ವಾರದಲ್ಲಿ 2 ದಿನ ಸಿವಿಲ್ ವಿಚಾರಣೆ: ಪರಿಶೀಲನೆ
ಆಲೂರು: ಪಟ್ಟಣದ ನ್ಯಾಯಾಲಯದಲ್ಲಿ ವಾರದಲ್ಲಿ 2 ದಿನವಾದರೂ ಹಿರಿಯ ಸಿವಿಲ್ ನ್ಯಾಯಾಲಯ ನಡೆಸಲು ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ಪ್ರಧಾನ ನ್ಯಾಯಾಧೀಶ ಸತೀಶ್ ಸಿಂಗ್ ಭರವಸೆ ನೀಡಿದರು.
ಪಟ್ಟಣದ ಹೊರವಲಯದಲ್ಲಿರುವ ಜೆಎಂಎಫ್ಸಿ ನ್ಯಾಯಾಲಯಕ್ಕೆ ಭೇಟಿ ನೀಡಿ ಅಂತರ್ ಜಾಲದಲ್ಲಿ ಸಾರ್ವಜನಿಕರಿಗೆ ಕೇಸ್ಗಳ ಸಂಬಂಧ ವಿಚಾರಗಳ ಮಾಹಿತಿ ನೀಡುವ ಯಂತ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು, 2012ರ ಎಲ್ಲಾ ಸಿವಿಲ್ ಪ್ರಕರಣಗಳನ್ನು ತ್ವರಿತವಾಗಿ ಮುಕ್ತಾಯಗೊಳಿಸುವಂತೆ ನ್ಯಾಯಾಧೀಶ ಮಹೇಶ್ ಬಾಬು ಅವರಿಗೆ ಸೂಚಿಸಿದರು.
ಕಕ್ಷಿದಾರರನ್ನು ಅಲೆಸಬೇಡಿ: ವಕೀಲರು ತಮ್ಮ ಕಕ್ಷಿದಾರರಿಗೆ ತ್ವರಿತಗತಿಯಲ್ಲಿ ನ್ಯಾಯ ದೊರೆಯುವಂತೆ ಮಾಡಬೇಕು. ನ್ಯಾಯಕ್ಕಾಗಿ ಬಂದವರು ಹೆಚ್ಚು ದಿನ ಅಲೆಯದಂತೆ ಮಾಡಬೇಕು. ಪತ್ರಕರ್ತರು ಬ್ರೇಕಿಂಗ್ ನ್ಯೂಸ್ ಮೋಹ ಬಿಟ್ಟು ಜನತೆಯನ್ನು ತಿಳಿವಳಿಕೆ ಹೊಂದಿ ಮಾಡುವಂತಹ ಕೆಲಸ ಮಾಡಬೇಕು. ಕೇವಲ ಕ್ರೈಂ ಸುದ್ದಿಗಳನ್ನು ಭಿತ್ತರಿಸುವುದು ಸರಿಯಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ತಾಲೂಕು ವಕೀಲರ ಸಂಘದ ಅಧ್ಯಕ್ಷ ಮಹೇಶ್ ಮಾತನಾಡಿ, ಆಲೂರಿನಲ್ಲಿ ಹಿರಿಯ ಸಿವಿಲ್ ನ್ಯಾಯಾಲಯಕ್ಕೆ ಅವಕಾಶ ನೀಡಬೇಕು, ಸಿಬ್ಬಂದಿಗಳ ಕೊರತೆ ಸರಿಪಡಿಸಬೇಕು ಹಾಗೂ ನ್ಯಾಯಾಲಯಕ್ಕೆ ವಿದ್ಯುತ್ ಸಮಸ್ಸೆಯಿದ್ದು, ಸೂಕ್ತ ಕ್ರಮ ಕೈಗೊಳ್ಳಲು ಶಾಸಕರಿಗೆ ಮನವಿ ಮಾಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ಶಾಸಕರು ವಿದ್ಯುತ್ ಸಮಸ್ಯೆ ಪರಿಹಾರಕ್ಕೆ ಈಗಾಗಲೇ ಸೆಸ್ಕ್ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದು, ಶೀಘ್ರ ಪರಿಹಾರವಾಗುವುದು. ಉಳಿದ ಇತರೆ ಬೇಡಿಕೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಆಲೂರು ಜೆಎಂಎಫ್ಸಿ ನ್ಯಾಯಾಧೀಶ ಮಹೇಶ್ ಬಾಬು, ವಕೀಲರ ಸಂಘದ ಉಪಾಧ್ಯಕ್ಷ ದುಬಾಷ್ ಗೌಡ, ಕಾರ್ಯದರ್ಶಿಮಂಜೇಗೌಡ, ಖಜಾಂಚಿ ಸುರೇಶ್, ಜಂಟಿ ಕಾರ್ಯದರ್ಶಿ ಉಮೇಶಿ ಕಾರ್ಯಕ್ರಮದಲ್ಲಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

