ಹಾಸನ

'ಮುತ್ತು ಬಂದಿದೆ ಕೇರಿಗೆ' ವಿನೂತನ ಕಾರ್ಯಕ್ರಮ

Published On :

ಹಾಸನ: ರಾಷ್ಟ್ರೀಯ ಸಂತಕವಿ ಕನಕದಾಸ ಅಧ್ಯಯನ, ಅಧ್ಯಯನ ಮತ್ತು ಸಂಶೋಧನಾ ಕೇಂದ್ರ-ಬೆಂಗಳೂರು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು ಹಾಗೂ ಎ.ವಿ.ಕಾಂತಮ್ಮ ಮಹಿಳಾ ಕಾಲೇಜು ಹಾಸನ ಇವರ ಸಹಯೋಗದೊಂದಿಗೆ ಇತ್ತೀಚೆಗೆ ಕಾಲೇಜಿನ ಸಭಾಂಗಣದಲ್ಲಿ ಮುತ್ತು ಬಂದಿದೆ ಕೇರಿಗೆ ಎಂಬ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮ ಉದ್ಘಾಟಿಸಿದ ರಾಷ್ಟ್ರೀಯ ಸಂತಕವಿ ಕನಕದಾಸ ಅಧ್ಯಯನ, ಸಂಶೋಧನಾ ಕೇಂದ್ರದ ಸಮನ್ವಯಾಧಿಕಾರಿ ಕಾ.ತ. ಚಿಕ್ಕಣ್ಣ ಮಾತನಾಡಿ,  ಕನಕದಾಸರ ಬಹುಮುಖ ವ್ಯಕ್ತಿತ್ವವನ್ನು ಪರಿಚಯಿಸಿದರು. ಯುವ ಸಮುದಾಯಕ್ಕೆ ಕನಕದಾಸರ ದಾರ್ಶನಿಕ ಚಿಂತನೆಗಳನ್ನು ಪರಿಚಯಿಸುವ ಸದುದ್ದೇಶದಿಂದ ಕಾಲೇಜುಗಳಲ್ಲಿ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಇದು 59ನೇ ಕಾರ್ಯಕ್ರಮ. ಈ ಕಾರ್ಯಕ್ರಮ ಕವಿಯಾದ ಕನಕದಾಸರನ್ನು ಸಂತ, ದಾರ್ಶನಿಕರನ್ನಾಗಿ ನೋಡುವ ಹೊಸ ಆಯಾಮವನ್ನು ಬೆಳೆಸುತ್ತದೆ. ಆದ್ದರಿಂದ ವಿದ್ಯಾರ್ಥಿನಿಯರು ಇಂತಹ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು.  ಸರ್ಕಾರಿ ಕಲಾ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ  ಡಾ.ಹಂಪನಹಳ್ಳಿ ತಿಮ್ಮೇಗೌಡ ಮಾತನಾಡಿ, ಕನಕದಾಸರ ಸಮಗ್ರ ಸಾಹಿತ್ಯಕ ಮತ್ತು ಸಾಂಸ್ಕತಿಕ ಕೊಡುಗೆಗಳನ್ನು ಪರಿಚಯಿಸಿದರಲ್ಲದೇ, ಸಮ ಸಮಾಜದ ನಿರ್ಮಾಣದ ಕನಸನ್ನು ಸಾಕಾರಗೊಳಿಸಲು 16ನೇ ಶತಮಾನದಲ್ಲೇ ಪರಂಪರೆಯೊಳಗಿದ್ದುಕೊಂಡೇ ಸದ್ದಿಲ್ಲದೇ ಬಂಡಾಯವೆದ್ದವರು. ಬುದ್ಧ, ಬಸವ, ಗಾಂಧಿ, ಕುವೆಂಪು, ಅವರ ವಿಚಾರಧಾರೆಯಂತೆ ಕನಕರ ವಿಚಾರಧಾರೆಗಳು ಆರೋಗ್ಯಪೂರ್ಣ ಸಮಾಜವನ್ನು ನಿರ್ಮಾಣಮಾಡುವಲ್ಲಿ ಪೂರಕವಾಗಿವೆ ಎಂದರು.
ಎ.ವಿ. ಕಾಂತಮ್ಮ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಡಾ.ಜೆ. ಶೈಲಜಾ ಕುಮಾರಿ   ಅಧ್ಯಕ್ಷತೆ ವಹಿಸಿದ್ದರು.  ಕರ್ನಾಟಕದ ಪ್ರಸಿದ್ಧ ಸಂಗೀತ ವಿದುಷಿ ರಜನಿ ಗುರ್ಲಾ ಹೊಸೂರು ಕನಕದಾಸರ ಕೀರ್ತನೆಗಳನ್ನು ಮಧುರುವಾಗಿ ಹಾಡಿ ಪ್ರೇಕ್ಷಕರಿಗೆ ಸಂಗೀತದ ರಸದೌತಣ ಉಣಬಡಿಸಿದರು.
ವಿದ್ಯಾರ್ಥಿನಿಯರು ಕನಕದಾಸರನ್ನು ಕುರಿತಂತೆ ಕಾ.ತ. ಚಿಕ್ಕಣ್ಣನವರೊಂದಿಗೆ ಸಂವಾದ ನಡೆಸಿದರು. ಕಾಲೇಜಿನ ಬೋಧಕ, ಬೋಧಕೇತರ ವರ್ಗದವರು ಹಾಗೂ ವಿದ್ಯಾರ್ಥ್ಥಿನಿಯರು ಇದ್ದರು. ಸುಪ್ರೀತ ಪ್ರಾರ್ಥಿಸಿದರು. ಶೃತಿ ಸ್ವಾಗತಿಸಿದರು, ಪುಷ್ಪ ವಂದಿಸಿದವರು. ಡಾ.ಸಿ.ಚ. ಯತೀಶ್ವರ್ ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.