ಸುಭಾಷ್ಚಂದ್ರ ಬೋಸ್ ಮಹಾನ್ ವ್ಯಕ್ತಿ
ಕಣಕಟ್ಟೆ (ಅರಸೀಕೆರೆ ತಾ.): ಭಾರತ ದೇಶದ ಸ್ವಾತಂತ್ರ್ಯ ಚಳುವಳಿಗೆ ತನ್ನದೇ ಆದ ಅದ್ಭುತ ಕೊಡುಗೆ ನೀಡಿದ ಮಹಾನ್ ವ್ಯಕ್ತಿ ನೇತಾಜಿ ಸುಭಾಷ್ ಚಂದ್ರ ಬೋಸ್ ಎಂದು ಶ್ರೀ ವಿದ್ಯಾರಣ್ಯ ವಿದ್ಯಾ ಸಂಸ್ಥೆಯ ಗೌರವ ಕಾರ್ಯದರ್ಶಿ ಕೆ.ಎ. ನಾಗೇಶ್ ರಾವ್ ತಿಳಿಸಿದರು.
ಕಣಕಟ್ಟೆಯ ವಿದ್ಯಾರಣ್ಯ ಕೈಗಾರಿಕಾ ಸಂಸ್ಥೆ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಘಟಕದ ಆಶ್ರಯದಲ್ಲಿ 118 ನೇ ನೇತಾಜಿ ಸುಭಾಷ್ ಚಂದ್ರ ಬೋಸ್ ಜನ್ಮ ದಿನಾಚರಣೆ ಅಂಗವಾಗಿ ಇತ್ತೀಚೆಗೆ ಏರ್ಪಡಿಸಿದ್ದ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ನೇತಾಜಿಯವರು ಇಂಡಿಯನ್ ನ್ಯಾಷನಲ್ ಆರ್ಮಿ ಸ್ಥಾಪಿಸುವುದರ ಮೂಲಕ ದೇಶ ವಾಸಿಗಳಲ್ಲಿ ಸ್ವಾತಂತ್ರ್ಯದ ಕಿಚ್ಚು ಹಚ್ಚಿದ ಧೀರನೆಂದು ಸ್ಮರಿಸಿದರು. ಉಗ್ರ ಹೋರಾಟದಿಂದ ಮಾತ್ರ ದೇಶಕ್ಕೆ ಸ್ವಾತಂತ್ರ್ಯ ತರಲು ಸಾಧ್ಯವೆಂದು ಅವರ ಜೀವಿತಾವಧಿಯವರೆಗೂ ಪ್ರತಿಪಾದಿಸಿದರು.
ವಿಷಾದನೀಯ: ಭಾರತೀಯರೇ ನೀವು ನಿಮ್ಮ ರಕ್ತವನ್ನು ಕೊಡಿ, ನಾನು ನಿಮಗೆ ಸ್ವಾತಂತ್ರ್ಯ ಕೊಡಿಸುತ್ತೇನೆ ಎಂದು ಘೋಷಣೆ ಮಾಡಿದ ಮಹಾನ್ ವೀರ ನೇತಾಜಿಯ ಎಂದು ಅವರು ತಿಳಿಸಿದರು. ನೇತಾಜಿಯವರ ಸಾವು ಇನ್ನೂ ನಿಗೂಡವಾಗಿರುವುದು ಅತ್ಯಂತ ವಿಷಾದನೀಯ ಎಂದರು.
ಶ್ರೀ ಚಂದ್ರಶೇಖರ ಭಾರತೀ ವಿದ್ಯಾಸಂಸ್ಥೆಯ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಅಶೋಕ್ಮಾತನಾಡಿ, ಸುಭಾಷ್ಚ್ಂದ್ರ ಬೋಸ್ ಅವರು ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಅತ್ಯಂತ ಮಹತ್ವ ವಹಿಸಿದ ವ್ಯಕ್ತಿ ಮತ್ತು ರಾಷ್ಟ್ರವನ್ನು ಬ್ರಿಟೀಷರಿಂದ ರಕ್ಷಿಸಲು ಯತ್ನಿಸಿದ ಮಹಾನ್ಸ್ವ್ರೂಪ ಎಂದು ತಿಳಿಸಿದರು. ರಾಷ್ಟ್ರೀಯ ಭಾವೈಕ್ಯತೆ ಹಾಗೂ ಪ್ರಾಮುಖ್ಯತೆಯ ಬಗ್ಗೆ ಮಾತನಾಡಿ ಗೀತೆಯ ಮೂಲಕ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಸೇವಾ ಯೋಜನೆಯ ಬಗ್ಗೆ ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ವಿದ್ಯಾರಣ್ಯ ಐ.ಟಿ.ಐ. ಕಾಲೇಜಿನ ಪ್ರಾಂಶುಪಾಲ ಮಂಜುನಾಥ್ ಮಾತನಾಡಿ, ಭಾರತೀಯರನ್ನು ಬಡಿದೆಬ್ಬಿಸಿದ ಮಹಾನ್ ಸೇನಾನಿ ಸುಭಾಷ್ ಚಂದ್ರ ಬೋಸ್ ಸಾಹಸಸಿಂಹ ಎಂದೆನಿಸಿದವರು. ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಸುಭಾಷ್ಚ್ಂದ್ರ ಬೋಸ್ ಅವರ ಆದರ್ಶ ಗುಣಗಳನ್ನು ಮರೆಯುವುದಕ್ಕೆ ಸಾಧ್ಯವಿಲ್ಲವೆಂದು ತಿಳಿಸಿದರು. ವಿದ್ಯಾರಣ್ಯ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಹನುಮೇಶ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ರಾಷ್ಟ್ರೀಯ ಯುವ ಸಪ್ತಾಹದ ಅಂಗವಾಗಿ ಏರ್ಪಡಿಸಿದ್ದ ನಾನಾ ಕ್ರೀಡಾ ಸ್ಪರ್ಧೆ ಮತ್ತು ಪ್ರಬಂಧ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

