ರೈತರ ಸಹಾಯಧನ ನೇರ ಖಾತೆಗೆ ಜಮೆ: ಜಂಟಿ ಕೃಷಿ ನಿರ್ದೇಶಕ ಶಿವರಾಜ್
ಹಾಸನ: ಪಾರದರ್ಶಕತೆ ಕಾಯ್ದುಕೊಳ್ಳುವ ಸಲುವಾಗಿ ಕೃಷಿ ಪರಿಕರಗಳಿಗೆ ಒದಗಿಸುವ ಸಹಾಯಧನವನ್ನು ರೈತರ ಖಾತೆಗೆ ನೇರವಾಗಿ ಜಮಾ ಮಾಡುವ ಬಗ್ಗೆ ಸರ್ಕಾರ ಆದೇಶ ಹೊರಡಿಸಿದೆ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕ ಬಿ.ಶಿವರಾಜ್ ತಿಳಿಸಿದ್ದಾರೆ.
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೃಷಿ ಯಾಂತ್ರೀಕರಣ ಕಾರ್ಯಕ್ರಮ, ಉಳುಮೆಯಿಂದ ಕೊಯ್ಲಿನವರೆಗೆ ಬೇಕಾಗುವ ನಾನಾ ಕೃಷಿ ಯಂತ್ರೋಪಕರಣಗಳಿಗೆ ಮತ್ತು ರಾಷ್ಟ್ರೀಯ ಸೂಕ್ಷ್ಮ ನೀರಾವರಿ ಅಭಿಯಾನ ಯೋಜನೆಯಡಿ ವಿತರಿಸುವ ತುಂತುರು ಹಾಗೂ ಹನಿ ನೀರಾವರಿ ಘಟಕಗಳಿಗೆ 5 ಸಾವಿರ ರು. ಹಾಗೂ ಅದಕ್ಕಿಂತ ಮೇಲ್ಪಟ್ಟು ಒದಗಿಸುವ ಸಹಾಯಧನವನ್ನು ರೈತರ ಖಾತೆಗೆ ನೇರವಾಗಿ ಜಮಾ ಮಾಡಲು ಸರ್ಕಾರ ಡಿ. 27, 2013ರಂದು ಆದೇಶಿಸಿದೆ ಎಂದರು.
ಜಮೆಗೆ ಕ್ರಮ: ಸಹಾಯಧನ ಪಡೆಯಲು ರೈತರು ಬ್ಯಾಂಕಿನಲ್ಲಿ ಖಡ್ಡಾಯವಾಗಿ ಖಾತೆ ಹೊಂದರಬೇಕು. ರೈತರು ತಮ್ಮ ಭಾಗದ ಹಣವನ್ನು ಬ್ಯಾಂಕ್ ಖಾತೆಯಲ್ಲಿ ಇಡಬೇಕು, ಸಂಬಂಧಿಸಿದ ಬ್ಯಾಂಕ್ ವ್ಯವಸ್ಥಾಪಕರಿಗೆ ಮುಚ್ಚಳಿಕೆ ಪತ್ರ ನೀಡಿ ಸರಬರಾಜು ಸಂಸ್ಥೆಗೆ ಪಾವತಿಸಲು ಅಗತ್ಯ ಕ್ರಮಕೈಗೊಳ್ಳಬೇಕು.
ರೈತರಿಗೆ ಉಪಕರಣ ಸರಬರಾಜು ಮಾಡಿದ ಕೂಡಲೇ ಇಲಾಖೆ ಅಧಿಕಾರಿಗಳು ತಪಾಸಣೆ ಮಾಡಿ ದೃಢೀಕರಸಿದ ನಂತರ ಸರ್ಕಾರಿ ಸಹಾಯಧನವನ್ನು ಬ್ಯಾಂಕ್ ಖಾತೆಗೆ ಜಮಾ ಮಾಡಿ ಸರಬರಾಜು ಸಂಸ್ಥೆಗೆ ಪಾವತಿಸಲು ಕ್ರಮಕೈಗೊಳ್ಳಲಾಗುತ್ತದೆ ಎಂದು ಹೇಳಿದರು.
ಮಾಹಿತಿಯುಳ್ಳ ಅರ್ಜಿ: ರೈತರು ಸವಲತ್ತು ಪಡೆಯಲು ನಿಗಧಿತ ನಮೂನೆಯಲ್ಲಿ ಸಂಬಂಧಿಸಿದ ದಾಖಲೆಗಳೊಂದಿಗೆ (ಪಹಣಿ, ಹಿಡುವಳಿ ಪತ್ರ, ಗುರುತಿನ ಪತ್ರ, ಭಾವಚಿತ್ರ, ಬ್ಯಾಂಕ್ ಖಾತೆ ಸಂಖ್ಯೆ, ಷೆಡ್ಯೂಲ್ಡ್ ಬ್ಯಾಂಕ್ ಹಾಗೂ ರು. 20 ಕಾಗದದ ಮೇಲೆ ಮುಚ್ಚಳಿಕೆ ಪತ್ರ) ರೈತ ಸಂಪರ್ಕ ಕೇಂದ್ರಕ್ಕೆ ಅರ್ಜಿ ಸಲ್ಲಿಸಬೇಕು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

