ಹಾಸನ

ಕಟ್ಟಡ ಕಾರ್ಮಿಕರಿಗೆ ಕಾನೂನು ನೆರವು

Published On :

ರು. 25 ಪಾವತಿಸಿ ಸದಸ್ಯತ್ವ ಪಡೆಯಲು ಕಾರ್ಮಿಕ ಇಲಾಖೆ ಮನವಿ


ಕ.ಪ್ರ.ವಾರ್ತೆ    ಸಕಲೇಶಪುರ    ಜು.3
ಕಟ್ಟಡ ಕಾರ್ಮಿಕರು ಉಚಿತವಾಗಿ ತಾಲೂಕು ಕಾನೂನು ಸೇವಾಸಮಿತಿ ಮೂಲಕ ಕಾನೂನು ನೆರವು ಪಡೆಯಬಹುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಎನ್. ಕೃಷ್ಣಯ್ಯ ತಿಳಿಸಿದರು.
ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಕಾರ್ಮಿಕ ಇಲಾಖೆ, ಮಲೆನಾಡು ಕಟ್ಟಡ ಕಾರ್ಮಿಕರ ಸಂಘ, ಕೂಲಿ ಕಾರ್ಮಿಕರ ಸಂಘ ಮತ್ತು ಕಂದಾಯ ಇಲಾಖೆ ಆಶ್ರಯದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಕಟ್ಟಡ ಕಾರ್ಮಿಕರಿಗೆ ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ    ಅವರು,ಕಟ್ಟಡ ಕಾರ್ಮಿಕರಿಗೆ ಸರ್ಕಾರ ಅನೇಕ ಸೌಲಭ್ಯವನ್ನು ನೀಡುತ್ತಿದೆ ಎಂದು ವಿವರಿಸಿದರು.
ಉಚಿತ ಕಾನೂನು ಸೇವೆ: ನ್ಯಾಯಾಲದಲ್ಲಿ ಪರಿಹಾರದ ವ್ಯಾಜ್ಯಗಳನ್ನು ಯಾವುದೇ ಶುಲ್ಕವಿಲ್ಲದೆ ಕಟ್ಟಡ ಕಾರ್ಮಿಕರು ಕಾನೂನು ಸೇವಾ ಸಮಿತಿ ಮೂಲಕ ಪಡೆದುಕೊಳ್ಳಬಹುದಾಗಿದೆ ಎಂದು ಹೇಳಿದರು
ಕಾರ್ಮಿಕ ಇಲಾಖೆಯ ಹಿರಿಯ ನಿರೀಕ್ಷಕ ಎಂ.ಎಂ. ಶಿವಶಂಕರಪ್ಪ ಮಾತನಾಡಿ, ಕಟ್ಟಡ ಕಾರ್ಮಿಕರಿಗೆ ಸರ್ಕಾರ ನೀಡುವ ಸೌಲಭ್ಯ ಪಡೆಯಲು 25 ರು ಸಂದಾಯಿಸಿ ಸದಸ್ಯತ್ವ ಪಡೆದುಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ  ನ್ಯಾ. ಶಿಲ್ಪ, ವಕೀಲರ ಸಂಘದ ಅಧ್ಯಕ್ಷ ಟಿ ಎಂ ಆನಂದ್,ಕಾರ್ಯದರ್ಶಿ ಶಿವಕುಮಾರ್, ಸಹಾಯಕ ಸರಕಾರ ಅಭಿಯೋಜಕ ಮಧುಸೂದನ್, ಮಲೆನಾಡು ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ವಿಶ್ವನಾಥ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.