ಹಾಸನ

ಜಿಲ್ಲಾಸ್ಪತ್ರೆ ನಿರ್ವಹಣೆಗೆ ಜಿಲ್ಲಾಧಿಕಾರಿ ಸೂಚನೆ

Published On :

ಹಾಸನ: ಜಿಲ್ಲಾ ಆಸ್ಪತ್ರೆಯಲ್ಲಿ ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸುವುದರ ಜೊತೆಗೆ ಈಗ ನೀಡುತ್ತಿರುವ ಆರೋಗ್ಯ ಸೇವೆ ವ್ಯವಸ್ಥೆಯಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಆಸ್ಪತ್ರೆಯನ್ನು ಉತ್ತಮವಾಗಿ ನಿರ್ವಹಣೆ ಮಾಡುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವಿ. ಅನ್ಬುಕುಮಾರ್ ಸೂಚಿಸಿದರು. ಜಿಲ್ಲಾಸ್ಪತ್ರೆಗೆ ಸೋಮವಾರ ಎಲ್ಲಾ ವಿಭಾಗಗಳಿಗೂ ಖುದ್ದು ಭೇಟಿ ನೀಡಿ ಪರಿಶೀಲಿಸಿದ ನಂತರ ಹಾಸನ ವೈದ್ಯಕೀಯ ಕಾಲೇಜಿನಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅರು, ಯುಜಿಡಿ, ಫ್ಯಾನ್, ಲೈಟ್, ಟ್ಯಾಪ್ ಇಂತಹ ಸಣ್ಣ ಸಣ್ಣ ಕೆಲಸಗಳನ್ನು ತಕ್ಷಣ ಮಾಡಿಸುವ ಮೂಲಕ ಸಾರ್ವಜನಿಕರ ಸೇವೆಗೆ ತೊಂದರೆ ಆಗದಂತೆ ನೋಡಿಕೊಳ್ಳಬೇಕು ಎಂದರು.
ತ್ಯಾಜ್ಯದ ಬಗ್ಗೆ ಗಮನ: ಆಸ್ಪತ್ರೆಯಲ್ಲಿ ಖಾಲಿ ಇರುವ ಜಾಗಗಳಲ್ಲಿ ಸಾರ್ವಜನಿಕರ ಬಳಕೆಗಾಗಿ ಬೆಂಚ್ಗಳನ್ನು ಹಾಕಿಸುವಂತೆ ತಿಳಿಸಿದರಲ್ಲದೆ, ಆಸ್ಪತ್ರೆಯಲ್ಲಿ ಸ್ವಚ್ಛತೆ ಬಹುಮುಖ್ಯವಾಗಿದ್ದು, ತ್ಯಾಜ್ಯ ವಿಲೇವಾರಿಗೆ ಗಮನ ಹರಿಸಬೇಕು. ಹವಾ ನಿಯಂತ್ರಣ ಉಪಕರಣಗಳ ಸ್ಥಿತಿ ಕುರಿತು ಪರಿಶೀಲಿಸುತ್ತಿರಬೇಕು. ರೋಗಿಗೆ ತೊಂದರೆಯಾಗದ ರೀತಿ ನಿರ್ವಹಣೆ ಮಾಡಬೇಕು ಎಂದರು. ತ್ಯಾಜ್ಯ ವಸ್ತುಗಳನ್ನು ಶೇಖರಿಸಲು ನಗರಸಭೆ ವತಿಯಿಂದ ಆಸ್ಪತ್ರೆ ಆವರಣದಲ್ಲಿ ಎರಡು ಕಂಟೈನರ್ ಇಡುವಂತೆ ತಿಳಿಸಿದರಲ್ಲದೆ ವಿಲೇವಾರಿ ಕಡೆಗೂ ಗಮನ ಹರಿಸಬೇಕು ಎಂದರು.
ಹಾಸನ ವೈದ್ಯಕೀಯ ಕಾಲೇಜಿನ ನಿರ್ದೇಶಕ ಡಾ.ರಾಚೇಗೌಡ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಶಂಕರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಪಿ.ಎಲ್. ಶ್ಯಾಮಲಾದೇವಿ, ನಗರಸಭೆ ಆಯುಕ್ತ ಕೃಷ್ಣಮೂರ್ತಿ, ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಕೃಷ್ಣಮೂರ್ತಿ, ಆರ್ಸಿಎಚ್ ಅಧಿಕಾರಿ ಡಾ. ಜನಾರ್ಧನ್ ಹಾಗೂ ನಾನಾ ಅಧಿಕಾರಿಗಳು ಮತ್ತು ವೈದ್ಯರುಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.