ನಾಳೆ ಬಿಎಸ್‌ಪಿ ಪ್ರತಿಭಟನೆನಾನಾ ಬೇಡಿಕೆ ಈಡೇರಿಕೆಗಾಗಿ ತಹಸೀಲ್ದಾರ್ ಕಚೇರಿ ಮುಂದೆ ಧರಣಿಗೆ ನಿರ್ಧಾರ
ಕನ್ನಡಪ್ರಭ ವಾರ್ತೆ, ಹಾಸನ, ಜ. 28
ಬಗರ್ ಹುಕುಂ ಸಾಗುವಳಿ ಸಕ್ರಮಗೊಳಿಸುವುದು ಸೇರಿದಂತೆ ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜ. 30ರಂದು ಎಲ್ಲಾ ತಾಲೂಕು ಕೇಂದ್ರದ ತಹಸೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸುವುದಾಗಿ ಬಹುಜನ ಸಮಾಜ ಪಕ್ಷ (ಬಿಎಸ್‌ಪಿ)ದ ಜಿಲ್ಲಾಧ್ಯಕ್ಷ ಹಾಗೂ ವಕೀಲ ಬಿ.ಸಿ. ರಾಜೇಶ್ ತಿಳಿಸಿದರು.
ನಗದರಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಗರ್ ಹುಕ್ಕುಂ ಸಾಗುವಳಿ ಸಕ್ರಮಗೊಳಿಸಿ ಭೂ ರಹಿತರಿಗೆ ಭೂಮಿ ಕೊಡಿ ಎಂದು ಈಗಾಗಲೇ ಕಳೆದ ನವೆಂಬರ್‌ನಲ್ಲಿ 3 ದಿನಗಳ ಕಾಲ ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲಾಗಿದೆ. ಆದರೂ ಕಾಂಗ್ರೆಸ್ ಸರ್ಕಾರ ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ. ಆದ್ದರಿಂದ ಸರ್ಕಾರದ ಕ್ರಮವನ್ನು ಖಂಡಿಸಿ ಪ್ರತಿಭಟನೆಯನ್ನು ತೀವ್ರಗೊಳಿಸಲಾಗಿದೆ ಎಂದರು.
ಇದಕ್ಕೂ ರಾಜ್ಯ ಸರ್ಕಾರ ಸ್ಪಂದಿಸದಿದ್ದರೆ, 1 ಲಕ್ಷಕ್ಕೂ ಹೆಚ್ಚು ಮಂದಿ ವಿಧಾನಸೌಧ ಮುತ್ತಿಗೆ ಹಾಕಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಹುದ್ದೆ ಭರ್ತಿ ಮಾಡಿ: ಭೂ ರಹಿತರಿಗಾಗಿ ಹಾಗೂ ಕೃಷಿ ಕಾರ್ಮಿಕರಿಗಾಗಿ ಭೂಮಿ ಕೊಡಿಸಲು ಎಂತಹ ಸ್ಥಿತಿಯನ್ನು ಎದುರಿಸಲು ಸಿದ್ಧವಿದ್ದೇವೆ ಎಂದ ಅವರು, ಎಸ್ಸಿ ಎಸ್ಟಿ, ಒಬಿಸಿ ಗಳಿಗೆ ಖಾಲಿ ಇರುವ 3 ಲಕ್ಷ ಸರ್ಕಾರಿ ಬ್ಯಾಕ್ ಲಾಕ್ ಹುದ್ದೆಗಳನ್ನು ಭರ್ತಿ ಮಾಡಬೇಕು. ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆಗಳಲ್ಲಿ ಗುತ್ತಿಗೆ ನೌಕರರನ್ನು ಕೂಡಲೇ ಖಾಯಂಗೊಳಿಸಬೇಕು. ಅಸ್ಪೃಶ್ಯತೆ ನಿವಾರಣಾ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು.
ನಾಯಕರ ವೈಫಲ್ಯ: ಎಲ್ಲಾ ಗ್ರಾಮ ಪಂಚಾಯ್ತಿಗಳಲ್ಲಿ ಎಸ್ಸಿ ಎಸ್ಟಿ ಶೇ.22ರಷ್ಟು ಅನುಧಾನವನ್ನು ಸಮರ್ಪಕವಾಗಿ ಬಳಸಬೇಕು. ದಲಿತರು ಕಾಂಗ್ರೆಸ್ ಸರ್ಕಾರಕ್ಕೆ ಮತಹಾಕಿ ಪಶ್ಚಾತ್ತಾಪ ಪಡುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ದಲಿತ ವಿರೋಧಿ ನೀತಿಯನ್ನು ಅನುಸರಿಸುತ್ತಿದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ದಲಿತರು ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಲಿದ್ದಾರೆ. ಕಂದಾಯ ಇಲಾಖೆ, ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ ಇಲಾಖೆಗಳಲ್ಲಿ ದಲಿತ ನಾಯಕರು ಇದ್ದರೂ ಸಹ ಅವರು ತಮ್ಮ ಕಾರ್ಯನಿರ್ವಹಿಸುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿದರು.
ಹಳ್ಳಿಗಳಿಂದ ಬಂದಂತಹ ದಲಿತ ಮಂತ್ರಿಗಳು ಹಾಸ್ಟೆಲ್‌ಗಳ ಕಷ್ಟವನ್ನು ಅರಿತಿದ್ದರು. ಸಹ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ದಿನಕ್ಕೆ ರು. 33 ನೀಡುತ್ತಿದ್ದಾರೆ. ಅದೇ ಅಪರಾಧ ಎಸಗಿ ಜೈಲಿನಲ್ಲಿ ಇರುವಂತಹ ಖೈದಿಗಳಿಗೆ ದಿನಕ್ಕೆ ರು. 72 ಹಣವನ್ನು ಸರ್ಕಾರ ನೀಡುತ್ತಿದೆ ಎಂದ ಅವರು, ಸುಬ್ರಮಣ್ಯ ವರದಿಯನ್ನು ಜಾರಿ ಮಾಡಿ ಭೂರಹಿತರಿಗೆ ಭೂಮಿ ನೀಡಬೇಕು ಎಂದು ಒತ್ತಾಯಿಸಿದರು. ಆದ್ದರಿಂದ ಪ್ರತಿಭಟನೆಯಲ್ಲಿ ಸಾಕಷ್ಟು ಭಾಗವಹಿಸಿ ಸಹಕಾರ ನೀಡುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಸಂಯೋಜಕರಾದ ಎ.ಪಿ. ಅಹಮ್ಮದ್, ಕುಮಾರ್ ಗೌರವ್ ಹಾಗೂ ದೇವರಾಜ್, ಉಪಾಧ್ಯಕ್ಷ ರಾಜು ಅರೇಹಳ್ಳಿ, ಪ್ರಧಾನ ಕಾರ್ಯದರ್ಶಿ ಹರೀಶ್, ಖಜಾಂಚಿ ಶಿವಮ್ಮ, ಸ್ವೀವನ್ ಪ್ರಕಾಶ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

