ಹಿಂದೂ ಮುಖಂಡರ ವಿರುದ್ಧ ನಿಂದನೆ: ಪ್ರತಿಭಟನೆ
ಸಕಲೇಶಪುರ: ಜಾನುವಾರು ಸಾಗಾಣಿಕಾ ವಿಷಯದಲ್ಲಿ ಹಿಂದೂ ಮುಖಂಡರನ್ನು ಪಟ್ಟಣ ಪೊಲೀಸ್ ಇನ್ಸ್ಪೆಕ್ಟರ್ ನಿಂದಿಸಿದ್ದು, ಕೂಡಲೇ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿ ತಾಲ್ಲೂಕಿನ ಹಿಂದೂಪರ ಸಂಘಟನೆಗಳು ಶುಕ್ರವಾರ ಬೃಹತ್ ಪ್ರತಿಭಟನೆ ನಡೆಸಿದವು.
ಪಟ್ಟಣದ ಸಕಲೇಶ್ವರಸ್ವಾಮಿ ದೇವಸ್ಥಾನದಿಂದ ನೂರಾರು ಸಂಖ್ಯೆಯಲ್ಲಿ ಮೆರವಣಿಗೆಯಲ್ಲಿ ಹೊರಟ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಉಪವಿಭಾಗಾಧಿಕಾರಿಗಳ ಕಚೇರಿ ಮುಂದೆ ಒಂದು ದಿನದ ಸಾಂಕೇತಿಕ ಉಪವಾಸ ಸತ್ಯಾಗ್ರಹ ನಡೆಸಿ ನಂತರ ತಹಶೀಲ್ದಾರ್ ಪಾರ್ವತಿ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ವರ್ಗಾವಣೆ ಮಾಡಿ: ಈ ಸಂದರ್ಭದಲ್ಲಿ ಬಜರಂಗದಳ ಮುಖಂಡ ರಘು ಮಾತನಾಡಿ, ತಾಲ್ಲೂಕಿನಲ್ಲಿ ಅಕ್ರಮ ಗೋಸಾಗಾಣಿಕೆಗಳು ನಿರಂತರವಾಗಿ ನಡೆಯುತ್ತಿದ್ದು ಇದನ್ನು ತಡೆಯಲು ಹೋದವರ ಮೇಲೆ ಹಲ್ಲೆ ನಡೆದರೂ ಸಹ ಇನ್ಸ್ಪೆಕ್ಟರ್ ಗುರುರಾಜ್ ಸುಮ್ಮನಿದ್ದರಲ್ಲದೇ, ಹಿಂದೂ ಪರ ಮುಖಂಡರನ್ನು ನಿಂದಿಸಿದ್ದಾರೆ. ಆದ್ದರಿಂದ ತಕ್ಷಣ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು.
ಪೊಲೀಸ್ ಪೇದೆ ಶ್ರೀನಾಥ್ ಎಂಬುವವರು ಕಳೆದ 20 ವರ್ಷಗಳಿಂದ ತಾಲ್ಲೂಕಿನಿಂದ ವರ್ಗಾವಣೆಗೊಂಡಿಲ್ಲ.
ಬಹುತೇಕ ತಾಲ್ಲೂಕಿನಲ್ಲಿ ಆಗುತ್ತಿರುವ ಅಕ್ರಮಗಳಿಗೆ ಅವರೇ ಕಾರಣರಾಗಿದ್ದು, ಹಿಂದೂ ಸಂಘಟನೆಗಳ ಮೇಲೆ ಬೇರೆ ಸಂಘಟನೆಗಳನ್ನು ಎತ್ತಿಕಟ್ಟಿ ಪ್ರತಿಭಟನೆ ಮಾಡಿಸಿದ್ದಾರೆ. ಇದಕ್ಕೆ ಸಂಬಂಧಿಸಿದ ಸಾಕ್ಷಿ ಆಧಾರಗಳು ನಮ್ಮ ಬಳಿ ಇವೆ. ಆದ್ದರಿಂದ ತಕ್ಷಣ ಅವರನ್ನು ವರ್ಗಾವಣೆ ಮಾಡಬೇಕೆಂದು ಅವರು ಆಗ್ರಹಿಸಿದರು.
ನೈತಿಕತೆ ಇಲ್ಲ: ವಿಎಚ್ಪಿ ಜಿಲ್ಲಾ ಸಹ ಕಾರ್ಯದರ್ಶಿ ಸಂತೋಷ್ ಮಾತನಾಡಿ, ಕಲೆ, ಸಾಹಿತ್ಯದ, ನಾಡು ನುಡಿಯ ರಕ್ಷಣೆ ಮಾಡಬೇಕಾಗಿರುವ ಜಯಕರ್ನಾಟಕ ಸಂಘಟನೆಯ ಅಧ್ಯಕ್ಷ ಸುಪ್ರದೀಪ್ ಯಜಮಾನ್ ಒಂದು ಕೋಮಿನ ಏಜೆಂಟ್ರಂತೆ ವರ್ತಿಸಿ ಶಾಂತಿ, ನೆಮ್ಮದಿಗೆ ಭಂಗ ತರುತ್ತಿದ್ದಾರೆ.
ಮರಳುದಂಧೆ ಹಾಗೂ ಮೆಣಸು ಹಾಗೂ ಏಲಕ್ಕಿ ವ್ಯಾಪಾರದಲ್ಲಿ ಸರ್ಕಾರದ ಬೊಕ್ಕಸಕ್ಕೆ ಸರಿಯಾದ ರೀತಿಯ ತೆರಿಗೆ ನೀಡದೆ ಶೋಕಿ ಮಾಡುತ್ತಿರುವ ಅವರು ತಮ್ಮ ತಪ್ಪನ್ನು ಮರೆಮಾಚಲು ಬಜರಂಗದಳದ ಕಾರ್ಯಕರ್ತರ ವಿರುದ್ಧ ನಾಚೀಕೆಗೇಡಿನ ಹೇಳಿಕೆ ನೀಡಿದ್ದು, ಈ ರೀತಿಯ ಹೇಳಿಕೆ ನೀಡಲು ಅವರಿಗೆ ಯಾವುದೇ ನೈತಿಕತೆ ಇಲ್ಲ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಕೊಲ್ಲಹಳ್ಳಿ ಬಾಲರಾಜ್, ಹೆಬ್ಬಸಾಲೆ ಪ್ರಶಾಂತ್, ಜಾನೆಕೆರೆ ಪ್ರಜ್ವಲ್, ಅರೆಕೆರೆ ಕುಮಾರ್, ವಿಕ್ರಂ ಸಿಂಹ, ಮಧು, ಚೈತ್ರಾನಂದ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

