ಬೈಕ್ ರ್ಯಾಲಿಗೆ ನಗರಸಭಾಧ್ಯಕ್ಷೆ ಚಾಲನೆ
ಹಾಸನ: ಜೆಡಿಎಸ್ ಬೆಳೆಸೋಣ ದೇಶ ಉಳಿಸೋಣ ಎಂಬ ಯುವ ಚೇತನ ಸಮಾವೇಶದ ಅಂಗವಾಗಿ ನಗರದಲ್ಲಿ ಬುಧವಾರ ಯುವ ಜೆಡಿಎಸ್ ಕಾರ್ಯಕರ್ತರು ಬೈಕ್ ರ್ಯಾಲಿ ಮೂಲಕ ಬೆಂಗಳೂರಿಗೆ ತೆರಳಿದರು.
ಬೈಕ್ ರ್ಯಾಲಿಯನ್ನು ನಗರಸಭೆ ಅಧ್ಯಕ್ಷೆ ಶ್ರೀವಿದ್ಯಾ ಆನಂದ್ ನಗರದ ಹೇಮಾವತಿ ಪ್ರತಿಮೆ ಬಳಿ ಚಾಲನೆ ನೀಡಿದರು. ದೇಶ ಮತ್ತು ರಾಜ್ಯವನ್ನು ಅಧೋಗತಿಗೆ ಕೊಂಡೊಯ್ಯುತ್ತಿರುವ ಕಾಂಗ್ರೆಸ್ ಮತ್ತು ಬಿಜೆಪಿಗಳ ದುರಾಡಳಿತಿಂದಾಗಿ ದೇಶವನ್ನು ಯುವ ಚೇತನಾ ಸಮಾಜ ರಕ್ಷಿಸಬೇಕಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಪ್ರಬಲ ಪ್ರಾದೇಶಿಕ ಪಕ್ಷವಾಗಿರುವ ಜೆಡಿಎಸ್ನ್ನು ಇನ್ನಷ್ಟು ಬಲಗೊಳಿಸುವ ಅಗತ್ಯವಿದ್ದು, ಇದಕ್ಕೆ ಯುವಕರು ಕೈಜೋಡಿಸಲು ರಾಜ್ಯದ ಪ್ರತಿ ಕ್ಷೇತ್ರಗಳಲ್ಲಿ ಪಕ್ಷದ ಸಂಘಟನೆಗೆ ಯುವಕರ ಪಾತ್ರ ಅಮೋಘವಾದುದು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ಎಚ್.ಬಿ. ಗೋಪಾಲ್, ವಿಜಯಕುಮಾರ್, ಅಬೂಲ್ ಖಾಯಿಂ, ಸಮೀರ್, ಯುವ ಜೆಡಿಎಸ್ ರಾಜ್ಯ ಕಾರ್ಯದರ್ಶಿ ಹೊಂಗೆರೆ ರಘು ಹಾಗೂ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

