ಹಾಸನ

'ಖಾತ್ರಿ'ಯಡಿ ಫಲಾನುಭವಿಗಳ ಆಯ್ಕೆ ಸೂಕ್ತವಾಗಿಲ್ಲ: ಟೀಕೆ

Published On :

ಅರಸೀಕೆರೆ: ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಫಲಾನುಭವಿಗಳಿಗೆ ಪ್ರಾರಂಭ ಪತ್ರ ವಿತರಿಸುವ ವೇಳೆ ಸರ್ಕಾರದ ನೀತಿ ನಿಯಮಗಳಂತೆ ಸಮರ್ಪಕವಾಗಿ ಫಲಾನುಭವಿಗಳನ್ನು ಆಯ್ಕೆ ಮಾಡಿಕೊಂಡಿಲ್ಲ ಎಂದು ಇತ್ತೀಚೆಗೆ ನಡೆದ ತಾಲೂಕು ಪಂಚಾಯ್ತಿ ಸಭೆಯಲ್ಲಿ ಸದಸ್ಯರು ಟೀಕಿಸಿದರು
ಸಭೆಯಲ್ಲಿ ತಾಪಂ ಸದಸ್ಯ ಬಿ.ಆರ್. ಜಯಣ್ಣ ಮಾತನಾಡಿ, ಗ್ರಾಮ ಪಂಚಾಯ್ತಿಗಳು  ಗ್ರಾಮಸಭೆ ಕರೆದು ರೈತಾಪಿ ಯೋಜನೆಯ ಮಹತ್ವವನ್ನು ವಿವರಿಸಿ ಫಲಾನುಭವಿಗಳನ್ನು ಆಯ್ಕೆ ಮಾಡದೆ ಲೋಪವೆಸಗಿದ್ದಾರೆ. ಮಾರ್ಚ್ ತಿಂಗಳು ಸಮೀಪಿಸುತ್ತಿದ್ದು ಆತುರಾತುರವಾಗಿ ಕಾಮಗಾರಿ ಪೂರ್ಣಗೊಳಿಸಲು ಮುಂದಾಗುತ್ತಿರುವುದು ಸರಿಯಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ಫಲಾನುಭವಿಗಳ ಆಯ್ಕೆಯಲ್ಲಿಯೇ ಲೋಪ ಸಂಭವಿಸಿದೆ. ಸಂಬಂಧಿಸಿದ ಕೆಲ ಗ್ರಾಪಂಗಳಲ್ಲಿ ಗ್ರಾಮಸಭೆಗಳನ್ನು ನಡೆಸಿಲ್ಲ. ಅಧಿಕಾರಿಗಳು ಸೂಕ್ತ ಮಾಹಿತಿ ನೀಡಿಲ್ಲ. ಇಂತಹ ಘಟನೆಗಳ ನಡುವೆ ಯೋಜನೆ ಸಮರ್ಪಕವಾಗಿ ಅನುಷ್ಠಾನಗೊಳ್ಳಲು ಸಾಧ್ಯವೇ ಎಂದು ಪ್ರಶ್ನಿಸಿದರು. ಇದಕ್ಕೆ ದನಿಗೂಡಿಸಿದ ರೈತ ಮುಖಂಡರು, ಜಲಾನಯನ ಇಲಾಖೆಯ ಅಧಿಕಾರಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಎಂದು ಆಕ್ರೋಶ ವ್ಯಕ್ತಪಡಿಸಿದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.