ಹಾಸನ

ಬಂಟರಿಗೆ ಆರ್ಥಿಕ ನೆರವು: ಆಳ್ವ ಭರವಸೆ

Published On :


ಸಕಲೇಶಪುರ: ಸಕಲೇಶಪುರ ಬಂಟ ಸಮುದಾಯದಲ್ಲಿ ಆರ್ಥಿಕವಾಗಿ ಹಿನ್ನಡೆಯುಳ್ಳ ಜನರಿಗೆ ಸಮುದಾಯದ ವತಿಯಿಂದ ಮನೆ ನಿರ್ಮಿಸಲು, ಹೆಣ್ಣು ಮಕ್ಕಳ ವಿದ್ಯಾಭ್ಯಾಸ ಹಾಗೂ ವಿವಾಹಕ್ಕೆ ನೆರವು ನೀಡುವುದಾಗಿ ಜಿಲ್ಲಾ ಬಂಟರ ಸಂಘದ ನೂತನ ಅಧ್ಯಕ್ಷ ಸೀನಪ್ಪ ಆಳ್ವ ತಿಳಿಸಿದ್ದಾರೆ.  ಇತ್ತೀಚೆಗೆ ಪಟ್ಟಣದ ಸೀನಪ್ಪ ಶೆಟ್ಟಿ ಸಮುದಾಯ ಭವನದ ಸಭಾಂಗಣದಲ್ಲಿ  ಶುಕ್ರವಾರ ನಡೆದ ಸರ್ವ ಸದಸ್ಯರ ಸಭೆಯಲ್ಲಿ ಅಧಿಕಾರ ಸ್ವೀಕರಿಸಿ ಮಾತನಾಡಿದ ಅವರು, ಈ ನಿಟ್ಟಿನಲ್ಲಿ ಸಮುದಾಯದಲ್ಲಿ ಆರ್ಥಿಕವಾಗಿ ಸಬಲರಾಗಿರುವವರ ಸಹಕಾರ ಅಗತ್ಯ ಎಂದರು.   ನಿಕಟ ಪೂರ್ವ ಅಧ್ಯಕ್ಷ ಎಚ್.ಎ. ಭಾಸ್ಕರ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಹಾಸನ ವಕೀಲ ಜಯರಾಂ ಶೆಟ್ಟಿ, ಕಾರ್ಯದರ್ಶಿ ಆನಂದ್, ಸಹ ಕಾರ್ಯದರ್ಶಿ ಜಗದೀಶ್ ಶೆಟ್ಟಿ, ಹಾಗೂ ಖಜಾಂಜಿಯಾಗಿ ದೇವ ರಾಜ್ ಶೆಟ್ಟಿ ಇವರುಗಳನ್ನು ಆಯ್ಕೆ ಮಾಡಲಾಯಿತು. ಇದೇ ಸಂದರ್ಭದಲ್ಲಿ ಸಮುದಾಯದ ಮುಖಂಡರಾದ  ಹಂಸರಾಜ ಶೆಟ್ಟಿ, ಸಂಜೇತ್ ಶೆಟ್ಟಿ, ಚೆನ್ನವೆಣೀ ಎಂ.ಶೆಟ್ಟಿ  ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.