ಹಾಸನ

ಲೋಕಸಮರದಲ್ಲಿ ಕಾಂಗ್ರೆಸ್ ಗೆಲ್ಲಿಸುವುದು ನಮ್ಮ ಗುರಿ'

Published On :

ಹೊಳೆನರಸೀಪುರ: ಕಾಂಗ್ರೆಸ್ನ ನಿಷ್ಟಾವಂತ ಕಾರ್ಯಕರ್ತರು ಹಾಗೂ ಯುವ ಸಮೂಹವನ್ನು ಒಗ್ಗೂಡಿಸಿ ಮುಂಬರಲಿರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವುದು ಪ್ರಮುಖ ಗುರಿಯಾಗಿದೆ ಎಂದು ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೇಯಸ್ ಎಂ. ಪಟೇಲ್ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಟೇಲ್, ರಾಷ್ಟ್ರದ ಯುವ ನಾಯಕರಾದ ರಾಹುಲ್ ಗಾಂಧಿಯವರ ನಿರ್ದೇಶನದಂತೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಮಹತ್ವದ ಯೋಜನೆಗಳಾದ ಸಂಧ್ಯಾ ಸುರಕ್ಷಾ, ವಿಧವಾ ವೇತನ, ಅಂಗವಿಕಲರ ವೇತನ, ಮನಸ್ವಿನಿ ಯೋಜನೆ, ಅನ್ನಭಾಗ್ಯ, ಕ್ಷೀರಭಾಗ್ಯ ಮತ್ತು ರಾಜೀವ್ ಗಾಂಧಿ ಆರೋಗ್ಯ ಯೋಜನೆಗಲನ್ನು ಸಮರ್ಪಕವಾಗಿ ಅರ್ಹರಿಗೆ ತಲುಪಿಸುವಲ್ಲಿ ಯುವ ಕಾಂಗ್ರೆಸ್ ಸಮಿತಿಯು ಪ್ರಮುಖ ಪಾತ್ರವನ್ನು ವಹಿಸಲಿದೆ ಎಂದರು.
ಕಣ್ಗಾವಲಾಗಿ ಕಾರ್ಯ: ಅಲ್ಲದೇ, ಸ್ಥಳೀಯ ಪುರಸಭೆ ವ್ಯಾಪ್ತಿಯಲ್ಲಿನ ನಾನಾ ಪ್ರೋತ್ಸಾಹ ಧನ ಹಾಗೂ ಪರಿಶಿಷ್ಠ ಜಾತಿ ಹಾಗೂ ಪರಿಶಿಷ್ಟ ಪಂಗಡದವರ ಅಭಿವೃದ್ಧಿಗೆ ನೀಡುವ ಸಹಾಯಧನ ಯೋಜನೆಗಳ ಜಾರಿಯಲ್ಲಿಯೂ ಯಾವುದೇ ತಾರತಮ್ಯ ನಡೆಯದಂತೆ ಯುವ ಕಾಂಗ್ರೆಸ್ ಎಚ್ಚರಿಕೆ ವಹಿಸುವುದಲ್ಲದೇ, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯ್ತಿ  ಹಾಗೂ ಗ್ರಾಮ ಪಂಚಾಯ್ತಿಗಳಲ್ಲಿ ಬರುವ ಆಶ್ರಯ ಮನೆಗಳನ್ನು ಅರ್ಹರಿಗೆ ನೀಡುವ ಕುರಿತಂತೆ ಯುವ ಕಾಂಗ್ರೆಸ್ ಸಮಿತಿಯು ಕಣ್ಗಾವಲಾಗಿ ಕಾರ್ಯ ನಿರ್ವಹಿಸಲಿದೆ ಎಂದು ಶ್ರೇಯಸ್ ಎಂ. ಪಟೇಲ್ ತಿಳಿಸಿದರು. ಈ ಸಂದರ್ಭದಲ್ಲಿ ತಾಲೂಕು ಯುವ ಕಾಂಗ್ರೆಸ್ ಸಮಿತಿಗೆ ಉಪಾಧ್ಯಕ್ಷರಾಗಿ ಆಯ್ಕೆ ಆಗಿರುವ ಸೂರನಹಳ್ಳಿ ಸೋಮೇಗೌಡ, ತಾಲೂಕು ಬ್ಲಾಕ್ ಕಾಂಗ್ರೆಸ್ನ ಮಾಜಿ ಅಧ್ಯಕ್ಷ ವಳಂಬಿಗೆ ನಾರಾಯಣ್, ಲಕ್ಕೂರು ಬಸವರಾಜು, ಬೀಚೇನಹಳ್ಳಿ ಬಸವರಾಜು, ಮಾರಗೌಡನಹಳ್ಳಿ ಮಾಯಣ್ಣ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.