ಶಿಕ್ಷಣದಲ್ಲಿ ಹೊಸ ಆವಿಷ್ಕಾರ ಅಗತ್ಯ, ಅನಿವಾರ್ಯ
ಅರಸೀಕೆರೆ: ಇಂದಿನ ವೈಜ್ಞಾನಿಕ ಯುಗದಲ್ಲಿ ಸಾಕಷ್ಟು ಪ್ರಗತಿ ಸಾಧಿಸಲಾಗಿದೆ. ಅಂತೆಯೇ ಶಿಕ್ಷಣದಲ್ಲೂ ಸಹ ಹೊಸ ಹೊಸ ಆವಿಷ್ಕಾರವಾಗಿದೆ. ಇದು ಅಗತ್ಯ ಮತ್ತು ಅನಿವಾರ್ಯ ಕೂಡ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ. ನಟರಾಜ್ ತಿಳಿಸಿದರು. ಪಟ್ಟಣದ ವಿದ್ಯಾಶಂಕರ ಪಬ್ಲಿಕ್ ಶಾಲೆಯಲ್ಲಿ ಸೋಮವಾರ ಏರ್ಪಡಿಸಿದ್ದ ವಾರ್ಷಿಕೋತ್ಸವದಲ್ಲಿ ಮಾತನಾಡಿದ ಅವರು, ಇಂದಿನ ಸ್ಪರ್ಧಾ ಯುಗದಲ್ಲಿ ಅಗತ್ಯ ಶಿಕ್ಷಣವನ್ನು ನೀಡುವತ್ತ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಸರ್ಕಾರಿ ಅಥವಾ ಖಾಸಗಿ ಶಾಲೆಗಳಿರಬಹುದು ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡುತ್ತಿವೆ ಎಂದರು.
ಸಂಸ್ಥೆಯ ಅಧ್ಯಕ್ಷ ಎನ್.ಎಲ್. ಕುಮಾರ್ ಮಾತನಾಡಿ, ಮುಂದಿನ ಶೈಕ್ಷಣಿಕ ವರ್ಷದಲ್ಲಿ 3ರಿಂದ 5 ನೇತರಗತಿವರೆಗೆ ತರಗತಿಯನ್ನು ಪ್ರಾರಂಭಿಸಲಿದ್ದೇವೆ. ಇದಕ್ಕೆ ಇಲಾಖೆಯ ಹಸಿರು ನಿಶಾನೆ ದೊರೆತಿದೆ ಎಂದರು. ಕಾರ್ಯದರ್ಶಿ ರೇಖಾಕುಮಾರ್ ವಾರ್ಷಿಕ ವರದಿ ನೀಡಿದರು.
'ಕಾಂಗ್ರೆಸ್ ತೊಲಗಿಸಿ, ದೇಶ ಉಳಿಸಿ'
ಹಾಸನ: ಕಾಂಗ್ರೆಸ್ ತೊಲಗಿಸಿ, ದೇಶ ಉಳಿಸಿ ಎಂಬ ಜನಜಾಗರಣ ಅಭಿಯಾನವನ್ನು ಬಿಜೆಪಿ ಕಾರ್ಯಕರ್ತರು ಗುರುವಾರ ಮನೆ ಮನೆಗೆ ತರೆಳಿ ಪ್ರಚಾರ ಮಾಡಿ ಮೋದಿಯನ್ನು ಬೆಂಬಲಿಸುವಂತೆ ಮನವಿ ಮಾಡಿದರು. ನಗರದ ಸೀತರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಕಾರ್ಯಕರ್ತರು ಅಭಿಯಾನಕ್ಕೆ ಚಾಲನೆ ನೀಡಿದರು. ಬಿಜೆಪಿ ಕಾರ್ಯಕರ್ತರು ಮನೆ ಮನೆಗೆ ತೆರಳಿ ಕಾಂಗ್ರೆಸ್ ಯುಪಿಎ ಸರ್ಕಾರ ಕಳೆದ 9 ವರ್ಷಗಳಲ್ಲಿ ಮಾಡಿರುವ ದುರಾಡಳಿತ, ಭ್ರಷ್ಟಾಚಾರ, ನಾನಾ ಹಗರಣಗಳು, ಪಾಕಿಸ್ತಾನದ ಸೈನಿಕರು ಕದನ ವಿರಾಮ ಉಲ್ಲಂಘಿಸಿ 5 ಜನ ಭಾರತೀಯ ಸೈನಿಕರ ಹತ್ಯೆಯಾಗಿದೆ. ಕಳೆದ 5 ವರ್ಷಗಳಲ್ಲಿ ಅಗತ್ಯ ವಸ್ತುಗಳ ಬೆಲೆ 3 ಪಟ್ಟು ಹೆಚ್ಚಾಗಿದೆ. ದೇಶದ ಭವ್ಯ ಭವಿಷ್ಯಕ್ಕಾಗಿ ಬಿಜೆಪಿಯಿಂದ ಮಾತ್ರ ಸಾಧ್ಯ ಎಂದರು.
ಮುಂದಿನ ದಿನಗಳಲ್ಲಿ ತಾಲೂಕು ಹಾಗೂ ಗ್ರಾಮಗಳಿಗೆ ತೆರಳಿ ಪ್ರಚಾರ ಕೈಗಳ್ಳುವುದಾಗಿ ಅವರು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

