ಪರಮೇಶ್ವರ್ಗೆ ಡಿಸಿಎಂ ಪಟ್ಟಕ್ಕಾಗಿ ಪ್ರದರ್ಶನ
ಹಾಸನ: ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡುವಂತೆ ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ಮತ್ತು ಪಂಗಡ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು.
ಪ್ರತಿಭಟನಾಕಾರರು ನಗರದ ಹೇಮಾವತಿ ಪ್ರತಿಮೆಯಿಂದ ಮೆರವಣಿಗೆ ಪ್ರಾರಂಭಿಸಿ ಎನ್.ಆರ್.ವೃತ್ತ, ಬಿ.ಎಂ.ರಸ್ತೆ ಮೂಲಕ ಜಿಲ್ಲಾ ಕಾಂಗ್ರೆಸ್ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಪರಮೇಶ್ವರ್ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡುವಂತೆ ಆಗ್ರಹಿಸಿದರು.
ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರು ರಾಜ್ಯದಲ್ಲಿ ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿ ಪಕ್ಷದ ಪುನಶ್ಚೇತನಕ್ಕೆ ಕಾರಣರಾಗಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸ್ವಂತ ಬಲದಿಂದ ಅಧಿಕಾರ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಪಕ್ಷ ಸಂಘಟನೆಗೆ ಸಾಕಷ್ಟು ಶ್ರಮಿಸಿದ್ದು, ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನಗಳನ್ನು ಪಡೆಯುವಲ್ಲಿ ದುಡಿದಿದ್ದಾರೆ. ಅವರಿಗೆ ತಕ್ಕ ಸ್ಥಾನ ನೀಡಬೇಕಾಗಿದೆ. ಪಕ್ಷ ಸಂಘಟನೆಗೆ ದುಡಿದಿರುವ ಡಾ.ಜಿ.ಪರಮೇಶ್ವರ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನವನ್ನು ನೀಡಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಪಂಗಡದ ಚಲುವನಹಳ್ಳಿ ಶೇಖರಪ್ಪ, ಪರಿಶಿಷ್ಟ ಜಾತಿಯ ಉಪಾಧ್ಯಕ್ಷ ಕುಮಾರಸ್ವಾಮಿ, ಜಿಲ್ಲಾ ಕಾರ್ಯದರ್ಶಿ ಶಿವಕುಮಾರ್, ಜಿಲ್ಲಾ ಸಮಿತಿ ಸದಸ್ಯ ಸುನಿಲ್ ಬವನಹಳ್ಳಿ, ಜಿಲ್ಲಾ ಸಮಿತಿ ಸದಸ್ಯ ರಾಜಪ್ಪ, ನಗರ ಉಪಾಧ್ಯಕ್ಷ ಲಕ್ಕಯ್ಯ, ಹಿಂದುಳಿದ ವರ್ಗದ ಅಧ್ಯಕ್ಷ ಆನಂದ್ ತೇಜೂರು, ನಗರ ಅಧ್ಯಕ್ಷ ಮಂಜಯ್ಯ, ದ್ಯಾವೇಗೌಡ, ಕೆಲವತ್ತಿ ಸೋಮಶೇಖರ್, ರಗು, ಎಚ್.ಟಿ.ಲಕ್ಷ್ಮಣ್ ಹಾಗೂ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

