ಜೂಜು: 10 ಜನರ ಬಂಧನ
ಹಾಸನ: ಜಿಲ್ಲೆಯ ಪ್ರತ್ಯೇಕ ಪ್ರಕರಣದಲ್ಲಿ ಜೂಜಾಡುತ್ತಿದ್ದ 10 ಜನರನ್ನು ಬಂಧಿಸಿದ್ದು, 6400 ರು.ಗಳನ್ನು ವಶಪಡಿಸಿಕೊಂಡಿರುವ ಘಟನೆ ಬುಧವಾರ ನಡೆದಿದೆ.
ಚನ್ನರಾಯಪಟ್ಟಣ ತಾಲ್ಲೂಕಿನ ನುಗ್ಗೇಹಳ್ಳಿ ಹೋಬಳಿ, ಸಂತೆಶಿವರ ಗ್ರಾಮದ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಪಕ್ಕ ಸಾಜನಿಕ ಸ್ಥಳದಲ್ಲಿ ಅಂದರ್ ಬಾಹರ್ ಜೂಜಾಡುತ್ತಿದ್ದಾಗ ಪೊಲೀಸರು ದಾಳಿ ನಡೆಸಿ ನಾಗರಾಜು (56), ರವಿ (46), ಭುವನೇಶ್ (52), ರಾಮಲಿಂಗಪ್ಪ (64), ತಿಮ್ಮಯ್ಯ (64), ಸ್ವಾಮಿ (40) ಮತ್ತು ತಮ್ಮಯಣ್ಣ ಎಂಬವರನ್ನು ಬಂಧಿಸಿದ್ದು, ಜೂಜಾಟದಲ್ಲಿ ಪಣಕ್ಕಿಟ್ಟಿದ್ದ 4500 ರು. ನಗದನ್ನು ವಶಪಡಿಸಿಕೊಂಡು ನುಗ್ಗೇಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮತ್ತೊಂದು ಪ್ರಕರಣದಲ್ಲಿ ಹಾಸನ ತಾಲ್ಲೂಕಿನ ದುದ್ದ ಹೋಬಳಿ, ಕೋರವಂಗಲ ಗ್ರಾಮದ ರಾಮಚಂದ್ರ ರವರ ಅಂಗಡಿ ಪಕ್ಕದ ಮೈದಾನದಲ್ಲಿ ಅಂದರ್ ಬಾಹರ್ ಜೂಜಾಟಾಡುತ್ತಿದ್ದಾಗ ಪೊಲೀಸರು ದಾಳಿ ನಡೆಸಿ ಮಂಜೇಗೌಡ (31) ಮತ್ತು ಪುನಿತ್ (25) ಎಂಬವರನ್ನು ಬಂಧಿಸಿದ್ದು, ಜೂಜಾಟದಲ್ಲಿ ಪಣಕ್ಕಿಟ್ಟಿದ್ದ ಸುಮಾರು 700 ರು. ನಗದನ್ನು ವಶಪಡಿಸಿಕೊಂಡು, ದುದ್ದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನೊಂದು ಪ್ರಕರಣದಲ್ಲಿ ಹಾಸನದ ಶ್ರೀನಗರ ರಸ್ತೆ ಬದಿಯಲ್ಲಿ ಇರುವ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ನ ಸ್ಟೇರ್ಕೇಸ್ನ ಬಳಿ ಸಾರ್ವಜನಿಕರನ್ನು ವಂಚಿಸುವ ಉದ್ದೇಶದಿಂದ 1 ರು. ಹಣಕ್ಕೆ 80 ರು. ಕೊಡುವುದಾಗಿ ಮಟ್ಕಾ- ಜೂಜಾಟಾಡುತ್ತಿದ್ದಾಗ ಡಿಸಿಐಬಿ ಘಟಕ ಪೊಲೀಸರಿಗೆ ಬಂದ ಮಾಹಿತಿ ಮೇರೆಗೆ ದಾಳಿ ನಡೆಸಿ ಮಟ್ಕಾ-ಜೂಜಾಟಾಡುತ್ತಿದ್ದ ದಸ್ತಗಿರ್ (40) ಎಂಬವನನ್ನು ಬಂಧಿಸಿದ್ದು, ಮಟ್ಕಾ-ಜೂಜಾಟದಲ್ಲಿ ಪಣಕ್ಕಿಟ್ಟಿದ್ದ ಸುಮಾರು 1200 ರು. ನಗದನ್ನು ವಶಪಡಿಸಿಕೊಂಡು, ಹಾಸನ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

