ಅಂಗವಿಕಲ ಮಕ್ಕಳಿಗೆ ಉಚಿತ ತಪಾಸಣೆ
ಆಲೂರು: ಸಹ ಜೀವನದಲ್ಲಿ ಆಶಾದಾಯಕ ಬೆಳವಣಿಗೆ ಕಾಣಲು ಸಾಧ್ಯ ಎಂದು ಜಿಲ್ಲಾ ಸರ್ವ ಶಿಕ್ಷಣ ಅಭಿಯಾನದ ನಿರ್ದೇಶಕ ದೇವರಾಜ್ ತಿಳಿಸಿದರು. ಪಟ್ಟಣದ ಸರ್ವ ಶಿಕ್ಷಣ ಅಭಿಯಾನ ಕೇಂದ್ರದಲ್ಲಿ ಸರ್ವ ಶಿಕ್ಷಣ ಅಭಿಯಾನ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಆಶ್ರಯದಲ್ಲಿ ಏರ್ಪಡಿಸಿದ್ದ ವಿಕಲಚೇತನ ಮಕ್ಕಳಿಗಾಗಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರದ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶಿಬಿರ ಉದ್ಘಾಟಿಸಿದ ಕ್ಷೇತ್ರ ಶಿಕ್ಷಣಧಿಕಾರಿ ಎಚ್.ಕೆ. ಪುಷ್ಪಲತಾ ಮಾತನಾಡಿ, ವಿಕಲಚೇತನರನ್ನು ನಿರ್ಲಕ್ಷಿಸದೆ ಅನುಕಂಪ ತೋರಿ ಚೈತನ್ಯ ಶೀಲ ವ್ಯಕ್ತಿಗಳನ್ನಾಗಿ ಮಾಡುವುದು ಸಂಘ ಸಂಸ್ಥೆಗಳು ಸೇರಿದಂತೆ ಸಮಾಜದ ಎಲ್ಲರ ಹೊಣೆಯಾಗಿದೆ ಎಂದರು. ಆಲೂರು ಸರ್ವ ಶಿಕ್ಷಣ ಅಭಿಯಾನ ಅಧಿಕಾರಿ ರವಿ ಪ್ರಕಾಶ್ ಮಾತನಾಡಿದರು. ತಪಾಸಣಾ ಶಿಬಿರದಲ್ಲಿ ತಾಲೂಕಿನ ನಾನಾ ಗ್ರಾಮಗಳಿಂದ ಆಗಮಿಸಿದ್ದ 50ಕ್ಕೂ ಹೆಚ್ಚು ಮಕ್ಕಳು ಶಿಬಿರದ ಪ್ರಯೋಜನ ಪಡೆದರು. ನಾಗರಾಜ್, ಬಿ.ಆರ್. ಧರ್ಮ, ವೈದ್ಯರಾದ ಡಾ. ರಘು, ಡಾ. ರಂಗನಾಥ್ ಸೇರಿ ಅನೇಕರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

