತಿಂಗಳ ಅಧಿಕಾರಾವಧಿಯ ತಮ್ಮ ಸ್ಥಾನಗಳಿಗೆ ಪಕ್ಷದ ನಾಯಕರ ನಿರ್ದೇಶನದಂತೆ ರಾಜೀನಾಮೆ ಸಲ್ಲಿಸಿದ್ದರು.ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದ ಅಧ್ಯಕ್ಷೆ ಸ್ಥಾನವನ್ನು ಸಂಕನಹಳ್ಳಿ ತಾಪಂ ಕ್ಷೇತ್ರದಿಂದ ಆಯ್ಕೆಗೊಂಡಿದ್ದ ಪುಷ್ಪಾಗೌಡೇಗೌಡ ಹಾಗೂ ಸಾಮಾನ್ಯ ಕ್ಷೇತ್ರದಿಂದ ಎಲೆಚಾಗಹಳ್ಳಿ ಕ್ಷೇತ್ರದಿಂದ ಜಯಗಳಿಸಿದ್ದ ನಂಜುಂಡಪ್ಪ ಅವರುಗಳು ಅಧ್ಯಕ್ಷೆ ಹಾಗೂ ಉಪಾಧ್ಯಕ್ಷರಾಗಿ ಆಗಸ್ಟ್ 2013ರಂದು ಅಧಿಕಾರ ಸ್ವೀಕರಿಸಿದ್ದರು. ಆದರೆ ಕೇವಲ 5 ತಿಂಗಳಷ್ಟೇ ಅಧಿಕಾರದಲ್ಲಿದ್ದ ಇವರು ತಮ್ಮ  ಶಾಸಕ ಎಚ್.ಡಿ. ರೇವಣ್ಣ ಅವರ ಮೌಖಿಕ ನಿರ್ದೇಶನದ ಮೇರೆಗೆ ತಮ್ಮ ಸ್ಥಾನಗಳಿಗೆ ರಾಜಿನಾಮೆ ನೀಡಿದ್ದರು. ಜ. 27ರಂದು ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಈ ಸ್ಥಾನಕ್ಕೆ ಮಳಲಿ ಕ್ಷೇತ್ರದಿಂದ ಆಯ್ಕೆಗೊಂಡಿರುವ ಹಿರಿಯ ಸದಸ್ಯ ಡಿ. ಕೃಷ್ಣಪ್ಪ ಅವರು ಆಯ್ಕೆಗೊಳ್ಳುವ ಸಂಭವವಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.