ಕ್ಯಾನ್ಸರ್ ರೋಗಿಗಳಿಗೆ ರೇಡಿಯೇಷನ್ ಥೆರಪಿ
ಹಾಸನ: ಹೆಲ್ತ್ ಗ್ಲೋಬಲ್ ಸರ್ವೀಸ್ ಹಾಗೂ ಹಾಸನ ವೈದ್ಯಕೀಯ ಮಹಾ ವಿದ್ಯಾಲಯದ ಸಹಯೋಗದೊಂದಿಗೆ ಹಿಮ್ಸ್ ಎಚ್ಸಿಜಿ ಕ್ಯಾನ್ಸರ್ ಕೇಂದ್ರವನ್ನು ಶ್ರೀ ಚಾಮರಾಜೇಂದ್ರ ಸರ್ಕಾರಿ ಆಸ್ಪತ್ರೆಯಲ್ಲಿ ಸ್ಥಾಪಿಸಲಾಗಿದೆ. ಕ್ಯಾನ್ಸರೋಗಿಗಳಿಗೆ ರೇಡಿಯೇಷನ್ ಥೆರಪಿ ಹಾಗೂ ಕಿಮೋಥೆರಪಿಯ ಚಿಕಿತ್ಸೆ ನೀಡಲಾಗುತ್ತಿದೆ. ನುರಿತ ಶಸ್ತ್ರ ಚಿಕಿತ್ಸಾ ತಜ್ಞರ ತಂಡದಿಂದ ಪ್ರತಿದಿನ ಶಸ್ತ್ರ ಚಿಕಿತ್ಸಾ ಸೌಲಭ್ಯವಿರುತ್ತದೆ. ಆದ್ದರಿಂದ ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕಾಗಿ ಕೋರಲಾಗಿದೆ
ಇಂದು ಮುದ್ರಣಕಾರರ ಸಭೆ: ಹಾಸನ: ಜಿಲ್ಲಾ ಮುದ್ರಣಕಾರರ ಸಂಘದ 8ನೇ ವಾರ್ಷಿಕ ಸರ್ವ ಸದಸ್ಯರ ಸಭೆಯನ್ನು ಜು. 6 ರಂದು ಬೆಳಗ್ಗೆ 11 ಗಂಟೆಗೆ ಸಂಘದ ಅಧ್ಯಕ್ಷ ಬಿ.ಎಸ್. ಜಗದೀಶ್ ಅಧ್ಯಕ್ಷತೆಯಲ್ಲಿ ನಗರದ ಶ್ರೀ ಪಾಂಡುರಂಗ ಸ್ವಾಮಿ ದೇವಾಲಯದ ರಸ್ತೆಯಲ್ಲಿರುವ ಶ್ರೀಕಂಬದ ನರಸಿಂಹ ಸ್ವಾಮಿ ದೇವಸ್ಥಾನದ ಆವರಣದಲ್ಲಿ ನಡೆಸಲಾಗುವುದು. ಸಂಘದ ಸದಸ್ಯರು ಸಕಾಲಕ್ಕೆ ಆಗಮಿಬೇಕಾಗಿ ಕೋರಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

