ಅಕ್ರಮ ಮರಳು ಸಾಗಣೆ: 7 ಜನರ ಬಂಧನ
ಹಾಸನ: ಜಿಲ್ಲೆಯ ಪ್ರತ್ಯೇಕ ಪ್ರಕರಣದಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ 7 ಜನರ ನ್ನು ಬಂಧಿಸಿದ್ದು, 11 ಲಾರಿಗಳನ್ನು ವಶಪಡಿಸಿಕೊಂಡಿರುವ ಘಟನೆ ಬುಧವಾರ ನಡೆದಿದೆ.
ಆಲೂರು ಪೊಲೀಸರಿಗೆ ಬಂದ ಮಾಹಿತಿ ಮೇರೆಗೆ ಸಕಲೇಶಪುರ ಕಡೆಯಿಂದ ಅಕ್ರಮವಾಗಿ ಲಾರಿಗಳಲ್ಲಿ ಮರಳು ಸಾಗಿಸುತ್ತಿದ್ದಾದ ಪೊಲೀಸರು ಆಲೂರು ತಾಲ್ಲೂಕಿನ ಬಾಚನಹಳ್ಳಿ ಕೆರೆ ಏರಿಯ ಮೇಲೆ ಲಾರಿಗಳಿಗೆ ಮರಳನ್ನು ತುಂಬಿಸಿಕೊಂಡು ನಿಂತಿದ್ದು, ವಾಹನಗಳನ್ನು ತಪಾಸಣೆ ನಡೆಸುತ್ತಿದ್ದಾಗ ಲಾರಿಯ ಚಾಲಕರು ತಪಾಸಣೆ ನಡೆಸದಂತೆ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದರಿಂದ ಸತೀಶ್ (22), ಆಶೋಕ (22), ಅಲ್ತಾಫ್ (27), ಅಜಯ್ ಕುಮಾರ್ (22) ಮ್ತತು ವೆಂಕಟರಾಜು (23) ಎಂಬವರನ್ನು ಬಂಧಿಸಿದ್ದು, 9 ಲಾರಿಗಳನ್ನು ವಶಪಡಿಸಿಕೊಂಡಿದ್ದಾರೆ. ಆಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಮತ್ತೊಂದು ಪ್ರಕರಣದಲ್ಲಿ ಸಕಲೇಶಪುರ ನಗರ ಠಾಣೆಯ ಸಿಬ್ಬಂದಿಗಳು ಗಸ್ತು ಕರ್ತವ್ಯದಲ್ಲಿದ್ದಾಗ ಸಕಲೇಶಪುರಪಟ್ಟಣದ ಬಿ.ಎಂ. ರಸ್ತೆಯಲ್ಲಿ ವಾಹನಗಳನ್ನು ತಪಾಸಣೆ ನಡೆಸುತ್ತಿದ್ದಾಗ ಅಕ್ರಮವಾಗಿ ಮಂಗಳೂರು ಕಡೆಯಿಂದ ಬಂದ 2 ಲಾರಿಗಳನ್ನು ವಶಪಡಿಸಿಕೊಂಡು ದೇವರಾಜು (36) ಮತ್ತು ಬಸವರಾಜು (27) ಎಂಬವರನ್ನು ಬಂಧಿಸಿದ್ದು, ಸಕಲೇಶಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

