ಇಂದು- ನಾಳೆ ನೀರು ವ್ಯತ್ಯಯ
ಹಾಸನ: ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಇರುವುದರಿಂದ ಜ. 31 ಮತ್ತು ಫೆ.1ರಂದು ನಗರಕ್ಕೆ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ನಗರಸಭೆಯ ಆಯುಕ್ತ ಕೃಷ್ಣಮೂರ್ತಿ ತಿಳಿಸಿದ್ದಾರೆ. ನಗರಕ್ಕೆ ನೀರು ಸರಬರಾಜು ಮಾಡುವ ಗೊರೂರು ನೀರು ಸರಬರಾಜು ಮಾರ್ಗದಲ್ಲಿನ ಹಾಸನ - ಅರಕಲಗೂಡು 66 ಕೆ.ವಿ ವಿದ್ಯುತ್ ಮಾರ್ಗದ ಮಧ್ಯೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿ., ಹಾಸನ ವತಿಯಿಂದ 66 ಕೆ.ವಿ ವಿದ್ಯುತ್ ಗೋಪುರ ಹಾಕಲು ಉದ್ದೇಶಿಸಲಾಗಿದ್ದು ಜ. 31ರಂದು ಬೆಳಗ್ಗೆ 9.30ರಿಂದ ಸಂಜೆ 4ರವೆರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಈ ಹಿನ್ನೆಲೆಯಲ್ಲಿ ಜ.31 ಮತ್ತು ಫೆ. 1ರಂದು ಗೊರೂರು ನೀರು ಸರಬರಾಜು ಘಟಕದಿಂದ ಹಾಸನ ನಗರಕ್ಕೆ ನೀರು ಸರಬರಾಜು ಮಾಡುವಲ್ಲಿ ವ್ಯತ್ಯಯವಾಗುತ್ತದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

