ಹೊಳೆನರಸೀಪುರದಲ್ಲಿ ಬಿಎಸ್ಪಿ ಪ್ರತಿಭಟನೆ
ಹೊಳೆನರಸೀಪುರ: ಬಹುಜನ ಸಮಾಜ ಪಕ್ಷದ ತಾಲೂಕು ಘಟಕದ ವತಿಯಿಂದ ವಿ.ಬಾಲಸುಬ್ರಹ್ಮಣ್ಯನ್ ಸಮಿತಿ ವರದಿಯಂತೆ ಬಗರ್ ಹುಕುಂ ಸಾಗುವಳಿಯನ್ನು ಸಕ್ರಮಗೊಳಿಸಿ ಭೂ ರಹಿತರಿಗೆ ಭೂಮಿ ನೀಡುವಂತೆ ಒತ್ತಾಯಿಸಿ, ತಾಲೂಕು ಕಚೇರಿ ಮುಂದೆ ಧರಣಿ ಪ್ರತಿಭಟನೆ ನಡೆಸಲಾಯಿತು.
ಸಮಿತಿಯ ಜಿಲ್ಲಾ ಉಪಾಧ್ಯಕ್ಷ ಎಂ.ಸಿ. ಶಿವಣ್ಣ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ನಂತರ ಮಾತನಾಡಿದ ಅವರು, ಸ್ವಾತಂತ್ರ್ಯ ಬಂದು ಅರವತ್ತೈದು ವರ್ಷಗಳು ಕಳೆದು ಹಲವು ಸರ್ಕಾರಗಳು ಆಳಿದರೂ ಕೂಡ ಹಿಂದುಳಿದವರು ಹಾಗೂ ದಲಿತರ ಕನಿಷ್ಟ ಆಶಯಗಳನ್ನು ಈಡೇರಿಸುವಲ್ಲಿ ಸರ್ಕಾರಗಳು ಸಂಪೂರ್ಣ ವೈಫಲ್ಯ ಕಂಡಿದೆ.
ಆದ್ದರಿಂದ ನಮ್ಮಗಳ ಮೂಲಭೂತ ಹಕ್ಕುಗಳನ್ನು ಪೂರೈಸಿಕೊಡುವಂತೆ ಆಗ್ರಹ ಪಡಿಸಿದರು.
ಪ್ರತಿಭಟನೆ ನಂತರ ಬಹುಜನ ಸಮಾಜ ಪಾರ್ಟಿಯ ಮುಖಂಡರು ಮನವಿ ಪತ್ರವನ್ನು ತಹಸೀಲ್ದಾರ್ ಅವರಿಗೆ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಎಚ್.ಸಿ. ಜಗದೀಶ್, ಕೋಡಿಹಳ್ಳಿ ಜಗದೀಶ್, ಮಹೇಶ್, ಪ್ರಕಾಶ್ ಸೇರಿದಂತೆ ಪಕ್ಷದ ಕಾರ್ಯಕರ್ತರು ಇದ್ದರು.
ಸಕಲೇಶಪುರದಲ್ಲಿ ಕಾರ್ಯಕರ್ತರ ಧರಣಿ
ಸಕಲೇಶಪುರ: ಬಗರ್ಹುಕುಂ ಸಾಗುವಳಿ ಸಕ್ರಮಗೊಳಿಸಿ ಭೂ ರಹಿತರಿಗೆ ಭೂಮಿ ಕೊಡುವಂತೆ ಆಗ್ರಹಿಸಿ ಬಹುಜನ ಸಮಾಜ ಪಕ್ಷ (ಬಿಎಸ್ಪಿ) ವತಿಯಿಂದ ತಹಸೀಲ್ದಾರ್ ಕಚೇರಿ ಮುಂದೆ ಪ್ರತಿಭಟನಾ ಧರಣಿಯನ್ನು ನಡೆಸಲಾಯಿತು. ಬಿಎಸ್ಪಿ ಮುಖಂಡರಾದ ಲಕ್ಷ್ಮಣ್ ಕೀರ್ತಿ, ಕುಮಾರ್ ಗೌರವ್, ಗೋಪಾಲ್, ಪುಟ್ಟರಾಜು, ಜಯವರ್ಧನೆ, ಕೆ.ಬಿ. ರವಿ ಮುಂತಾದವರು ಇದ್ದರು.
'ರಾಜ್ಯ ಸರ್ಕಾರ ದಲಿತ ವಿರೋಧಿ'
ಬೇಲೂರು: ರಾಜ್ಯ ಸರ್ಕಾರ ದಲಿತ ವಿರೋಧಿ ನೀತಿ ಅನುಸರಿಸುವ ಮೂಲಕ ದಲಿತರನ್ನು ದಮನ ಮಾಡಲು ಹೊರಟಿದೆ ಎಂದು ಬಹುಜನ ಸಮಾಜ ಪಾರ್ಟಿಯ ಮುಖಂಡ ಗಂಗಾಧರ್ ಬಹುಜನ್ ಆರೋಪಿಸಿದರು.
ಬಹುಜನ ಸಮಾಜ ಪಾರ್ಟಿಯಿಂದ ತಾಲೂಕು ಕಚೇರಿ ಮುಂಭಾಗದಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಪ್ರತಿಭಟನಾ ಧರಣಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಪ್ರತಿಭಟನೆಯಲ್ಲಿ ತಾಲೂಕು ಅಧ್ಯಕ್ಷ ಎನ್. ಯೋಗೀಶ್, ಜಿಲ್ಲಾ ಉಪಾಧ್ಯಕ್ಷ ರಾಜು, ಬೆಳ್ಳೋಟ್ಟೆರಾಜು ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

