ಹಾಸನ

'ಮಾನಸಿಕ ಸದೃಢತೆಗೆ ಕ್ರೀಡೆ ಸಹಕಾರಿ'

Published On :

ಹಾಸನ: ವಿದ್ಯಾರ್ಥಿಗಳು ಶೈಕ್ಷಣಿಕವಾಗಿ, ಮಾನಸಿಕವಾಗಿ ಸದೃಢರಾಗಲು ಕ್ರೀಡೆಗಳು ಅವಶ್ಯಕವಾಗಿದೆ ಎಂದು ನಗರಸಭೆ ಸದಸ್ಯ ಯಶ್ವಂತ್ ತಿಳಿಸಿದ್ದಾರೆ.
ನಗರದ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಮಂಗಳವಾರ ನಡೆದ ಮಲೆನಾಡು ವಲಯ ಅಂತರ ಕಾಲೇಜು ಮಹಿಳಾ ವಾಲಿಬಾಲ್ ಹಾಗೂ ಟೆನಿಕಾಯ್ಟ್ ಸ್ಪರ್ಧೆಗೆ ಮಂಗಳವಾರ ಚಾಲನೆ ನೀಡಿ ಮಾತನಾಡಿದ ಅವರು,  ಯುವತಿಯರು ಕ್ರೀಡೆಯಲ್ಲಿ ಭಾಗವಹಿಸುವುದರಿಂದ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದಾಗಿದೆ ಎಂದರು.
ಕ್ರೀಡೆ ಬಗ್ಗೆ ಆಸಕ್ತಿ ಕಡಿಮೆಯಾಗುತ್ತಿರುವ ಇಂದಿನ ದಿನಗಳಲ್ಲಿ ಯುವ ಜನಾಂಗ ವಿದ್ಯಾರ್ಥಿ ಅವಧಿಯಲ್ಲಿ ಕ್ರೀಡೆಯಲ್ಲಿ ಪಾಲ್ಗೊಳ್ಳುವ ಮೂಲಕ ಕ್ರೀಡೆಗೆ ಹೆಚ್ಚು ಉತ್ತೇಜನ ಮಾಡಬೇಕು ಎಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಪ್ರೊ. ಎಚ್.ಎನ್. ರೂಪ್ ರಾಜ್ ಚಂದನ್ ಮಾತನಾಡಿ, ಶಿಕ್ಷಕರು ಹಾಗೂ ಪೋಷಕರು ಯುವಕರಿಗೆ ಕ್ರೀಡೆಯಲ್ಲಿ ಪಾಲ್ಗೊಳ್ಳುವಂತೆ ಸಲಹೆ ನೀಡಬೇಕು. ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡುವ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಕೆಲಸ ಮಾಡಬೇಕು ಎಂದು ತಿಳಿಸಿದರು.
ದ್ವಿತೀಯ ಸ್ಥಾನ: ಕ್ರೀಡಾಕೂಟದ ಟೆನಿಕಾಯ್ಟ್ ಪಂದ್ಯಾವಳಿಯಲ್ಲಿ ಹಾಸನದ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ತಂಡ ಪ್ರಥಮ ಹಾಗೂ ಹಾಸನದ ಸರ್ಕಾರಿ ಕಲಾ ಕಾಲೇಜಿನ ತಂಡ ದ್ವಿತೀಯ ಸ್ಥಾನ ಪಡೆದುಕೊಂಡರು. ವಾಲಿಬಾಲ್ ಪಂದ್ಯಾವಳಿಯಲ್ಲಿ ಹಾಸನದ ಸಂತ ಫಿಲೋಮಿನಾ ಕಾಲೇಜಿನ ತಂಡ ಪ್ರಥಮ ಮತ್ತು ಬೇಲೂರು ವೈ.ಡಿ.ಡಿ. ಸರ್ಕಾರಿ ಕಾಲೇಜಿನ ತಂಡ ದ್ವಿತೀಯ ಸ್ಥಾನ ಪಡೆದುಕೊಂಡರು.
ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಎಂ.ಎ. ಪ್ರಕಾಶ್, ಮಲೆನಾಡು ವಲಯ ಕ್ರೀಡಾಕೂಟದ ಸಂಚಾಲಕ ಟಿ.ಆರ್. ಮಹೇಂದ್ರ ಕುಮಾರ್, ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕರಾದ ನಾರಾಯಣ ಶೆಟ್ಟಿ, ದೇವರಸೇಗೌಡ, ಎನ್.ಎಸ್.ಎಸ್. ಅಧಿಕಾರಿ ಎಂ.ಕೆ. ಮಹೇಶ್, ಉಪನ್ಯಾಸಕ ಎಚ್.ಕೆ. ದಿಲೀಪ್ ಕುಮಾರ್, ಎಚ್.ಸಿ. ಪುಟ್ಟರಾಜಪ್ಪ ಹಾಗೂ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.