ಹಾಸನ

ಭಾರತದ ಸಂವಿಧಾನ ವಿಶಿಷ್ಟವಾದದ್ದು

Published On :

ಸಕಲೇಶಪುರ: ದೇಶದ ಸಂವಿಧಾನ ಪ್ರಪಂಚದಲ್ಲಿಯೇ ವಿಶಿಷ್ಟವಾದದ್ದು ಎಂದು ಶಾಸಕ ಎಚ್.ಕೆ ಕುಮಾರಸ್ವಾಮಿ ಹೇಳಿದರು.
ಭಾನುವಾರ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮ  ಉದ್ಘಾಟಿಸಿ, ಉತ್ತಮ ಅಂಶಗಳನ್ನು ನಮ್ಮ ಸಂವಿಧಾನದಲ್ಲಿ ಅಳವಡಿಸಿಕೊಳ್ಳಲಾಗಿದೆ. ಆದರೆ ಇಂಥ ಉತ್ತಮ ಸಂವಿಧಾನ ರಚನೆಯಾಗಿ ಅರ್ಧ ಶತಮಾನಗಳು ಕಳೆದರೂ ದೇಶದಲ್ಲಿ ಕಾನೂನು ಬಾಹಿರ ಚಟುವಟಿಕೆಗಳು ಹೆಚ್ಚಿರುವುದು ವಿಷಾದನೀಯ ಎಂದರು.
ಉಪವಿಭಾಗಧಿಕಾರಿ ಮಧುಕೇಶ್ವರ್ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ನಾನಾ ಕ್ಷೇತ್ರಗಳಲ್ಲಿ ಸಾಧನೆಗೈದವರಿಗೆ ಸನ್ಮಾನಿಸಲಾಯಿತು. ನಂತರ ಶಾಲಾ ಮಕ್ಕಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ನಾಡ ಹಬ್ಬಗಳ ಆಚರಣ ಸಮಿತಿ ಅಧ್ಯಕ್ಷೆ ಪಾರ್ವತಿ, ಪುರಸಭಾ ಅಧ್ಯಕ್ಷ ಎಸ್.ಎನ್.ಸತೀಶ್, ಜಿಪಂ ಸದಸ್ಯೆ ಮಂಜಮ್ಮ, ತಾಪಂ ಅಧ್ಯಕ್ಷೆ ಮಂಜುಳಾ ಹಾಗೂ ಇತರರಿದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.