ಆದರ್ಶ ವಿವಾಹಕ್ಕೆ ರು. 10,000 ಪ್ರೋತ್ಸಾಹ ಧನ
ಹಾಸನ: ಆದರ್ಶ ವಿವಾಹ ಯೋಜನೆಯಡಿ ವಿವಾಹವಾಗುವ ವಧುವಿನ ಹೆಸರಿಗೆ 10,000 ರು. ಗಳನ್ನು 2 ವರ್ಷಗಳಿಗೆ ಠೇವಣಿ ರೂಪದಲ್ಲಿ ಪ್ರೋತ್ಸಾಹಧನ ನೀಡಲಾಗುತ್ತದೆ ಎಂದು ಅಪರ ಜಿಲ್ಲಾಧಿಕಾರಿ ಡಾ. ಹೆಚ್.ಎನ್. ಗೋಪಾಲಕೃಷ್ಣ
ತಿಳಿಸಿದ್ದಾರೆ.
ನಗರ ಪ್ರದೇಶಗಳಲ್ಲಿ ಕನಿಷ್ಠ 25 ಜೋಡಿ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ ಕನಿಷ್ಠ 10 ಜೋಡಿ ವಿವಾಹಗಳು ನಡೆದಿರುವ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ವಿವಾಹವಾದವರು ಮಾತ್ರ ಈ ಯೋಜನೆಯ ಅನುಕೂಲ ಪಡೆಯಲು ಅರ್ಹತೆ ಹೊಂದಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಧಿಕಾರಿಗಳ ಕಚೇರಿಯ ಸಾಮಾಜಿಕ ಭದ್ರತಾ ಯೋಜನೆಯ ಶಾಖೆಯನ್ನು ಸಂಪರ್ಕಿಸುವಂತೆ ಅವರು ತಿಳಿಸಿದ್ದಾರೆ.
ಪ್ರಾಥಮಿಕ, ಪ್ರೌಢಶಾಲೆ ಅತಿಥಿ ಶಿಕ್ಷಕರಿಗೆ ಅರ್ಜಿ
ಹೊಳೆನರಸೀಪುರ: ತಾಲೂಕಿನಲ್ಲಿ ಖಾಲಿ ಇರುವ ಪ್ರಾಥಮಿಕ ಮತ್ತು ಪ್ರೌಢಶಾಲಾ ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ಆಯ್ಕೆ ಮಾಡಿಕೊಳ್ಳಲು ಆರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಇಲ್ಲಿನ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಶಿವಮಾದಪ್ಪ ತಿಳಿಸಿದ್ದಾರೆ. ತಾಲೂಕಿನ ಬಹಳಷ್ಟು ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಶಿಕ್ಷಕರುಗಳ ಕೊರತೆಯಿದೆ. ವಿದ್ಯಾರ್ಥಿಗಳ ಪಾಠ ಪ್ರವಚನಗಳಿಗೆ ತೊಂದರೆ ಉಂಟಾಗಿದೆ. ಆದ್ದರಿಂದ ವಿದ್ಯಾರ್ಥಿಗಳ ಭವಿಷ್ಯವನ್ನು ಉಜ್ವಲಗೊಳಿಸುವ ನಿಟ್ಟಿನಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಖಾಲಿ ಇರುವ ಶಿಕ್ಷಕರ ಸ್ಥಾನಕ್ಕೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಇಲಾಖೆ ನಿರ್ಧರಿಸಿದೆ ಎಂದು ತಿಳಿಸಿದ್ದಾರೆ. ಅತಿಥಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸಲು ಇಚ್ಚಿಸುವ ಅರ್ಹರು ಜು. 7ರ ಶನಿವಾರದ ಒಳಗೆ ತಮ್ಮ ಅರ್ಜಿಗಳನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ತಲುಪಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಸಂಪರ್ಕಿಸಲು ಅವರು ಕೋರಿದ್ದಾರೆ.
ಅಕ್ರಮ ಮರಳು ಸಾಗಣೆ ತಡೆಗೆ ಕ್ರಮ
ಹಾಸನ: ಜಿಲ್ಲೆಯಲ್ಲಿ ಜಿಲ್ಲಾ ಗಣಿ ಮತ್ತು ಭೂವಿಜ್ಞಾನ ಕಚೇರಿಯಿಂದ 2013-14 ನೇ ಸಾಲಿನಲ್ಲಿ ಅನಧಿಕೃತ ಮರಳು ಸಾಗಣಿಯಲ್ಲಿ ತೊಡಗಿದ್ದ 97 ಪ್ರಕರಣ ಮತ್ತು ಜಿಲ್ಲಾ ಮರಳು ಉಸ್ತುವಾರಿ ಸಮಿತಿಯಿಂದ 817 ಪ್ರಕರಣ ಪತ್ತೆ ಹಚ್ಚಿದ್ದು ಇವರಿಂದ ರು. 167 ಲಕ್ಷ ದಂಡ ವಸೂಲಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನ ಪರಿಷತ್ ಸದಸ್ಯ ಪಟೇಲ್ ಶಿವರಾಂರ ಪ್ರಶ್ನೆಗೆ ಉತ್ತರಿಸಿದ ಅವರು, ಅಕ್ರಮ ಮರಳು ಗಣಿಗಾರಿಕೆ ತಡೆಗಟ್ಟಲು ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಿಸಿದರು. ಸಂಜೆ 6ರ ನಂತರ ಬೆಳಿಗ್ಗೆ 6ರ ವರೆಗೆ ಮರಳು ಗಣಿಗಾರಿಕೆ ನಿಷೇಧಿಸಲಾಗಿದೆ. ಜಿಲ್ಲಾ ಮತ್ತು ತಾಲೂಕು ಮಟ್ಟದ ಮರಳು ಉಸ್ತುವಾರಿ ಸಮಿತಿಯ ಅಧಿಕಾರಿಗಳಿಗೆ ಅಕ್ರಮ ಮರಳು ದಂಧೆ ತಪಾಸಣೆ ನಡೆಸಲು ಹಾಗೂ ಅನಧೀಕೃತವೆಂದು ಕಂಡು ಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲು ಅಧಿಕಾರ ನೀಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

