ಹಾಸನ

ಜಾವಗಲ್ ನಾಡಕಚೇರಿಯಲ್ಲಿ ಮತದಾರರ ಪ್ರತಿಜ್ಞಾ ವಿಧಿ

Published On :

ಜಾವಗಲ್: ಮತದಾನನವು ಅತ್ಯಂತ ಮಹತ್ವದ್ದಾಗಿದ್ದು ಪ್ರತಿಯೊಬ್ಬ ಪ್ರಜೆ ಕಡ್ಡಾಯವಾಗಿ ಮತದಾನ ಮಾಡಬೇಕೆಂದು ಉಪ ತಹಸೀಲ್ದಾರ್ ಅಶೋಕ್ ತಿಳಿಸಿದರು.
ಜಾವಗಲ್ನ ನಾಡ ಕಚೇರಿಯಲ್ಲಿ ರಾಷ್ಟ್ರೀಯ ಮತದಾರರ ದಿನದ ಅಂಗವಾಗಿ ಶನಿವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮತದಾರರ ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿದ ಅವರು, ಸುಭದ್ರ ಪ್ರಜಾಪ್ರಭುತ್ವಕ್ಕಾಗಿ ಪ್ರತಿಯೊಬ್ಬ ಮತದಾರನ ಪಾಲ್ಗೊಳ್ಳುವಿಕೆ ಅಗತ್ಯವಾಗಿದೆ ಎಂದರು.
ಪ್ರಜಾಪ್ರಭುತ್ವವನ್ನು ಬಲಗೊಳಿಸಲು ಕಡ್ಡಾಯ ಮತದಾನ ಅವಶ್ಯವಿದೆ. 18 ವರ್ಷ ತುಂಬಿದ ಪ್ರತಿಯೊಬ್ಬರೂ ತಮ್ಮ ಹೆಸರನ್ನು ನೋಂದಾಯಿಸಿ ಮತದಾನದ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಪಡೆದುಕೊಳ್ಳುವಂತೆ ತಿಳಿಸಿದರು.
ಪ್ರತಿಯೊಬ್ಬ ಮತದಾರರು ಯಾವುದೇ ಆಮಿಷಗಳಿಗೆ ಪ್ರಭಾವಿತರಾಗದೆ ಕಡ್ಡಾಯವಾಗಿ ಮತ ಚಲಾಯಿಸಬೇಕೆಂದರು.
ಗ್ರಾಮ ಪಂಚಾಯ್ತಿ ಉಪಾಧ್ಯಕ್ಷ ರಂಗಸ್ವಾಮಿ, ಮಾಜಿ ಸದಸ್ಯ ಪುರುಷೋತ್ತಮ, ರಾಜಸ್ವ ನಿರೀಕ್ಷಕ ಮುದ್ದು ವೀರಯ್ಯ, ಗ್ರಾಮ ಲೆಕ್ಕಿಗರಾದ ಗಿರೀಶ್, ಪುಷ್ಪ, ಲೀಲಾವತಿ, ಅಜಿತ್, ಗ್ರಾಮಸ್ಥರಾದ ಗಂಗಾಧರಪ್ಪ, ದಿಲೀಪ್, ಹೊಸಳ್ಳಿ ಈಶ್ವರಪ್ಪ, ಮೂರ್ತಿ ಮತ್ತಿತರರು ಇದ್ದರು. ಜಾವಗಲ್ ಹೋಬಳಿಯ ಎಲ್ಲಾ ಬೂತ್ಮಟ್ಟದಲ್ಲೂ ರಾಷ್ಟ್ರೀಯ ಮತದಾರರ ದಿನ ಆಚರಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.