ಅಕ್ರಮ ಮರಳುಗಾರಿಕೆ ತಡೆಯದಿದ್ದರೆ ಪ್ರತಿಭಟನೆ
ಸಕಲೇಶಪುರ: ಮುಂದಿನ ಎರಡು ದಿನಗಳಲ್ಲಿ ಅಕ್ರಮ ಮರಳುಗಾರಿಕೆ ತಡೆಯದಿದ್ದರೆ ಡಿ.ವೈ.ಎಸ್.ಪಿ ಕಚೇರಿ ಮುಂಭಾಗ ಧರಣಿ ನಡೆಸಲಾಗುವುದು ಎಂದು ಮಾಜಿ ಶಾಸಕ ಎಚ್. ಎಂ. ವಿಶ್ವನಾಥ್ ಎಚ್ಚರಿಸಿದರು.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕರ ಬೆಂಬಲಿಗರು ಹೇಮಾವತಿ ನದಿಯ ಪ್ರದೇಶದಿಂದ ಅಕ್ರಮವಾಗಿ ಮರಳು ಲೂಟಿಯಲ್ಲಿ ತೊಡಗಿದ್ದು ಇದಕ್ಕೆ , ಶಾಸಕರು ನೇರವಾಗಿ ಬೆಂಬಲ ನೀಡಿರವುದರಿಂದ ಪಟ್ಟಣ ಸುತ್ತ ಹರಿಯುವ ಹೇಮಾವತಿ ನದಿಯಲ್ಲಿ ಮರಳುಗಾರಿಕೆ ಎಗ್ಗಿಲ್ಲದೆ ನಡೆಯುತ್ತಿದೆ ಎಂದು ಆರೋಪಿಸಿದರು.
ತಾಲೂಕಿನ ಕೆರೋಡಿ, ಮಾಗಲು ಗ್ರಾಮಗಳ ಸುತ್ತಮುತ್ತ ಭಾರಿ ಪ್ರಮಾಣದಲ್ಲಿ ಲಾರಿಯಲ್ಲೇ ಮರಳು ಸಾಗಿಸಲಾಗುತ್ತಿದೆ ಈ ಅಕ್ರಮ ದಂಧೆಯಲ್ಲಿ ಉನ್ನತ ಅಧಿಕಾರಿಗಳು ಭಾಗಿಯಾಗಿದ್ದು, ಈ ಅಕ್ರಮವನ್ನು ತಡೆಗಟ್ಟದಿದ್ದರೆ ಇನ್ನೆರಡು ದಿನಗಳಲ್ಲಿ ಧರಣಿ ಆರಂಭಿಸಲಾಗುವುದು ಎಂದರು.
ಭಯಪಡಬೇಕಿಲ್ಲ: ಪಟ್ಟಣದಲ್ಲಿ ಜಾನುವಾರು ಸಾಗಣೆ ವಿಚಾರವಾಗಿ ಕಳೆದೊಂದು ವಾರದಿಂದ ಪ್ರಕ್ಷುಬ್ದ ವಾತಾವರಣ ನೆಲೆಸಿದ್ದು, ಈ ಬಗ್ಗೆ ಉಭಯ ಕೋಮಿನ ಮುಖಂಡರೊಂದಿಗೆ ರಾಜಿಸಂದಾನ ಮಾಡಲಾಗಿದೆ. ಆದ್ದರಿಂದ, ಅಲ್ಪಸಂಖ್ಯಾತರು ಭಯಪಡುವ ಅಗತ್ಯವಿಲ್ಲ ಎಂದರು.
ಪಟ್ಟಣದಲ್ಲಿ ನಡೆಯುತ್ತಿರುವ ಕಾಮಾಗಾರಿಗಳು ಕಳಪೆ ಗುಣಮಟ್ಟದಲ್ಲಿ ಕೂಡಿದ್ದು, ಗುಣಮಟ್ಟದ ಕಡೆ ಗಮನ ಹರಿಸ ಬೇಕಾಗಿದ್ದ ಶಾಸಕರು, ಇಂಜಿನಿಯರುಗಳು ಕಳಪೆ ಕಾಮಗಾರಿಗೆ ಉತ್ತೇಜನ ನೀಡುತ್ತಿದ್ದಾರೆ ಎಂದು ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಪುರಸಭೆ ಮಾಜಿ ಅಧ್ಯಕ್ಷ ಭಾಸ್ಕರ್, ಎಪಿಎಂಸಿ ಸದಸ್ಯ ಸಲೀಂ ಕೊಲ್ಲಹಳ್ಳಿ, ತಾಲೂಕು ಕಾಂಗ್ರೆಸ್ ಅಧ್ಯಕ್ಷ ವಿದ್ಯಾಶಂಕರ್, ಮುಖಂಡ ಸಣ್ಣಸ್ವಾಮಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

