ಹಾಸನ

ಅತಿಥಿ ಉಪನ್ಯಾಸಕರ ಮುಷ್ಕರ; ಬೀದಿ ಪಾಲಾದ ವಿದ್ಯಾರ್ಥಿಗಳು

Published On :

ಕನ್ನಡಪ್ರಭ ವಾರ್ತೆ    ಹೊಳೆನರಸೀಪುರ    ಜ. 29
ಸರ್ಕಾರದ ಕುರುಡು ನೀತಿಯನ್ನು ವಿರೋಧಿಸಿ, ರಾಜ್ಯಾದ್ಯಂತ ಅತಿಥಿ ಉಪನ್ಯಾಸಕರುಗಳು ಕೈಗೊಂಡಿರುವ ಅನಿರ್ದಿಷ್ಟ ಮುಷ್ಕರವನ್ನು ಬೆಂಬಲಿಸಿ ಇಲ್ಲಿನ ಅತಿಥಿ ಉಪನ್ಯಾಸಕರು ಕೈಗೊಂಡಿರುವ ಮುಷ್ಕರದಿಂದಾಗಿ ಕಳೆದ ಇಪ್ಪತ್ತು ದಿನಗಳಿಂದ ಪಾಠ ಪ್ರವಚನಗಳು ನಡೆಯದೆ ವಿದ್ಯಾರ್ಥಿಗಳು ಅತಂತ್ರರಾಗಿರುವುದನ್ನು ಖಂಡಿಸಿ ತಕ್ಷಣ ವಿದ್ಯಾರ್ಥಿಗಳ ಭವಿಷ್ಯಕ್ಕೆ ಕುತ್ತಾಗದಂತೆ ಕ್ರಮಕೈಗೊಳ್ಳಬೇಕೆಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಎಬಿವಿಪಿ ನೇತ್ರತ್ವದಲ್ಲಿ ಬುಧವಾರ ಪಟ್ಟಣದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಒತ್ತಾಯ: ಅತಿಥಿ ಉಪನ್ಯಾಸಕರ ನಾನಾ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯಾದ್ಯಂತ ಮುಷ್ಕರ ನಡೆಸುತ್ತಿದ್ದು ಇದರಿಂದಾಗಿ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಪಾಠ ಪ್ರವಚನಗಳಿಗೆ ತೀವ್ರ ತೊಂದರೆಯಾಗಿದೆ, ಆದ್ದರಿಂದ ರಾಜ್ಯ ಸರ್ಕಾರ, ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಕೂಡಲೇ ಈಡೇರಿಸುವುದರ ಜೊತೆಗೆ ಅವರುಗಳ ಸೇವೆಯನ್ನು ಖಾಯಂಗೊಳಿಸುವಂತೆ ಒತ್ತಾಯಿಸಿದರು.
ತುರ್ತು ಕ್ರಮ ಕೈಗೊಳ್ಳಿ: ಪ್ರಸ್ತುತ ಕಾಲೇಜಿನಲ್ಲಿ ಖಾಯಂ ಉಪನ್ಯಾಸಕರುಗಳಿಗಿಂತ ಅತಿಥಿ ಉಪನ್ಯಾಸಕರುಗಳೇ ಅಧಿಕವಾಗಿರುವುದರಿಂದ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆ ಉಂಟಾಗಿದೆ. ವಿದ್ಯಾರ್ಥಿಗಳಿಗೆ ಆಗುತ್ತಿರುವ ತೊಂದರೆಯನ್ನು ಪರಿಗಣಿಸಿ ಸರ್ಕಾರ ತುರ್ತು ಕ್ರಮಕೈಗೊಳ್ಳುವಂತೆ ಆಗ್ರಹಪಡಿಸಿದರು.
ಹೋರಾಟ ಅನಿವಾರ್ಯ: ಪ್ರಸ್ತುತ ಮುಷ್ಕರ ನಿರತರಾಗಿರುವ ಅತಿಥಿ ಉಪನ್ಯಾಸಕರುಗಳ ಮುಷ್ಕರ ಹಿಂತೆಗೆಯುವಂತೆ ಕ್ರಮಕೈಗೊಂಡು ವಿದ್ಯಾರ್ಥಿಗಳ ಭವಿಷದತ್ತ ಗಮನ ಹರಿಸುವಂತೆ ಮನವಿ ಮಾಡಿದ ಅವರು, ಸರ್ಕಾರ ತಕ್ಷಣ ಕ್ರಮಕೈಗೊಳ್ಳದೆ ಹೋದಲ್ಲಿ ಉಗ್ರ ಹೋರಾಟ ಅನಿವಾರ್ಯವಾಗಲಿದೆ ಎಂದಿದ್ದಾರೆ.
ಪ್ರತಿಭಟನೆ ನೇತೃತ್ವವನ್ನು ಎಬಿವಿಪಿ ತಾಲೂಕು ಪ್ರಮುಖಖ್ಯೋಗಾನರಸಿಂಹ ಸೇರಿದಂತೆ ಮತ್ತಿತರರು ವಹಿಸಿದ್ದರು. ಇದೇ ಸಂದರ್ಭದಲ್ಲಿ ತಾಲೂಕಿನ ಶಿರೇಸ್ತೇದಾರ್ ಉಲಿವಾಲ ಮೋಹನ್ ಕುಮಾರ್ ಅವರಿಗೆ ಮನವಿ ಪತ್ರ ಅರ್ಪಿಸಲಾಯಿತು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.