ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಪ್ರವೇಶ ಮಿತಿ ಹೆಚ್ಚಳಕ್ಕೆ ಕ್ರಮ
ಕನ್ನಡಪ್ರಭ ವಾರ್ತೆ ಹಾಸನ ಜ. 29
ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಪ್ರವೇಶ ಮಿತಿ ಹೆಚ್ಚಳಕ್ಕೆ ಕ್ರಮ ವಹಿಸಲಾಗುತ್ತಿದೆ ಎಂದು ವೈದ್ಯಕೀಯ ಶಿಕ್ಷಣ ರಾಜ್ಯ ಸಚಿವ ಡಾ. ಶರಣಪ್ರಕಾಶ. ಆರ್. ಪಾಟೀಲ್ ತಿಳಿಸಿದ್ದಾರೆ.
ವಿಧಾನ ಪರಿಷತ್ ಸದಸ್ಯ ಪಟೇಲ್ ಶಿವರಾಂ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಒಟ್ಟು 46 ವೈದ್ಯಕೀಯ ಕಾಲೇಜುಗಳಿದ್ದು, ಈ ಪೈಕಿ 12 ಸರ್ಕಾರಿ ವೈದ್ಯಕೀಯ ಕಾಲೇಜುಗಳು ಹಾಗೂ 34 ಖಾಸಗಿ ವೈದ್ಯಕೀಯ ಕಾಲೇಜುಗಳಿವೆ. ಇವುಗಳಲ್ಲಿ ಒಟ್ಟು 6755 ಎಂಬಿಬಿಎಸ್ ಸೀಟುಗಳಿದ್ದು, ಇವುಗಳ ಪೈಕಿ ಸರ್ಕಾರದ ಕಾಲೇಜುಗಳಲ್ಲಿ ಹಾಗೂ ಖಾಸಗಿ ಕಾಲೇಜುಗಳಲ್ಲಿ ಸರ್ಕಾರಿ ಕೋಟಾದಡಿ 2501 ಸೀಟುಗಳು ಹಾಗೂ ಕಳೆದ ವರ್ಷ 2013ರಲ್ಲಿ ಮಾಡಿರುವ ಪರಸ್ಪರ ಒಡಂಬಡಿಕೆಯಂತೆ ಖಾಸಗಿ ಕಾಲೇಜುಗಳಲ್ಲಿ 3941 ಸೀಟುಗಳು ಲಭ್ಯವಿರುವುದಾಗಿ ಹೇಳಿದ್ದಾರೆ.
ಖಾಸಗಿ ಮತ್ತು ಸರ್ಕಾರಿ ಕೋಟಾದಲ್ಲಿ ಮೆರಿಟ್ ಮಕ್ಕಳಿಗೆ ಹೆಚ್ಚಿನ ಸೀಟುಗಳನ್ನು ಒದಗಿಸುವ ನಿಟ್ಟಿನಲ್ಲಿ ಹಾಲಿ ಇರುವ ಸರ್ಕಾರಿ ಕಾಲೇಜುಗಳಲ್ಲಿ ಪ್ರವೇಶ ಮಿತಿಯನ್ನು ಹೆಚ್ಚಿಸಲು ಕ್ರಮ ವಹಿಸಲಾಗುತ್ತಿದ್ದು, ಇದರೊಂದಿಗೆ ಹೊಸದಾಗಿ ಸರ್ಕಾರಿ ವೈದ್ಯಕೀಯ ಕಾಲೇಜುಗಳನ್ನು 6 ಜಿಲ್ಲೆಗಳಲ್ಲಿ ಪ್ರಾರಂಭಿಸಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ರು. 45.65 ಕೋಟಿ ಬಿಡುಗಡೆ: ರಾಜ್ಯದಲ್ಲಿ 2013-14 ನೇ ಸಾಲಿನಲ್ಲಿ ಆರ್ಟಿಇ ಅಡಿಯಲ್ಲಿ ಒಟ್ಟು 73228 ಮಕ್ಕಳು ದಾಖಲಾಗಿದ್ದು, 2013-14 ನೇ ಸಾಲಿನಲ್ಲಿ ಆರ್ಟಿಇ ಅಡಿಯಲ್ಲಿ ಪ್ರಥಮ ಕಂತಾಗಿ ಎಲ್ಲಾ ಜಿಲ್ಲೆಗಳಿಗೆ ಒಟ್ಟು ರು. 45.65 ಕೋಟಿ ಬಿಡುಗಡೆ ಮಾಡಿರುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ತಿಳಿಸಿದ್ದಾರೆ.
ವಿಧಾನ ಪರಿಷತ್ ಸದಸ್ಯ ಪಟೇಲ್ ಶಿವರಾಂ ಕೇಳಿದ ಶ್ನೆಗೆ ಉತ್ತರಿಸಿರುವ ಸಚಿವರು, ಖಾಸಗಿ ಶಾಲೆಗಳು ಶಾಲಾಭಿವೃದ್ಧಿಗೆ ದೇಣಿಗೆ ಪಡೆಯಲು ನಿಯಮಗಳಲ್ಲಿ ಅವಕಾಶವಿದ್ದು ಆರ್ಟಿಇ ಅಡಿಯಲ್ಲಿ ದಾಖಲಾದ ಮಕ್ಕಳಿಗೆ ಶಾಲಾಭಿವೃದ್ಧಿಗೆ ಸರ್ಕಾರದಿಂದ ಹಣ ನೀಡಲಾಗುತ್ತಿಲ್ಲವೆಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

