ಅತಿಥಿ ಉಪನ್ಯಾಸಕರ ಪ್ರತಿಭಟನೆ
ಅರಕಲಗೂಡು: ಕಳೆದ ಜ. 22ರಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರುಗಳು ರಾಜ್ಯಾದ್ಯಂತ ನಡೆಸಿರುವ ಮುಷ್ಕರಕ್ಕೆ ಬೆಂಬಲ ಸೂಚಿಸಿ ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರು ಬುಧವಾರ ಸಾಮೂಹಿಕ ಪ್ರತಿಭಟನೆ ನಡೆಸಿ ಬೆಂಬಲ ವ್ಯಕ್ತಪಡಿಸಿದರು. ತಹಸೀಲ್ದಾರ್ಗೆ ಮನವಿ ಸಲ್ಲಿಸಿ ಸರ್ಕಾರ ಅಗತ್ಯ ಕ್ರಮ ಕೈಗೊಂಡು ಬೇಡಿಕೆ ಈಡೇರಿಸದಿದ್ದಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದ್ದಾರೆ.
ಪ್ರತಿಭಟನೆಗೆ ವಿದ್ಯಾರ್ಥಿಗಳ ಸಾಥ್
ಅರಕಲಗೂಡು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರುಗಳು ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿ ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಬುಧವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು. ಇಲ್ಲಿನ ಪ್ರಥಮ ದರ್ಜೆ ಕಾಲೇಜಿನಿಂದ ಮೆರವಣಿಗೆಯಲ್ಲಿ ತೆರಳಿದ ವಿದ್ಯಾರ್ಥಿಗಳು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರಲ್ಲದೇ ತಾಲೂಕು ಕಚೇರಿ ಬಳಿ ತೆರಳಿ ಕೆಲ ಕಾಲ ಧರಣಿ ನಡೆಸಿದರು. ವಿದ್ಯಾರ್ಥಿ ಮುಖಂಡರುಗಳಾದ ಮೋಹಿನ್ ಸಿದ್ದಿಕ್, ಕೃತಿಕಾ, ಲಾವಣ್ಯ, ದಿವ್ಯ, ವಿದ್ಯಾಶ್ರೀ ಹಾಗೂ ಇತರರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

