ಪ್ರತ್ಯೇಕ ಅಪಘಾತ: ಮೂವರ ಸಾವು
ಹಾಸನ: ಜಿಲ್ಲೆಯ ಪ್ರತ್ಯೇಕ ಪ್ರಕರಣದಲ್ಲಿ ಅಪಘಾತದಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ಬುಧವಾರ ನಡೆದಿದೆ.
ಚನ್ನರಾಯಪಟ್ಟಣ ತಾಲ್ಲೂಕಿನ ಹಿರೀಸಾವೆ ಹೋಬಳಿ ಕಾವಲು ಹೊಸೂರು ಗ್ರಾಮ ವಾಸಿ ಮೂರ್ತಿ (48) ಸಾವನ್ನಪ್ಪಿದ ದುರ್ದೈವಿ. ಮೂರ್ತಿ ಬೈಕಿನಲ್ಲಿ ಹಿರೀಸಾವೆ ಎಚ್.ಸಿ.ಸರ್ಕಲಲ್ನ ಸಾರಿಗೆ ಸಂಸ್ಥೆ ಬಸ್ನಿಲ್ದಾಣದ ಎದುರು ಹೋಗುತ್ತಿದ್ದರು. ಆಗ ಹಿಂಬದಿಯಿಂದ ಬಂದ ಜಲ್ಲಿ ಲಾರಿ ಚಾಲಕನ ನಿರ್ಲಕ್ಷ್ಯತೆಯಿಂದ ಡಿಕ್ಕಿ ಮಾಡಿದ ಪರಿಣಾಮ ತೀವ್ರ ಗಾಯಗಳಾಗಿ ಮೂರ್ತಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಪ್ರತ್ಯಕ್ಷದರ್ಶಿ ಆರ್. ಮಗೇಶ್ ಹಿರೀಸಾವೆ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
ಇನ್ನೊಂದು ಪ್ರಕರಣದಲ್ಲಿ ಬೇಲೂರು ತಾಲ್ಲೂಕಿನ ಹಳೇಬೀಡು ಹೋಬಳಿ ಬ್ಯಾಡರಹಳ್ಳಿ ಗ್ರಾಮದ ವಾಸಿ ಚನ್ನಮ್ಮ (65) ಸಾವನ್ನಪ್ಪಿದ ದುರ್ದೈವಿ. ಅವರು ಮನೆಯ ಮುಂದೆ ಒಣಗಲು ಹಾಕಿದ್ದ ಬಟ್ಟೆಗಳನ್ನು ತೆಗೆದುಕೊಂಡು ಹೋಗುತ್ತಿದ್ದರು. ಈ ಕಾಲಕ್ಕೆ ಹಿಂಬದಿಯಿಂದ ಬಂದ ಟ್ರ್ಯಾಕ್ಟರ್ ಚಾಲಕನ ನಿರ್ಲಕ್ಷ್ಯತೆಯಿಂದ ಟ್ರ್ಯಾಕ್ಟರ್ನ ಚಕ್ರ ಚನ್ನಮ್ಮ ಮೇಲೆ ಹರಿದ ಪರಿಣಾಮ ತೀವ್ರ ಗಾಯಗಳಾಗಿದ್ದು ಚನ್ನಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರ ಸೊಸೆ ಜಯಲಕ್ಷ್ಮಮ್ಮ ಅವರು ಹಳೇಬೀಡು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
ಮತ್ತೊಂದು ಪ್ರಕರಣದಲ್ಲಿ ಅಕಲಗೂಡು ತಾಲ್ಲೂಕಿನ ಕೊಣನೂರು ಹೋಬಳಿ ಸುಳಗೋಡು ಸೋವುವಾರ್ ಗ್ರಾಮದ ನಿವಾಸಿ ಮಂಜೇಗೌಡ (45) ಸಾವನ್ನಪ್ಪಿದ್ದಾರೆ. ಇವರು ಬಾಮೈದುನ ಕೃಷ್ಣರ ಹೀರೋ ಹೋಂಡಾ ಸ್ಪ್ಲೆಂಡರ್ ಬೈಕ್ನಲ್ಲಿ ಕೊಣನೂರಿನಿಂದ ರಾಮನಾಥಪುರಕ್ಕೆ ಹೋಗಲು ಕೊಣನೂರು-ರಾಮನಾಥಪುರ ರಸ್ತೆ, ಬಿಎಸ್ಎಸ್ ಹೈಸ್ಕೂಲ್ ಮುಂದೆ ಬೈಕ್ ನ ಚಾಲಕನ ನಿರ್ಲಕ್ಷತೆಯಿಂದ ಬೈಕ್ ನಿಯಂತ್ರಣ ತಪ್ಪಿ ಬೈಕ್ ಹಿಂಬದಿ ಕುಳಿತಿದ್ದ ಮಂಜೇಗೌಡ ರವರು ರಸ್ತೆ ಬಿದ್ದು ತೀವ್ರ ಗಾಯವಾಗಿದೆ.
ಚಿಕಿತ್ಸೆಗಾಗಿ ಕೊಣನೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಫಲಕಾರಿಯಾಗದೇ ಮಂಜೇಗೌಡ ಮೃತಪಟ್ಟಿದ್ದಾರೆ. ಕೃಷ್ಣ ಅವರು ಕೊಣನೂರು ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

