ಹಾಸನ

ಲೇವಾದೇವಿ ವ್ಯವಹಾರಸ್ಥರ ವಿರುದ್ಧ ಕ್ರಿಮಿನಲ್ ಮೊಕದ್ದಮೆ

Published On :

ಹಾಸನ: ಅಟ್ಟಾವರ ಗ್ರಾಮದಲ್ಲಿ ಅನಧಿಕೃತವಾಗಿ ಅಧಿಕ ಬಡ್ಡಿ ದರದಲ್ಲಿ ಲೇವಾದೇವಿ ವ್ಯವಹಾರ ನಡೆಸುತ್ತಿರುವ ಕುರಿತು ದೂರು ಬಂದ ಹಿನ್ನೆಲೆಯಲ್ಲಿ ಶ್ರೀ ಕೃಷ್ಣೇಗೌಡ ಅವರ ಮನೆಗೆ ಜ. 23ರಂದು ಪೊಲೀಸ್ ಸಿಬ್ಬಂದಿಯೊಡನೆ ದಾಳಿ ನಡೆಸಿ, ಅನಧಿಕೃತವಾಗಿ ಲೇವಾದೇವಿ ನಡೆಸುತ್ತಿದ್ದ ಬಗ್ಗೆ ದಾಖಲಾತಿಗಳನ್ನು ಹಾಗೂ ನಗದು ಹಣ ವಶಪಡಿಸಿಕೊಂಡಿದ್ದು, ಅವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಮೊಕದ್ದಮೆ ಹೂಡಲಾಗಿದೆ.
ಮುತ್ತುಗದ ಹೊಸೂರು ಗ್ರಾಮದಲ್ಲಿ ಎಂ.ಎಸ್. ರಂಗರಾಜು ಅಯ್ಯಂಗಾರ್, ಮುತ್ತುಗದ ಹೊಸೂರು, ದೊಡ್ಡಮಗ್ಗೆ ಹೋಬಳಿ, ಅರಕಲಗೂಡು ತಾಲ್ಲೂಕು. ರವರು ಅನಧಿಕೃತವಾಗಿ ಅಧಿಕ ಬಡ್ಡಿ ದರದಲ್ಲಿ ಲೇವಾದೇವಿ ವ್ಯವಹಾರ ನಡೆಸುತ್ತಿರುವುದಾಗಿ ಅಟ್ಟಾವರ ಗ್ರಾಮದ ನಿವಾಸಿಗಳು ನೀಡಿದ್ದ ದೂರಿನನ್ವಯ ಸಹಕಾರ ಸಂಘಗಳ ಸಹಾಯಕ ನಿಬಂಧಕರು, ಹಾಸನ ಉಪವಿಭಾಗ, ಹಾಸನ ರವರು ಸದರಿಯವರ ಮನೆಗೆ ಜ. 22ರಂದು ಸಹಕಾರ ಸಂಘಗಳ ಸಹಾಯಕ ನಿಬಂಧಕರು, ಸಕಲೇಶಪುರರವರು ಪೊಲೀಸ್ ಸಿಬ್ಬಂದಿಯೊಡನೆ ದಾಳಿ ನಡೆಸಿ, ಅನಧಿಕೃತವಾಗಿ ಲೇವಾದೇವಿ ನಡೆಸುತ್ತಿದ್ದ ಬಗ್ಗೆ ದಾಖಲಾತಿಗಳನ್ನು ವಶಪಡಿಸಿಕೊಂಡು ಕೊಣನೂರು ಪೊಲೀಸ್ ಠಾಣೆಯಲ್ಲಿ  ಮೊಕದ್ದಮೆ ಹೂಡಲಾಗಿರುತ್ತದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.