ಕಣ್ಮನ ಸೆಳೆದ ಸಾಂಸ್ಕೃತಿಕ ಕಾರ್ಯಕ್ರಮ
ಹಾಸನ: ಜಿಲ್ಲೆಯಾದ್ಯಂತ 65ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಭಾನುವಾರ ಸಂಭ್ರಮ-ಸಡಗರದಿಂದ ಆಚರಿಸಯಿತು. ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಲೋಕೋಪಯೋಗಿ ಇಲಾಖೆ ಸಚಿವ ಡಾ.ಎಚ್.ಸಿ.ಮಹದೇವಪ್ಪನವರು ಧ್ವಜಾರೋಹಣ ನೆರವೇರಿಸಿ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮಕ್ಕಳು ರಾಷ್ಟ್ರಗೀತೆ, ನಾಡಗೀತೆ ಮತ್ತು ರೈತ ಗೀತೆಯನ್ನು ಹಾಡುವ ಮೂಲಕ ಸಾಂಸ್ಕೃತಿಕ ಕಾರ್ಯಕ್ರಮವನ್ನು ಪ್ರಾರಂಭಿಸಿದರು. ನಂತರ ಸಚಿವರು ತೆರೆದ ವಾಹನದಲ್ಲಿ ತೆರಳಿ ಪೊಲೀಸ್ ತುಕಡಿ ಮತ್ತು ಶಾಲಾ ವಿದ್ಯಾರ್ಥಿಗಳಿಂದ ಗೌರವ ವಂದನೆ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸಮವಸ್ತ್ರಧಾರಿ ವಿದ್ಯಾರ್ಥಿಗಳು ಮತ್ತು ಪೊಲೀಸ್ ತುಕಡಿಗಳ 25ಕ್ಕೂ ಹೆಚ್ಚು ತಂಡಗಳು ಆಕರ್ಷಕ ಪಥಸಂಚಲನ ನಡೆಸಿ ಕ್ರೀಡಾಂಗಣದಲ್ಲಿ ನೆರೆದಿದ್ದವರ ಮನ ಸೆಳೆದವು. ಸಚಿವರು ಜೀಪ್ ಮುಖಾಂತರವಾಗಿ ಭಾಗವಹಿಸಿದ್ದ ಪೊಲೀಸ್, ಗೃಹ ರಕ್ಷಕ ದಳ, ಎನ್ಸಿಸಿ, ಸೇವಾದಳ, ಸ್ಕೌಟ್ಸ್ ಮತ್ತು ಗೈಡ್ಸ್, ಎನ್ಎಸ್ಎಸ್ ಹಾಗೂ ಇತರ ತಂಡಗಳನ್ನು ಪರಿಚಯ ಮಾಡಿಕೊಂಡರು. ಪೊಲೀಸ್, ಎನ್ಸಿಸಿ ಕೆಡೆಟ್ಗಳು, ಸೇವಾದಳ, ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಶಾಲಾ ಮಕ್ಕಳಿಂದ ಗೌರವ ವಂದನೆ ಸ್ವೀಕರಿಸಿದರು. ಗಣರಾಜ್ಯೋತ್ಸವದ ಅಂಗವಾಗಿ ಜಿಲ್ಲೆಯ ಪ್ರಾಥಮಿಕ ಶಾಲೆಗಳಿಂದ ಮಕ್ಕಳು ಭಾಗವಹಿಸಿದ್ದರು. ಮಕ್ಕಳು ನಾಡು ಮತ್ತು ಸಂಸ್ಕೃತಿಯನ್ನು ಸಾರುವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಭಾಗವಹಿಸಿದ್ದ ಶಾಲಾ ಮಕ್ಕಳು ಕಾರ್ಯಕ್ರಮದಲ್ಲಿ ದೇಶಭಕ್ತಿ ಹಾಗೂ ನಾಡ ಗೀತೆಗಳಿಗೆ ನೃತ್ಯವನ್ನು ಪ್ರದರ್ಶಿಸಿ ನೆರೆದಿದ್ದ ಅತಿಥಿಗಳಿಗೆ ಹಾಗೂ ಜನರಿಗೆ ಮನೋರಂಜನೆಯನ್ನು ನೀಡಿದರು. ಮಕ್ಕಳು ನಾನಾ ದೇಶಭಕ್ತಿ ಗೀತೆಗಳು, ಅಣಕು ಪ್ರದರ್ಶನ ಮುಂತಾದ ಪ್ರದರ್ಶನವನ್ನು ನೀಡಿದರು.
ಸನ್ಮಾನ ಸಮರ್ಪಣೆ: ಈ ಸಂದರ್ಭದಲ್ಲಿ ನಾನಾ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರೆಗೆ ಸನ್ಮಾನಿಸಿ ಗೌರವಿಸಲಾಯಿತು. ನಂತರ ಪ್ರವಾಸೋದ್ಯಮ ಇಲಾಖೆಯಿಂದ 25 ಕಾರುಗಳನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಹ ಫಲಾನುಭವಿಗಳಿಗೆ ಕಾರುಗಳನ್ನು ಸಚಿವ ಮಹದೇವಪ್ಪ ವಿತರಿಸಿದರು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

