ಮಠಗಳಿಂದ ಅನಕ್ಷರಸ್ಥರ ಸಂಖ್ಯೆ ಕಡಿಮೆ'
ಅರಸೀಕೆರೆ: ರಾಜ್ಯದಲ್ಲಿ ಅನರಕ್ಷಸ್ಥರ ಸಂಖ್ಯೆ ಕಡಿಮೆ ಇದೆ ಎಂದರೆ ಅದಕ್ಕೆ ಮಠ ಮಾನ್ಯಗಳೂ ಶಿಕ್ಷಣ ಕ್ಷೇತ್ರದಲ್ಲಿ ಮಾಡಿರುವ ಗಣನೀಯ ಸಾಧನೆಯೇ ಕಾರಣ ಎಂದು ಮಾಡಾಳು ನಿರಂಜನ ಪೀಠದ ಶ್ರೀ ರುದ್ರಮುನಿ ಸ್ವಾಮೀಜಿ ತಿಳಿಸಿದರು.
ಮಾಡಾಳು ಗ್ರಾಮದ ನಿರಂಜನ ಪೀಠದಲ್ಲಿ ಬಸವೇಶ್ವರ ವಿದ್ಯಾಸಂಸ್ಥೆ ವತಿಯಿಂದ ಗುರುವಾರ ಆಯೋಜಿಸಿದ್ದ ಬಸವೇಶ್ವರ ಕಾನ್ವೆಂಟ್ ಹಾಗೂ ಐಟಿಐ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದ ಶ್ರೀಗಳು, ಶಿಕ್ಷಣದಿಂದಲೇ ದೇಶದ ಪ್ರಗತಿ ಸಾದ್ಯ ಎಂಬುದನ್ನು ಅರಿತ ಮಠ ಮಾನ್ಯಗಳೂ ಬಡ ಮಕ್ಕಳಿಗೆ ವಿದ್ಯಾಧಾನ, ಅನ್ನದಾನ ಜ್ಞಾನದಾಸೋಹದ ಮೂಲಕ ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದೆ ಎಂದರು.
ಗಮನಹರಿಸಬೇಕು: ಪ್ರಸಕ್ತ ವಿದ್ಯಮಾನದಲ್ಲಿ ಶಿಕ್ಷಣವು ವ್ಯಕ್ತಿಯ ಬದುಕಿಗೆ ಮಾತ್ರ ಸೀಮಿತವಾಗಿದ್ದು, ಸಮಾಜದಲ್ಲಿ ನೈತಿಕ ಆಧಃಪತನಕ್ಕೆ ಕಾರಣವಾಗುತ್ತಿದೆ. ಸಮುದಾಯದಲ್ಲಿ ಬದುಕಲು ಶಿಕ್ಷಣ ಮತ್ತು ಸಂಸ್ಕೃತಿ ಅತಿ ಮುಖ್ಯವಾಗಿದೆ. ಆದ್ದರಿಂದ ಪೋಷಕರು ಮಕ್ಕಳ ಭವಿಷ್ಯದ ಬಗ್ಗೆ ಹೆಚ್ಚು ಗಮನಹರಿಸಬೇಕು ಎಂದು ಹೇಳಿದರು.
ಶಿಕ್ಷಣ ಸಂಯೋಜಕ ಕೃಷ್ಣಾನಾಯಕ್ ಮಾತನಾಡಿ, ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಕ್ಷಣ ನೀಡುವ ಉದ್ದೇಶದಿಂದ ಸರ್ಕಾರ ಹತ್ತು ಹಲವಾರು ಸೌಲಭ್ಯಗಳನ್ನು ಒದಗಿಸುತ್ತಿದೆ. ಇವುಗಳ ಜತೆಗೆ ಮಠಮಾನ್ಯಗಳು ಹಾಗೂ ಸಂಘ- ಸಂಸ್ಥೆಗಳೂ ಸಹ ಶಿಕ್ಷಣಕ್ಕೆ ಆದ್ಯತೆ ನೀಡಿ ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ಕೆಲಸ ನಿರ್ವಹಿಸುತ್ತಿವೆ ಎಂದು ಹೇಳಿದರು.
ಮಕ್ಕಳು ಪಾಠ- ಪ್ರವಚನದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿ ತಮ್ಮ ಭವಿಷ್ಯವನ್ನು ಉತ್ತಮಪಡಿಸಿಕೊಳ್ಳಬೇಕು ಎಂದು ಕವಿಮಾತು ಹೇಳಿದರು.
ಐಟಿಐ ಕಾಲೇಜಿನ ಪ್ರಾಂಶುಪಾಲ ಎಂ.ಎಸ್.ವಿ ಸ್ವಾಮಿ, ಡಿ. ಎಂಕುರ್ಕೆ ನಂಜುಂಡಶೆಟ್ಟಿ, ವೈದ್ಯಾಧಿಕಾರಿ ತಿಮ್ಮರಾಜು, ಹಿರೀಸಾದರಹಳ್ಳಿ ಬಸವರಾಜು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

