ಹಾಸನ

ಶಿಕ್ಷಣ ಸಹಾಯ ಹಸ್ತ ಕಾರ್ಯಕ್ರಮಕ್ಕೆ ಚಾಲನೆ

Published On :

ಹೊಳೆನರಸೀಪುರ: ಯುವ ಕಾಂಗ್ರೆಸ್ ಸಮಿತಿಯ ತಾಲೂಕು ಘಟಕದ ವತಿಯಿಂದ ರಾಜ್ಯ ಸರ್ಕಾರವು ರೂಪಿಸಿರುವ ಉಚಿತ ಹಾಗೂ ಕಡ್ಡಾಯ ಶಿಕ್ಷಣವು (ಆರ್ಟಿಇ), ಅರ್ಹ ಪೋಷಕರಿಗೆ ತಲುಪುವ ನಿಟ್ಟಿನಲ್ಲಿ ಮಾಹಿತಿ ಹಾಗೂ ಸಹಕಾರ ನೀಡುವ ಉದ್ದೇಶದಿಂದ ಬುಧವಾರ ಶಿಕ್ಷಣ ಸಹಾಯ ಹಸ್ತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಅರ್ಜಿ, ಮಾಹಿತಿ ಪತ್ರ ವಿತರಣೆ: ಶಿಕ್ಷಣ ಸಹಾಯ ಹಸ್ತ ಕಾರ್ಯಕ್ರಮದಡಿಯಲ್ಲಿ ತಾಲೂಕು ಯುವ ಕಾಂಗ್ರೆಸ್ ಸಮಿತಿಯು ಆರ್ಟಿಇ ಬಗ್ಗೆ ಅರಿವು ಮೂಡಿಸಿ, ತಾಲೂಕಿನಲ್ಲಿರುವ ಖಾಸಗಿ ಶಿಕ್ಷಣ ಸಂಸ್ಥೆಗಳ ಮಾಹಿತಿ, ಸದರಿ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಸರ್ಕಾರದ ನಿಯಮದಡಿಯಲ್ಲಿ ಲಭ್ಯವಿರುವ ಸೀಟುಗಳ ಸಂಖ್ಯೆ, ಸಂಬಂಧಿಸಿದಂತೆ ಪೋಷಕರು ನೀಡಬೇಕಾದ ಮಾಹಿತಿಗಳ ವಿವರಗಳ ಕುರಿತಂತೆ ಮಾಹಿತಿ ನೀಡಲಾಯಿತು. ಅಲ್ಲದೇ ಆರ್ಟಿಇ ಅಡಿಯಲ್ಲಿ ಖಾಸಗಿ ಶಾಲೆಗಳಿಗೆ ತಮ್ಮ ಮಕ್ಕಳನ್ನು ದಾಖಲಿಸಲು ಇಚ್ಛಿಸುವ ಪೋಷಕರಿಗೆ ಉಚಿತವಾಗಿ ಅರ್ಜಿಗಳನ್ನು ವಿತರಿಸಲಾಯಿತಲ್ಲದೇ, ಮಾಹಿತಿ ಪತ್ರವನ್ನೂ ನೀಡಲಾಯಿತು.
ಈ ಸಂದರ್ಭದಲ್ಲಿ ತಾಲೂಕು ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ವಳಂಬಿಗೆ ನಾರಾಯಣ್, ತಾಲೂಕು ಯುವ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷ ಸೋಮೇಗೌಡ, ಯುವ ಕಾಂಗ್ರೆಸ್ಮುಖಂಡ ಮಳಲಿ ಶರತ್, ರಾಜೀವ್ ಗಾಂಧಿ ಪಂಚಾಯತ್ರಾಜ್ ಸಂಘಟನೆಯ ತಾಲೂಕು ಅಧ್ಯಕ್ಷ ಬೀಚೇನಹಳ್ಳಿ ಬಸವರಾಜ್, ಯುವ ಕಾಂಗ್ರೆಸ್ ಕಾರ್ಯಕರ್ತರಾದ ಜಗನ್ನಾಥ್, ಯೋಗೇಶ್ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.