ಇಂದು 300 ಮಕ್ಕಳಿಂದ ಸಮೂಹ ಗೀತೆ
ಬೇಲೂರು: ತಾಲೂಕು ಕನ್ನಡ ಸಾಹಿತ್ಯ ಪರಿಷತ್, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಸಹಯೋಗದಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ಜ. 26ರಂದು ಸಂಜೆ ದೇಶಾಭಿಮಾನದ ಬಗ್ಗೆ 300 ಮಕ್ಕಳಿಂದ ಸಮೂಹ ಗೀತೆ ಹಾಗೂ ಹಿರಿಯ ಗಾಯಕಿ ಬಿ.ಕೆ. ಸುಮಿತ್ರ ಅವರಿಗೆ ಸನ್ಮಾನ ಸಮಾರಂಭವನ್ನು ಏರ್ಪಡಿಸಲಾಗಿದೆ ಎಂದು ತಾಲೂಕು ಕಸಾಪ ಅಧ್ಯಕ್ಷ ಬಿ.ಎಸ್ ಆನಂದ್ ತಿಳಿಸಿದ್ದಾರೆ.
ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಸಹಯೋಗದೊಂದಿಗೆ ಭಾನುವಾರ ಹಿರಿಯ ಕವಿಗಳ ನಾಡು- ನುಡಿ ಗೀತ ಗಾಯನ ತರಬೇತಿ ಶಿಬಿರ ನಡೆಯಲಿದೆ. ಜ.26 ರಂದು ತರಬೇತಿ ಪಡೆದ 300 ಮಕ್ಕಳಿಂದ ಕೋಟೆ ಶ್ರೀ ಚನ್ನಕೇಶವಸ್ವಾಮಿ ದೇಗುಲ ಮುಂಭಾಗ ನಡೆಯುವ ಕಾರ್ಯಕ್ರಮದಲ್ಲಿ ಗಾಯನ ಹಾಗೂ ಸಮಾರೋಪ ಸಮಾರಂಭ ಏರ್ಪಡಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

