ಹಾಲು ಗುಣಮಟ್ಟ ಪರೀಕ್ಷೆಗೆ ಮೆಗಾ ಡೇರಿ
ಮದ್ದೂರು: ಗ್ರಾಹಕರಿಗೆ ಗುಣಮಟ್ಟದ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಒದಗಿಸುವ ಉದ್ದೇಶದಿಂದ ಮೆಗಾ ಡೇರಿಯನ್ನು ಅಸ್ತಿತ್ವಕ್ಕೆ ತರಲು ಉದ್ದೇಶಿಸಲಾಗಿದೆ ಎಂದು ಮಂಡ್ಯ ಜಿಲ್ಲಾ ಸಹಕಾರಿ ಹಾಲು ಒಕ್ಕೂಟ (ಮನ್ಮುಲ್)ನ ನೂತನ ಅಧ್ಯಕ್ಷ ಕದಲೂರು ರಾಮಕೃಷ್ಣ ಶುಕ್ರವಾರ ತಿಳಿಸಿದರು.
ತಾಲೂಕಿನ ಗೆಜ್ಜಲಗೆರೆಯ ಜಿಲ್ಲಾ ಸಹಕಾರಿ ಹಾಲು ಒಕ್ಕೂಟದ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಅವರು ಮಾತನಾಡಿದರು.ಜಿಲ್ಲಾ ಹಾಲು ಒಕ್ಕೂಟದಲ್ಲಿ ಹಾಲಿನ ಸಂಗ್ರಹಣೆ ಹೆಚ್ಚಾಗುತ್ತಿದೆ. ಇದಕ್ಕೆ ಅನುಗುಣವಾಗಿ ಗ್ರಾಹಕರಿಗೆ ಉತ್ತಮ ಗುಣಮಟ್ಟದ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಮಾರಾಟ ಮಾಡುವ ಮೂಲಕ ಒಕ್ಕೂಟ, ಗ್ರಾಹಕರಿಗೆ ಉತ್ತಮ ಸೇವೆ ಸಲ್ಲಿಸುವ ಉದ್ದೇಶದಿಂದ ಮೇಗಾ ಡೇರಿ ಅಸ್ತಿತ್ವಕ್ಕೆ ತರಲು ನಿರ್ಧರಿಸಿದೆ ಎಂದರು.
ರಾಜ್ಯದ 13 ಹಾಲು ಒಕ್ಕೂಟಗಳಲ್ಲಿ ಮಂಡ್ಯ ಜಿಲ್ಲಾ ಹಾಲು ಒಕ್ಕೂಟ ಹಾಲು ಶೇಖರಣೆಯಲ್ಲಿ ಹಿಂದಿತ್ತು. ಈಗ ಜಿಲ್ಲಾವಾರು ಹಾಲು ಶೇಖರಣೆಯಲ್ಲಿ ಮಂಡ್ಯ ಜಿಲ್ಲೆ ಮೊದಲ ಸ್ಥಾನದಲ್ಲಿದ್ದು, ಪ್ರಸ್ತುತ 6 ಲಕ್ಷ 60 ಸಾವಿರ ಲೀಟರ್ ಹಾಲನ್ನು ಸಂಗ್ರಹಣೆ ಮಾಡಲಾಗುತ್ತಿದೆ ಎಂದು ಹೇಳಿದರು. ಈ ವರ್ಷದ ಅಕ್ಟೋಬರ್ ಮತ್ತು ನವೆಂಬರ್ ಮಾಹೆಯಲ್ಲಿ 7 ಲಕ್ಷ ಲೀಟರ್ ಹಾಲು ಸಂಗ್ರಹಿಸುವ ಗುರಿ ಹೊಂದಲಾಗಿದೆ.
ಬೆಂಗಳೂರು ಮತ್ತು ಮಂಡ್ಯ ಸೇರಿದಂತೆ ಹಲವೆಡೆ 2 ಲಕ್ಷ ಲೀಟರ್ ಹಾಲು ಮಾರಾಟವಾಗುತ್ತಿದೆ. ಉಳಿದ ಹೆಚ್ಚುವರಿ ಹಾಲನ್ನು ಹಾಲಿನ ಪುಡಿಯಾಗಿ ಪರಿವರ್ತನೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
2014-15ನೇ ಸಾಲಿನಲ್ಲಿ ಮನ್ಮುಲ್ ಅಂದಾಜು ರು. 7 ಕೋಟಿ ನಿವ್ವಳ ಲಾಭ ಗಳಿಸಿದೆ. ಇನ್ನು ಹಾಲು ಉತ್ಪಾದಕರಿಗೆ ಪ್ರತಿ ಲೀಟರ್ ಹಾಲಿಗೆ ಒಕ್ಕೂಟ 23.50 ಪೈಸೆ ನೀಡುತ್ತಿದೆ. ಅಲ್ಲದೆ ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ 98 ಪೈಸೆ ನಿರ್ವಹಣೆ ವೆಚ್ಚ ನೀಡಲಾಗುತ್ತಿದೆ ಎಂದು ರಾಮಕೃಷ್ಣ ಈ ಸಂದರ್ಭದಲ್ಲಿ ತಿಳಿಸಿದರು.
ಜಿಲ್ಲಾ ಹಾಲು ಒಕ್ಕೂಟದಲ್ಲಿ ಹಾಲಿನ ಶಿಥಲೀಕರಣ ಘಟಕ ಹೆಚ್ಚಳ ಮಾಡಲಾಗುವುದು.
ಇದಕ್ಕಾಗಿ ಹಳ್ಳಿಗಾಡಿನ ಸಹಕಾರ ಸಂಘಗಳಲ್ಲಿ 71 ಬಲ್ಕ್ ಮಿಲ್ಕ್ ಘಟಕಗಳನ್ನು ಅಳವಡಿಸಲಾಗಿದ್ದು, ಇನ್ನೂ 46 ಘಟಕಗಳನ್ನು ತೆರೆಯಲು ಎನ್ಡಿಡಿಬಿಯಿಂದ ಅನುಮತಿ ಕೋರಲಾಗಿದೆ ಎಂದು ಹೇಳಿದರು.
ಮಾಜಿ ಶಾಸಕಿ ಕಲ್ಪನಾ ಸಿದ್ದರಾಜು, ಕೆಪಿಸಿಸಿ ಸದಸ್ಯ ಗುರುಚರಣ್, ಮನ್ಮುಲ್ನ ನಿರ್ದೇಶಕ ಉಮೇಶ್, ಬೆಟ್ಟಸ್ವಾಮಿಗೌಡ, ವ್ಯವಸ್ಥಾಪಕ ನಿರ್ದೇಶಕ ಲಕ್ಷ್ಮಣ್ ರೆಡ್ಡಿ, ತಾಪಂ ಸದಸ್ಯರಾದ ಸಿ. ನಾಗೇಗೌಡ, ಕೆ.ಆರ್. ಮಹೇಶ್, ಮುಖಂಡರಾದ ಜೋಗೀಗೌಡ, ವಿ.ಎಸ್. ನಾಗರಾಜು, ಆನೆದೊಡ್ಡಿ ರಾಮೇಗೌಡ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

