ಅಭಿವೃದ್ಧಿ ಹೆಸರಲ್ಲಿ ಸುಲಿಗೆ: ಎಬಿವಿಪಿ ಪ್ರತಿಭಟನೆ
ಕನ್ನಡಪ್ರಭ ವಾರ್ತೆ ಟಿ ಅರಸೀಕೆರೆ ಟಿ ಜ. 28
ಕಾಲೇಜು ಅಭಿವೃದ್ಧಿ ಹೆಸರಿನಲ್ಲಿ ಬಿ.ಇಡಿ ಕಾಲೇಜುಗಳು ವಿದ್ಯಾರ್ಥಿಗಳು ಹಾಗೂ ಪೋಷಕರಿಂದ ಹಣ ಸುಲಿಗೆ ಮಾಡುತ್ತಿದ್ದು ಈ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿ ಗ್ರೇಡ್-2 ತಹಸೀಲ್ದಾರ್ ಭಾಗ್ಯಮ್ಮ ಅವರಿಗೆ ಮನವಿ ಸಲ್ಲಿಸಿದರು.
ಧರಣಿ: ಪಟ್ಟಣದ ಹೊಯ್ಸಳೇಶ್ವರ ಕಾಲೇಜು ಹಾಗೂ ರಾಮೇಶ್ವರ ಐ.ಟಿ.ಐ ಕಾಲೇಜಿನಿಂದ ರಾಷ್ಟ್ರೀಯ ಹೆದ್ದಾರಿಯ ಮೂಲಕ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ನಿಲ್ಲಿಸಿ, ನಿಲ್ಲಿಸಿ ಡೊನೇಷನ್ ನಿಲ್ಲಿಸಿ, ಶಿಕ್ಷಣದಲ್ಲಿ ವ್ಯಾಪಾರೀಕರಣವನ್ನು ತಡೆಗಟ್ಟಿ, ಧಿಕ್ಕಾರ ಧಿಕ್ಕಾರ ಸರ್ಕಾರಕ್ಕೆ ಧಿಕ್ಕಾರ ಎಂಬ ಘೋಷಣೆಗಳೊಂದಿಗೆ ಬಸವೇಶ್ವರ ವೃತ್ತಕ್ಕೆ ಬಂದು ಧರಣಿ ನಡೆಸಿದರು.
ಎಚ್ಚರಿಕೆ: ತಾಲೂಕು ಪ್ರಮುಖ್ ಪೂಲ್ಚಂದ್ ಮಾತನಾಡಿ, ರಾಜ್ಯ ಸರ್ಕಾರ ವಿದ್ಯಾರ್ಥಿಗಳ ಹಿತಕಾಯದೆ ಖಾಸಗಿ ಕಾಲೇಜುಗಳ ಏಜೆಂಟಟ್ನಂತೆ ವರ್ತಿಸುತ್ತಿದೆ ಸೀಟಿಗಾಗಿ 40-50 ರು. ಸಾವಿರ ಡೊನೇಷನ್ ನೀಡಿ ನಂತರ ಅಡ್ಮಿಷನ್ ವೇಳೆಯಲ್ಲಿ 60-70 ಸಾವಿರ ರು. ಹಣವನ್ನು ಸುಲಿಗೆ ಮಾಡುವ ಖಾಸಗಿ ಕಾಲೇಜುಗಳ ವಿರುದ್ಧ ಸರ್ಕಾರ ಕೂಡಲೇ ಕ್ರಮ ಕೈಗೊಂಡು ಬಡವಿದ್ಯಾರ್ಥಿಗಳಿಗೆ ನ್ಯಾಯ ದೊರಕಿಸದಿದ್ದಲ್ಲಿ ವಿದ್ಯಾರ್ಥಿಗಳ ಶಕ್ತಿ ಏನೆಂಬುದನ್ನು ತೋರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಒತ್ತಾಯ: ಎಬಿವಿಪಿ ಜಿಲ್ಲಾ ಸಂಚಾಲಕ ಕಣಕಟ್ಟೆ ಮಂಜು ಮಾತನಾಡಿ, ಸರ್ಕಾರಿ, ಖಾಸಗಿ ಅನುದಾನಿತ ಮತ್ತು ಖಾಸಗಿ ಅನುದಾನಿತ ರಹಿತ ಕಾಲೇಜುಗಳಲ್ಲಿ ಏರಿಸಿರುವ ಎಲ್ಲಾ ರೀತಿಯ ಶುಲ್ಕವನ್ನು ತಕ್ಷಣ ಹಿಂಪಡೆಯಬೇಕು. ಈಗಾಗಲೇ ವಿದ್ಯಾರ್ಥಿಗಳಿಂದ ವಸೂಲಿ ಮಾಡಿರುವ ಹೆಚ್ಚುವರಿ ಶುಲ್ಕವನ್ನು ವಿದ್ಯಾರ್ಥಿಗಳಿಗೆ ಹಿಂದಿರುಗಿಸಬೇಕೆಂದು ಒತ್ತಾಯಿಸಿದರು.
ಆಗ್ರಹ: ರಾಜ್ಯ, ಜಿಲ್ಲೆ ಹಾಗೂ ತಾಲ್ಲೂಕಿನ ಕೆಲ ಖಾಸಗಿ ಅನುದಾನರಹಿತ ಬಿ.ಇಡಿ ಕಾಲೇಜುಗಳಲ್ಲಿ ಯಾವುದೇ ಮೂಲಭೂತ ಸೌಲಭ್ಯಗಳಿಲ್ಲದಿದ್ದರೂ ಕಾಲೇಜು ನಡೆಸಲು ಸರ್ಕಾರ ಹಾಗೂ ವಿಶ್ವವಿದ್ಯಾನಿಲಯಗಳು ಅನುಮತಿ ನೀಡಿವೆ. ಇದನ್ನೇ ಬಂಡವಾಳ ಮಾಡಿಕೊಂಡಿರುವ ಆಡಳಿತ ಮಂಡಳಿ ಮುಖ್ಯಸ್ಥರು ಬಡ ವಿದ್ಯಾರ್ಥಿಗಳಿಂದ ಮನಬಂದಂತೆ ಹಣ ವಸೂಲಿ ಮಾಡತೊಡಗಿದ್ದಾರೆ. ಆದ್ದರಿಂದ, ಅಂತಹ ಸಂಸ್ಥೆಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು. ಏಕರೂಪದ ಶುಲ್ಕ ನಿಗದಿಪಡಿಸಬೇಕೆಂದು ಆಗ್ರಹಿಸಿದರು.
ಮಾನ್ಯತೆ ರದ್ದು ಮಾಡಿ: ಕೆಲ ಕಾಲೇಜುಗಳನ್ನು ಗೋದಾಮುಗಳಲ್ಲಿ (ಶೆಡ್) ನಡೆಸಲಾಗುತ್ತಿದೆ. ತನಿಖಾಧಿಕಾರಿಗಳು ಬಂದ ವೇಳೆ ಬೇರೆ ಕಟ್ಟಡ ತೋರಿಸಿ ನಂತರ ಕಾಲೇಜುಗಳನ್ನು ಅದೇ ಶೆಡ್ಗಳಿಗೆ ಸ್ಥಳಾಂತರಿಸುವ ಪ್ರಕ್ರಿಯೆ ಹಲವು ವರ್ಷಗಳಿಂದ ಸಾಗಿಬಂದಿದೆ. ಕೂಡಲೇ ಇಂತಹ ಕಾಲೇಜುಗಳನ್ನು ಪತ್ತೆ ಹಚ್ಚಬೇಕು. ಮಾನ್ಯತೆ ರದ್ದುಪಡಿಸಬೇಕೆಂದು ಒತ್ತಾಯಿಸಿದರು.
ಮನವಿ: ಇದೇ ವೇಳೆ ಕೆಲ ಹೋಟೆಲಲ್ಮಾಲೀಕರು ತಿಂಡಿ-ತಿನಿಸುಗಳ ಧಾರಣೆಯನ್ನು ಮನಬಂದಂತೆ ಹೆಚ್ಚಳ ಮಾಡುತ್ತಿದ್ದಾರೆ. ಶೀಘ್ರವೇ ಇಂತಹ ಹೋಟೆಲಲ್ಮಾಲೀಕರ ವಿರುದ್ಧ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಕ್ರಮ ಜರುಗಿಸಬೇಕೆಂದು ಮನವಿ ಮಾಡಿದರು.
ರೈತ ಸಂಘದ ಜಿಲ್ಲಾ ಸಂಚಾಲಕ ಕನಕಂಚೇನಹಳ್ಳಿ ಪ್ರಸನ್ನಕುಮಾರ್ ಮಾತನಾಡಿ, ಆಡಳಿತ ನಡೆಸುವ ಎಲ್ಲಾ ಸರ್ಕಾರಗಳು ಬಡ ವಿದ್ಯಾರ್ಥಿಗಳನ್ನು- ಪೋಷಕರನ್ನು ನಿರಂತರವಾಗಿ ಶೋಷಣೆ ಮಾಡಿಕೊಂಡು ಬಂದಿವೆ. ಸರ್ಕಾರ ಇನ್ನಾದರೂ ಎಚ್ಚೆತ್ತು ಡೊನೇಷನ್ ಹಾವಳಿಯ ವಿರುದ್ಧ ಕ್ರಮಕ್ಕೆ ಮುಂದಾಗಬೇಕೆಂದರು.
ಪ್ರತಿಭಟನಾ ಮೆರವಣಿಗೆಯಲ್ಲಿ ಸಹ ಕಾರ್ಯದರ್ಶಿ ಪುನೀತ್, ವಿದ್ಯಾರ್ಥಿ ಮುಖಂಡರಾದ ಗಿರೀಶ್, ಶಿವಮೂರ್ತಿ ಎನ್.ಜೆ., ಲಿಂಗರಾಜು, ನವೀನ, ಬಸವೇಶ, ಕೃಷ್ಣಮೂರ್ತಿ, ವಿದ್ಯಾ, ಉಷಾ, ರಾಧಿಕಾ, ಚೈತ್ರ, ವೇದಾಂತ್, ರಘು, ರಾಮಕೃಷ್ಣ, ಐ.ಟಿ.ಐ. ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

