ಸಾಹಿತಿ ಅನಕೃ ನೆನಪು ಕಾರ್ಯಕ್ರಮ 8ರಂದು
ಹಾಸನ: ಕಾದಂಬರಿ ಸಾರ್ವಭೌಮ ಡಾ. ಅನಕೃ ಒಂದು ನೆನಪು ಎಂಬ ಕಾರ್ಯಕ್ರಮವನ್ನು ಅರಕಲಗೂಡಿನ ಶಿಕ್ಷಕರ ಭವನದಲ್ಲಿ ಜು.8ರಂದು ಹಮ್ಮಿಕೊಳ್ಳಲಾಗಿದೆ ಎಂದು ಸಂಗೀತ ವಿದ್ವಾನ್ ಆರ್.ಕೆ.ಪದ್ಮನಾಭ್ ತಿಳಿಸಿದರು. ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿದ್ವಾನ್ ಆರ್.ಕೆ.ಪದ್ಮನಾಭರವರ ಅಭಿಮಾನಿಗಳ ಬಳಗ, ವಿಷ್ಣುಸೇನಾ ಸಮಿತಿ, ನಿವೇದಿತಾ ವಿದ್ಯಾಶಾಲೆ ಹಾಗೂ ಹಾಸನ ಪಿಯು ಕಾಲೇಜುಗಳ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮವನ್ನು ನಡೆಸಲಾಗುವುದು ಎಂದರು. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಸಾಹಿತಿ ಡಾ.ಬಂಜಗೆರೆ ಜಯಪ್ರಕಾಶ್ ಅವರು ಅ.ನ.ಕೃರವರ ಭಾವಚಿತ್ರ ಅನಾವರಣ ಮಾಡಲಿದ್ದಾರೆ. ಜಿಲ್ಲಾ ಪಂಚಾಯ್ತಿ ಸದಸ್ಯ ವಿ.ಎ.ನಂಜುಂಡಸ್ವಾಮಿ, ಪಪಂ ಅಧ್ಯಕ್ಷೆ ಮಂಜುಳ ಯೋಗೇಶ್ ಮತ್ತಿತರರು ಭಾಗವಹಿಸಲಿದ್ದಾರೆ ಎಂದರು. ಆ.17 ರಂದು ಕನ್ನಡದ ಶಾಸ್ತ್ರೀಯ ಸಂಗೀತ ಹಾಗೂ ಭಾವಗೀತೆಗಳ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

