ಪ್ರಕರಣ ಇತ್ಯರ್ಥಕ್ಕೆ ಅವಕಾಶ
ಸಕಲೇಶಪುರ: ಜನತಾ ನ್ಯಾಯಾಲಯದಲ್ಲಿ ವ್ಯಾಜ್ಯಗಳನ್ನು ರಾಜಿ ಪಂಚಾಯ್ತಿ ಮೂಲಕ ಇತ್ಯರ್ಥಗೊಳಿಸಿಕೊಳ್ಳಲು ಮಾ. 27ರವರೆಗೆ ಅವಕಾಶವಿದೆ ಎಂದು ಸಿವಿಲ್ ನ್ಯಾಯಾಧೀಶೆ ಎಚ್.ಎ. ಶಿಲ್ಪಾ ತಿಳಿಸಿದರು.
ತಾಲೂಕು ಕಾನೂನು ಸೇವಾಸಮಿತಿ ಹಾಗೂ ವಕೀಲರ ಸಂಘ, ಪಟ್ಟಣದ ನ್ಯಾಯಾಲಯ ಆವರಣದಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಕಾನೂನು ಮಾಹಿತಿ ಶಿಬಿರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಇತ್ಯರ್ಥ್ಯಕ್ಕೆ ಪ್ರಯತ್ನ: ಹಲವು ವರ್ಷಗಳಿಂದ ದೇಶದ ಅನೇಕ ನ್ಯಾಯಾಲಯಗಳಲ್ಲಿ 35 ಲಕ್ಷಕ್ಕೂ ಹೆಚ್ಚು ಪ್ರಕರಣಗಳು ಕಳೆದ ಹಲವಾರು ವರ್ಷಗಳಿಂದ ಇತ್ಯರ್ಥವಾಗದೆ ಬಾಕಿ ಉಳಿದಿವೆ. ಇಂತಹ ಪ್ರಕರಣಗಳಿಂದ ನ್ಯಾಯಾಲಯಗಳಿಗೆ ಹೆಚ್ಚುವ ಒತ್ತಡಗಳನ್ನು ಕಡಿಮೆ ಮಾಡಲು, ಜನತಾ ನ್ಯಾಯಾಲಯಗಳಲ್ಲಿ ರಾಜಿ ಮೂಲಕ ಶೀಘ್ರ ಇತ್ಯರ್ಥಗೊಳಿಸಲು ಪ್ರಯತ್ನಿಸಲಾಗುವುದು ಎಂದರು.
ಈಗಾಗಲೇ ಇದರಿಂದ ಅನೇಕ ಪ್ರಕರಣಗಳು ಇತ್ಯರ್ಥಗೊಂಡಿವೆ. ಇಂದಿನಿಂದ ಮುಂದಿನ ಮಾ. 27ರವರೆಗೆ ಸತತವಾಗಿ ಇಂತಹ ರಾಜಿ ಪಂಚಾಯ್ತಿಯ ಮೂಲಕ ವ್ಯಾಜ್ಯ ಇತ್ಯರ್ಥಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಅವರು ಹೇಳಿದರು.
ಉದ್ವೇಗ ಹಾಗೂ ಸಿಟ್ಟಿನಿಂದ ಉಂಟಾದ ವ್ಯಾಜ್ಯಗಳು ನ್ಯಾಯಾಲಯಕ್ಕೆ ಹೋಗುವುದರಿಂದ ಪ್ರತಿಯೊಬ್ಬರ ಮನಸ್ಸಿನ ನೆಮ್ಮದಿ ಹಾಳಾಗುವುದರ ಜೊತೆಗೆ ಹಣ ಮತ್ತು ಸಮಯ ವ್ಯರ್ಥ್ಥವಾಗುತ್ತದೆ. ಇದರಿಂದ ಯಾರಿಗೂ ಪ್ರಯೋಜನವಾಗುವುದಿಲ್ಲ ಎಂದು ವಕೀಲರ ಸಂಘದ ಕಾರ್ಯದರ್ಶಿ ಆನ್.ಎನ್. ಕೃಷ್ಣಮೂರ್ತಿ ಹೇಳಿದರು. ಹಿರಿಯ ಸಿವಿಲ್ ನ್ಯಾಯಾಧೀಶ ಎನ್.ಆರ್. ಲೋಕಪ್ಪ ಕಾರ್ಯಕ್ರಮ ಉದ್ಘಾಟಿಸಿದರು. ನೋಂದಣಿ ಕಾಯ್ದೆ ಬಗ್ಗೆ ವಕೀಲ ಬಿ. ಪರಮೇಶ್ವರ, ಜೀವನಾಂಶ ಮತ್ತು ಕೌಟುಂಬಿಕ ದೌರ್ಜನ್ಯ ಕಾಯ್ದೆ ಬಗ್ಗೆ ಶಿವಪ್ರಕಾಶ್, ಮಾನವ ಹಕ್ಕುಗಳ ಬಗ್ಗೆ ಯು.ಟಿ. ಮಲ್ಲಪ್ಪ ಮಾಹಿತಿ ನೀಡಿದರು.
ಇದೇ ಸಂದರ್ಭದಲ್ಲಿ, ಹುತಾತ್ಮ ದಿನಾಚರಣೆ ಅಂಗವಾಗಿ ಮಹಾತ್ಮ ಗಾಂಧಿ ಅವರ ಭಾವಚಿತ್ರಕ್ಕೆ ಹೂಗುಚ್ಛ ಇರಿಸಿ, ಗೌರವ ಸಸಲ್ಲಿಸಿದ ನಂತರ, ಅವರ ಆತ್ಮಕ್ಕೆ ಶಾಂತಿ ಕೋರಿ ಎರಡು ನಿಮಿಷ ಮೌನ ಆಚರಿಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

