ಹಾಸನ

ಜೆಡಿಎಸ್ ಜಿಲ್ಲಾಧ್ಯಕ್ಷರಾಗಿ ಜಾವಗಲ್ ರಾಜಶೇಖರ್

Published On :

ಹಾಸನ: ಜೆಡಿಎಸ್ ಜಿಲ್ಲಾ ಘಟಕದ ಪದಾಧಿಕಾರಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ವೀರಶೈವ, ಕುರುಬ ಮತ್ತು ಹಿಂದುಳಿದ ವರ್ಗಗಳ ಜನಾಂಗಕ್ಕೆ ಆದ್ಯತೆ ನೀಡಲಾಗಿದೆ.
ಭಾನುವಾರ ಸುದ್ದಿಗೋಷ್ಠಿಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಸಹಿ ಮಾಡಿದ, ಜಿಲ್ಲಾ ಪದಾಧಿಕಾರಿಗಳ ಪಟ್ಟಿಯನ್ನು ಜೆಡಿಎಸ್ ಮುಖಂಡ ಎಚ್.ಡಿ.ರೇವಣ್ಣ ಬಿಡುಗಡೆ ಮಾಡಿದರು.
ಈ ಪ್ರಕಾರ, ವೀರಶೈವ ಸಮಾಜಕ್ಕೆ ಸೇರಿದ ಜಾವಗಲ್ ರಾಜಶೇಖರ್ ಅವರನ್ನು  ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ಹಿಂದುಳಿದ ವರ್ಗಕ್ಕೆ ಬರುವ ಹಾಸನ ನಗರ ಸಭೆ ಮಾಜಿ ಸದಸ್ಯ ಚನ್ನವೀರಪ್ಪನವರನ್ನು ಜಿಲ್ಲಾ ಕಾರ್ಯಾಧ್ಯಕ್ಷರನ್ನಾಗಿ ಮಾಡಲಾಗಿದೆ. ಜಿಲ್ಲಾ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷರನ್ನಾಗಿ  ಕುರುಬ ಸಮಾಜಕ್ಕೆ ಸೇರಿದ  ಜಿಲ್ಲಾ ಪಂಚಾಯ್ತಿ  ಮಾಜಿ ಅಧ್ಯಕ್ಷ ಹುಚ್ಚೇಗೌಡರನ್ನು ನೇಮಕ ಮಾಡಲಾಗಿದೆ. ಇವರು ಹಿಂದಿನಿಂದಲೂ ಅರಸೀಕೆರೆ ಶಾಸಕ ಕೆ.ಎಂ. ಶಿವಲಿಂಗೇಗೌಡರ ಪರಮಾಪ್ತರು.  ಹಿಂದುಳಿದ ವರ್ಗಗಳ ಘಟಕದ ಕಾರ್ಯಾಧ್ಯಕ್ಷರನ್ನಾಗಿ ಹಿಂದುಳಿದ ವರ್ಗಕ್ಕೆ ಸೇರಿದ ಅರಕಲಗೂಡು ಪಟ್ಟಣ ಪಂಚಾಯ್ತಿ ಮಾಜಿ ಉಪಾಧ್ಯಕ್ಷ ಎಚ್.ಸಿ. ವೆಂಕಟೇಶ್ ಅವರನ್ನು ನೇಮಿಸಲಾಗಿದೆ.
ಒಕ್ಕಲಿಗ ಜನಾಂಗಕ್ಕೆ ಸೇರಿದ ಪಕ್ಷದ ಹಿರಿಯ ಮುಖಂಡರಾದ ಕೆ.ಎಂ. ರಾಜೇಗೌಡರ ಅಧ್ಯಕ್ಷತೆಯಲ್ಲಿ ಕೋರ್ ಸಮಿತಿ ರಚಿಸಲಾಗಿದೆ. ಪಕ್ಷದ ಆಗುಹೋಗುಗಳು ಮತ್ತು ಅಂತಿಮ ತೀರ್ಮಾನವನ್ನು ಈ ಸಮಿತಿ ಕೈ ಗೊಳ್ಳುತ್ತದೆ. ಸಮಿತಿಯಲ್ಲಿ ಜಿಲ್ಲೆಯ ನಾಲ್ವರು ಶಾಸಕರು ಸೇರಿದಂತೆ 18 ಮಂದಿ ಸದಸ್ಯರಿದ್ದಾರೆ. ಸಮಿತಿಯ ಸದಸ್ಯರಾಗಿ ಜಿಲ್ಲಾಧ್ಯಕ್ಷ ಜಾವಗಲ್ ರಾಜಶೇಖರ್, ಕಾರ್ಯಾಧ್ಯಕ್ಷ ಚನ್ನವೀರಪ್ಪ,  ಮಾಜಿ ಶಾಸಕ ಎ.ಟಿ.ರಾಮಸ್ವಾಮಿ, ಕೆ.ಎಸ್. ಲಿಂಗೇಶ್, ಹಿರಿಯ ವಕೀಲ ಎಂ.ಜಿ. ದೊಡ್ಡೇಗೌಡ, ಮಾರಗೌಡನಹಳ್ಳಿ ಬಸವರಾಜು, ಬಿಳಿ ಚೌಡಯ್ಯ, ಅಕ್ಬರ್ , ಸುಲೋಚನಾ ರಾಮಕೃಷ್ಣ, ಕಾಮಾಕ್ಷಿ ರಾಜು, ಶಾಸಕರಾದ ಎಚ್.ಕೆ. ಕುಮಾರಸ್ವಾಮಿ,   ಪಟೇಲ್ ಶಿವರಾಂ, ಎಚ್.ಎಸ್. ಪ್ರಕಾಶ್, ಸಿ. ಎನ್. ಬಾಲಕೃಷ್ಣ, ಕೆ.ಎಂ. ಶಿವಲಿಂಗೇಗೌಡ, ಮಾಜಿ ಶಾಸಕ ಬಿ.ವಿ. ಕರೀಗೌಡ, ತೋ.ಚ. ಅನಂತ ಸುಬ್ಬರಾಯ,  ಇದ್ದಾರೆ.


ಉಳಿದ ಪದಾಧಿಕಾರಿಗಳು
ಜಿಲ್ಲಾ ಘಟಕದ ಉಪಾಧ್ಯಕ್ಷ ಸ್ಥಾನ, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿ ಮತ್ತು ತಾಲೂಕು ಘಟಕಗಳ ಅಧ್ಯಕ್ಷರನ್ನು ಕೋರ್ ಸಮಿತಿ ನೇಮಕ ಮಾಡುತ್ತದೆ ಎಂದು ರೇವಣ್ಣ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಹಿರಿಯ ಮುಖಂಡ ಕೆ.ಎಂ. ರಾಜೇಗೌಡ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.