ಪ್ರಜಾತಂತ್ರ ವ್ಯವಸ್ಥೆ ಅರಿವು ಅಗತ್ಯ: ನಾರಾಯಣ
ಹೊಳೆನರಸೀಪುರ: ಪ್ರಜಾತಂತ್ರ ಮತ್ತು ಗಣತಂತ್ರ ವ್ಯವಸ್ಥೆಗಳನ್ನು ಅರ್ಥಮಾಡಿಕೊಳ್ಳುವುದು ಹಿಂದಿಗಿಂತಲೂ ಇಂದು ಹೆಚ್ಚು ಪ್ರಸ್ತುತ ಎಂದು ಪ್ರಾಂಶುಪಾಲ ಡಾ.ಜಿ.ಡಿ.ನಾರಾಯಣ ತಿಳಿಸಿದರು.
ತಾಲೂಕಿನ ಪಡುವಲಹಿಪ್ಪೆಯ ಎಚ್.ಡಿ.ದೇವೇಗೌಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 65ನೇ ಗಣರಾಜ್ಯೋತ್ಸವದ ಅಂಗವಾಗಿ ದ್ವಜಾರೋಹಣ ನೆರವೇರಿಸಿ ಮಾತನಾಡಿ, ಪ್ರಜಾತಂತ್ರದ ಅಡಿಯಲ್ಲಿ ಬರುವ ವಿಚಾರ ಧಾರೆಗಳನ್ನು ಮತ್ತು ಗಣತಂತ್ರದ ಚಿಂತನೆಗಳನ್ನು ದೇಶದ ಪ್ರತಿಯೊಬ್ಬ ನಾಗರಿಕನು ಅರ್ಥ ಮಾಡಿಕೊಂಡು ದೇಶದ ಸಮಗ್ರತೆಗೆ ಶ್ರಮಿಸಬೇಕೆಂದು ತಿಳಿಸಿದರು.
ಮೂರು ಸಾವಿರಕ್ಕಿಂತಲೂ ಹೆಚ್ಚು ಜಾತಿಗಳನ್ನು, ನೂರಾರು ಭಾಷೆಗಳನ್ನು ಹಲವಾರು ಧರ್ಮಗಳನ್ನು, ಹಲವಾರು ಜನಾಂಗಗಳನ್ನು, ಹಲವಾರು ಪ್ರಾದೇಶಿಕ ವ್ಯವಸ್ಥೆಗಳನ್ನು ಹಾಗೂ ಸಾಮಾಜಿಕ ಭಿನ್ನತೆಗಳನ್ನು ಒಳಗೊಂಡ ಭಾರತವನ್ನು ಒಂದೆಡೆಗೆ ತರಲು ಗಣತಂತ್ರ ವ್ಯವಸ್ಥೆಯನ್ನು ಹೊಂದಿದ ಪ್ರಜಾಪ್ರಭುತ್ವ ಮತ್ತು ಸಂವಿಧಾನ ಅತೀ ಹೆಚ್ಚು ಪಾತ್ರ ವಹಿಸುತ್ತಿವೆ. ಈ ಹಿನ್ನೆಲೆಯಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್, ನೆಹರು, ಗಾಂಧೀಜಿ ಮುಂತಾದವರ ಪ್ರಯತ್ನ ಅವಿಸ್ಮರಣೀಯವಾದುದು ಎಂದರು. ಕಾಲೇಜಿನ ಎಲ್ಲಾ ಉಪನ್ಯಾಸಕರು, ಆಡಳಿತ ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

