ಹಾಸನ

ಕಾಡಾನೆ ದಾಳಿಗೆ ಸಿಲುಕಿದ ಮಹಿಳೆಯತ್ತ ನಿರ್ಲಕ್ಷ್ಯ

Published On :

ಆಲೂರು: ತಾಲೂಕಿನ ಕೆ. ಹೊಸಕೋಟೆ ಹೋಬಳಿ ಮಲಗಳಲೆ ಗ್ರಾಮದಲ್ಲಿ ಜು. 3ರಂದು ಬೆಳಗ್ಗೆ ಕಾಡಾನೆ ದಾಳಿಗೆ ಸಿಲುಕಿ ಮಹಿಳೆಯೋರ್ವಳು ಮೃತಪಟ್ಟಳು. ಅದೇ ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡು ಆಲೂರು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದ ರತ್ನಮ್ಮರವರ ಚಿಕಿತ್ಸೆಗೆ ಅರಣ್ಯ ಇಲಾಖೆ ಸ್ಪಂದಿಸದೆ ನಿರ್ಲಕ್ಷ್ಯ ತೋರಿದ್ದಾರೆಂದು ಆರೋಪಿಸಿ ಆಕೆಯ ಸಂಬಂಧಿಕರು ಹಾಗೂ ಗ್ರಾಮಸ್ಥರು ಶುಕ್ರವಾರ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ.
ಆನೆ ದಾಳಿಗೆ ಸಿಲುಕಿ ಗಾಯಗೊಂಡಿದ್ದ ರತ್ನಮ್ಮ ಅವರನ್ನು ಗ್ರಾಮಸ್ಥರ ಸಹಾಯದಿಂದ ನಾವೇ ಆಸ್ಪತ್ರೆಗೆ ದಾಖಲಿಸಿದ್ದು ಅರಣ್ಯ ಇಲಾಖೆಯವರಾಗಲೀ, ತಾಲ್ಲೂಕು ಆಡಳಿತವಾಗಲೀ ಸೌಜನ್ಯಕ್ಕಾದರೂ ಆಸ್ಪತ್ರೆಗೆ ಬಂದು ಭೇಟಿ ನೀಡಿಲ್ಲ.  ಕೂಲಿ ಕಾರ್ಮಿಕರಾಗಿರುವ ಇವರ ಚಿಕಿತ್ಸೆಯ ಸಂಪೂರ್ಣ ಹೊಣೆ ಹೊರಬೇಕಿದ್ದ ಅರಣ್ಯ ಇಲಾಖೆ ಮಂದಿ ಇತ್ತ ಸುಳಿದಿಲ್ಲ. ಅವರ ಪರಿಸ್ಥಿತಿ ಹೇಗಿದೆ ಎಂದು ವಿಚಾರಣೆ ಕೂಡ ನಡೆಸಿಲ್ಲ.  ಮೃತ ಪಟ್ಟವರಿಗೆ ಹಣ ನೀಡಿ ಕಣ್ಣೊರೆಸುವ ತಂತ್ರ ಅನುಸರಿಸುತ್ತಿರುವ ಇವರಿಗೆ ಗಾಯಗೊಂಡು ಸಾವು ಬದುಕಿನ ನಡುವೆ ಹೋರಾಟ ಮಡೆಸುತ್ತಿರುವವರು ಲೆಕ್ಕಕ್ಕಿಲ್ಲವೇ? ಜಿಲ್ಲಾಧಿಕಾರಿಗಳು ಇಂತಹ ಬೇಜವ್ಬಾರಿಯುತ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡು ನಮಗೆ ನ್ಯಾಯ ದೊರಕಿಸದಿದ್ದರೆ, ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಧರಣಿ ನಡೆಸುವುದಾಗಿ ಎಚ್ಚರಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.