ಭಾರತೀಯ ಹಸ್ತಪ್ರತಿಗಳಲ್ಲಿ ಜ್ಞಾನ ಸಂಪತ್ತಿನ ಅನಾವರಣ
ಹಾಸನ: ನಗರದ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಆಯುರ್ವೇದ ಸಂಹಿತ ಮತ್ತು ಸಿದ್ಧಾಂತ ವಿಭಾಗ ಪ್ರಾಚೀನ ಹಸ್ತಪ್ರತಿಗಳ ಸಂಗ್ರಹಣೆ ಮತ್ತು ಸಂರಕ್ಷಣೆ ಕುರಿತು ಎರಡು ದಿನದ ರಾಜ್ಯ ಮಟ್ಟದ ಕಾರ್ಯಾಗಾರ ಏರ್ಪಡಿಸಿದೆ.
ರಾಷ್ಟ್ರೀಯ ಪ್ರಾಕೃತ ಅಧ್ಯಯನ ಮತ್ತು ಸಂಶೋಧನಾ ಸಂಸ್ಥೆ, ಶ್ರವಣಬೆಳಗೊಳ ಆಶ್ರಯದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಆಯುರ್ವೇದ ಸ್ನಾತಕೋತ್ತರ ವೈದ್ಯರಿಗೆ ಪ್ರಾಚೀನ ಹಸ್ತಪ್ರತಿಗಳು, ಅದರ ಮಹತ್ವ, ಸಂಗ್ರಹಣೆ, ಸಂರಕ್ಷಣೆ ಹಾಗೂ ಪ್ರಕಟಣೆಯ ಎಲ್ಲಾ ಮಾಹಿತಿ ತಿಳಿಸುವ ಬೋಧನಾ ಅವಧಿಗಳು ಹಾಗೂ ಪ್ರಾತ್ಯಕ್ಷಿಕೆಯನ್ನು ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ನಡೆಸಲಾಗುತ್ತಿದೆ.
ಕಾರ್ಯಕ್ರಮದಲ್ಲಿ ಆಯುರ್ವೇದ ವೈದ್ಯರು ಹಸ್ತಪ್ರತಿ ಕ್ಷೇತ್ರದಲ್ಲಿ ವಿಶೇಷ ಆಸಕ್ತಿ ತೋರಿ ಕಾರ್ಯಾನುಷ್ಠಾನದ ಕಡೆಗೆ ಒಲವು ತೋರಿದ್ದಾರೆ. ಉದ್ಘಾಟನೆಯಲ್ಲಿ ರಾಷ್ಟ್ರೀಯ ಪ್ರಾಕೃತ ಅಧ್ಯಯನ ಮತ್ತು ಸಂಶೋಧನಾ ಸಂಸ್ಥೆಯ ಆಡಳಿತ ಅಧಿಕಾರಿ ಉದಯರಾಜ್, ಡಾ.ಎಸ್.ಎಂ.ವೈದ್ಯ, ಪ್ರೊ.ಎಂ.ಎನ್. ಪಾಂಡುರಂಗ, ಡಾ. ಶಶಿರೇಖಾ ಎಚ್.ಕೆ. ಡಾ.ರಾಜರಾಜೇಶ್ವರಿ ಇದ್ದರು.ಟಿ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

