ಹಾಸನ

ಜಿಎಸ್ಎಸ್ ನಂದಾದೀಪ: ಪದ್ಮನಾಭ

Published On :

ಅರಕಲಗೂಡು: ಕನ್ನಡ ಭಾಷೆಯನ್ನು ಕೇವಲ ಚಳವಳಿಗಳಿಂದ ಬೆಳೆಸಲು ಸಾಧ್ಯವಿಲ್ಲ. ಕನ್ನಡ ನುಡಿ-ನಡೆ ಸಾಂಸ್ಕೃತಿಕ ನೆಲೆಗಟ್ಟಿನಲ್ಲಿ ನಡೆಸುವ ಕಾರ್ಯಕ್ರಮಗಳಿಂದ ಕನ್ನಡಿಗರ ಮನದಾಳದಲ್ಲಿ ಉಳಿಸಿ ಬೆಳೆಸುವ ಕೆಲಸ ಮಾಡಬೇಕು ಎಂದು ಖ್ಯಾತ ಸಂಗೀತ ವಿದ್ವಾಂಸ ಆರ್.ಕೆ.ಪದ್ಮನಾಭ ತಿಳಿಸಿದ್ದಾರೆ.
ಇಲ್ಲಿನ ಸಮಾಜಮುಖಿ ಚಿಂತನಾ ವೇದಿಕೆ ಆಯೋಜಿಸಿದ್ದ ರಾಷ್ಟ್ರಕವಿ ಜಿ.ಎಸ್.ಶಿವರುದ್ರಪ್ಪ ಅವರಿಗೆ ಗೀತ ನಮನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕನ್ನಡ ಕಾವ್ಯ ಪರಂಪರೆಯಲ್ಲಿ ಜಿ.ಎಸ್.ಶಿವರುದ್ರಪ್ಪ ಅವರ ಕೊಡುಗೆ ಅಪಾರ ಮತ್ತು ಅಮೂಲ್ಯವಾದುದು. ಶಿವರುದ್ರಪ್ಪ ಅವರ ದೃಷ್ಟಿಯಲ್ಲಿ ಅತ್ಯಂತ ಉನ್ನತ ಸ್ಥಾನದಲ್ಲಿನ ದೇವರಿಂದ ಹಿಡಿದು ಅತ್ಯಂತ ಬಡತನದ ವ್ಯಕ್ತಿಯೊಬ್ಬನ ಬಗೆಗಿನ ತುಡಿತ ಕಂಡುಬರುತ್ತದೆ. ಈ ಕುರಿತು ಸಾಹಿತ್ಯಕರವಾಗಿ ಮಂಡಿಸಿದವರು ಜಿಎಸ್ಎಸ್. ಕನ್ನಡ ಕಾವ್ಯ ಪರಂಪರೆಯಲ್ಲಿ ಅವರ ಸ್ಥಾನ ತುಂಬಬಲ್ಲ ವ್ಯಕ್ತಿ ಇನ್ನೊಬ್ಬರಿಲ್ಲ. ಅವರು ದೈಹಿಕವಾಗಿ ಇಂದು ನಮ್ಮೊಂದಿಗಿಲ್ಲವಾದರೂ ನಂದದ ದೀಪವಾಗಿ ಬೆಳಕು ನೀಡಿದ್ದಾರೆ ಎಂದರು.
ಮುಖ್ಯ ಅತಿಥಿ ತಹಸೀಲ್ದಾರ್ ಚಿದಾನಂದ ಮಾತನಾಡಿ, ಇಂದು ಸಮಾಜದಲ್ಲಿ ಸ್ವಾರ್ಥ ಹೆಚ್ಚಾಗಿದೆ ಎಂದರು. ಉದ್ಯಮಿ ಎಂ.ಆರ್.ರಂಗಸ್ವಾಮಿ, ಅಧ್ಯಕ್ಷತೆ ವಹಿಸಿದ್ದ ಜಿಪಂ ಸದಸ್ಯ ವಿ.ಎ.ನಂಜುಂಡಸ್ವಾಮಿ ಮಾತನಾಡಿದರು.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.