ಮತದಾನ ಪ್ರಜಾಪ್ರಭುತ್ವದ ನಾಡಿ ಮಿಡಿತ: ಇರ್ಷಾದ್
ಕ.ಪ್ರ.ವಾರ್ತೆ ಹೊಳೆನರಸೀಪುರ ಜ. 27
ಮತದಾನ ಎಂಬುದು ಪ್ರಜಾಪ್ರಭುತ್ವದ ನಾಡಿಮಿಡಿತ ಇದ್ದಂತೆ, ಹೆಚ್ಚು ಹೆಚ್ಚು ಮತದಾನವಾದಲ್ಲಿ ಪ್ರಜಾಪ್ರಭುತ್ವವು ಬಲಗೊಳ್ಳುತ್ತಾ ಹೋಗುತ್ತದೆ ಎಂದು ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ.ಎಂ.ಬಿ. ಇರ್ಷಾದ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಮತದಾರರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಪ್ರಸ್ತುತ ಪ್ರಜಾಪ್ರಭುತ್ವದ ದುರ್ಬಳಕೆಯನ್ನು ಹೋಗಲಾಡಿಸಲು ದೇಶದಲ್ಲಿನ ಯುವಜನಾಂಗ ಹೆಚ್ಚು ಹೆಚ್ಚಾಗಿ ಮತದಾನದಲ್ಲಿ ಭಾಗವಹಿಸುವಂತೆ ಕರೆ ನೀಡಿದರು.
ಜಾಗೃತಿಗಾಗಿ ದಿನಾಚರಣೆ: ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪಿ.ಆರ್. ಶಾಂತ ಮಾತನಾಡಿ, ಪ್ರಪಂಚದ ಬೇರೆ ದೇಶಗಳಿಗೆ ಹೋಲಿಸಿದಲ್ಲಿ ಭಾರತ ಸ್ವತಂತ್ರ್ಯವಾದ ಕೂಡಲೇ ಎಲ್ಲರಿಗೂ ಮತದಾನದ ಅವಕಾಶವನ್ನು ಜಾತಿ-ಮತ, ಭೇದ- ಭಾವವಿಲ್ಲದೇ ನೀಡಿತ್ತು, ಯುವಕರಿಂದ ಕೂಡಿರುವ ಭಾರತದಲ್ಲಿ ಮತದಾನದ ಪ್ರಮಾಣ ಕಡಿಮೆಯಾಗದಂತೆ ಜಾಗೃತಗೊಳಿಸುವ ಸಲುವಾಗಿ ಮತದಾರರ ದಿನಾಚರಣೆಯನ್ನು ಜಾರಿಗೆ ತಂದಿದೆ ಎಂದರು.
ಕರೆ: ಜತೆಗೆ ಕಡ್ಡಾಯ ಮತದಾನ ಮಾಡುವುದು ಎಷ್ಟು ಮುಖ್ಯವೋ ಅಷ್ಟೇ ಮುಖ್ಯವಾಗಿ ಜಾತಿ. ಲಿಂಗ, ಭಾಷೆ, ಧರ್ಮ ಅಥವಾ ಇನ್ನಿತರ ಯಾವುದೇ ಆಮಿಷಗಳಿಗೆ ಒಳಗಾಗದೇ ಸ್ವತಂತ್ರ ಹಾಗೂ ನಿಷ್ಪಕ್ಷಪಾತದಿಂದ ಯುವಸಮುದಾಯ ಮತದಾನ ಮಾಡುವಂತೆ ಕರೆ ನೀಡಿದರು. ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಎನ್.ವಿ. ಶ್ರೀನಿವಾಸ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಥಮ ದರ್ಜೆ ಸಹಾಯಕ ಕೃಷ್ಣಾ ನಾಯಕ್ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಪ್ರಾಧ್ಯಾಪಕರಾದ ಡಾ.ಬಿ.ಸಿ. ಮಲ್ಲೇಶ್, ರಾಮೇಗೌಡ, ಎಸ್.ಕಿರಣ್ ರಾವತ್, ಪ್ರೊ. ನಯನ ತಾರಾಮಣಿ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

