ಅರಣ್ಯ ನಾಶದಿಂದ ಮನುಕುಲಕ್ಕೆ ಕುತ್ತು
ಕನ್ನಡಪ್ರಭ ವಾರ್ತೆ, ಹಾಸನ. ಜು 7
ಮನುಷ್ಯ ತನ್ನ ಸ್ವಾರ್ಥ ಸಾಧನೆಗಾಗಿ ಅರಣ್ಯವನ್ನು ನಾಶಪಡಿಸುತ್ತಿದ್ದಾನೆ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಆರ್.ಜೆ.ಸತೀಶ್ ಸಿಂಗ್ ಅಸಮಾಧಾನ ವ್ಯಕ್ತಪಡಿಸಿದರು.
ನಗರದ ಪಶುವೈದ್ಯಕೀಯ ಕಾಲೇಜಿನಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಅರಣ್ಯ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಸೋಮವಾರ ಪಡೆದ ವನ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮನುಷ್ಯನ ಉಸಿರಾಟಕ್ಕೆ ಮರಗಳು ಬೇಕು. ಆದರೆ ತನ್ನ ಸ್ವಾರ್ಥ ಸಾಧನೆಗೆ ಮರಗಳನ್ನು ಕಡಿದು ನಾಶ ಮಾಡುತ್ತಿದ್ದಾರೆ. ಅರಣ್ಯ ನಾಶದಿಂದ ಮನುಷ್ಯ ಕುಲ ಉಳಿಯುವುದಿಲ್ಲ ಎಂದರು.
ಪ್ರತಿಯೊಬ್ಬರ ಉಸಿರಾಟಕ್ಕೆ ತಲಾ 12 ಮರಗಳ ಅವಶ್ಯಕತೆ ಇದೆ. ಅರಣ್ಯವನ್ನು ನಾಶ ಮಾಡಿದಷ್ಟು ಮನುಷ್ಯನ ಆಯುಸ್ಸು ಕಡಿಮೆ ಮಾಡದಿಂತಾಗುತ್ತದೆ. ಅದ್ದರಿಂದ ಮುಂದಿನ ಜಾನಂಗಕ್ಕೆ ಉತ್ತಮ ವಾತಾವರಣ ಹಾಗೂ ಆಮ್ಲಜನಕ ನೀಡಲು ಹೆಚ್ಚು ಮರಗಳನ್ನು ಬೆಳೆಸುವ ಮೂಲಕ ಉಡುಗೊರೆಯಾಗಿ ನೀಡಬೇಕು ಎಂದರು.
ಮಾನವನಂತೆ ಪ್ರತಿಯೊಂದು ಗಿಡ, ಮರ, ಪ್ರಾಣಿ ಪಕ್ಷಿಗಳಿಗೂ ಬದುಕುವ ಹಕ್ಕಿದೆ. ಕೇವಲ ನಮ್ಮ ಸ್ವಾರ್ಥಕ್ಕಾಗಿ ಪರಿಸರದ ಮೇಲೆ ಸವಾರಿ ಮಾಡಿದರೆ ಮುಂದೊಂದು ದಿನ ಅಪಾಯ ತಪ್ಪಿದ್ದಲ್ಲ. ಮಾನವನ ಜೀವನಕ್ಕೆ ವನ್ಯ ಸಂಪತ್ತು ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ. ಪ್ರತಿಯೊಬ್ಬ ಪ್ರಜೆ, ಶಾಲಾ ಕಾಲೇಜು ವಿದ್ಯಾರ್ಥಿಗಳು ಸಾಧ್ಯವಾದಷ್ಷು ಗಿಡಗಳನ್ನು ನೆಟ್ಟು ಪೋಷಣೆ ಮಾಡಿ ಸಮಾಜಕ್ಕೆ ಕೊಡುಗೆಯಾಗಿ ನೀಡುವಂತೆ ಅವರು ಕರೆ ನೀಡಿದರು.
ಪ್ಲಾಸ್ಟಿಕ್ ಬಳಸಬೇಡಿ: ಮಹೋತ್ಸವದಂತಹ ಕಾರ್ಯಕ್ರಮ ಒಂದು ದಿನಕ್ಕೆ ಸೀಮಿತವಾಗದೇ ಅದು ಪ್ರತಿನಿತ್ಯ ನಡೆಸುವ ಮೂಲಕ ಮೂಲೆ ಮೂಲೆಗಳಲ್ಲಿ ಸಸಿ ನೆಡಬೇಕು. ಪರಿಸರ ಕಾಪಾಡುವ ಬಗ್ಗೆ ಎಲ್ಲರಿಗೂ ತಿಳಿ ವಳಿಕೆ ನೀಡಬೇಕು. ಪ್ಲಾಸ್ಟಿಕ್ ಬಳಕೆ ಬಗ್ಗೆ ಎಚ್ಚರವಹಿಸಬೇಕು ಎಂದು ಅವರು ಹೇಳಿದರು.
ಉಪ ಅರಣ್ಯ ಸಂರಕ್ಷಣಾಧಿಕಾರಿ ಗಣೇಶ್ ಭಟ್ ಮಾತನಾಡಿ, ಹವಾಮಾನ ಪರಿಸ್ಥಿತಿಯ ಮೇಲೆ ಗಿಡ ಮರಗಳು ಹೆಚ್ಚು ಪ್ರಭಾವವನ್ನು ಬೀರುತ್ತವೆ. ನಮ್ಮ ಮುಂದಿನ ಪೀಳಿಗೆಯ ಬದುಕು ಹಸನಾಗಬೇಕಾದರೆ ಅರಣ್ಯ ಸಂಪತ್ತನ್ನು ಸಂರಕ್ಷಿಸುವುದು ಹಾಗೂ ಸಮರ್ಪಕವಾಗಿ ನಡೆಯದೆ ಪರಿಸರ ಕಲುಷಿತವಾಗುತ್ತಿದೆ. ಈ ಬಗ್ಗೆ ಎಚ್ಚರಿಕೆ ಹೆಚ್ಚಿನ ಗಿಡಗಳನ್ನು ನೆಟ್ಟು ಪೋಷಿಸಿ ಬೆಳೆಸುವುದು ಅತ್ಯಗತ್ಯಎಂದರು.
30 ಲಕ್ಷ ಸಸಿ ವಿತರಣೆ ಗುರಿ: ಮುಂದಿನ ಎರಡು ವರ್ಷಗಳ ಅವಧಿಯಲ್ಲಿ ಹಾಸನದ ಪಶು ವೈದ್ಯಕೀಯ ಕಾಲೇಜಿನ ಆವರಣದಲ್ಲಿ ಅರಣ್ಯ ಇಲಾಖೆ ವತಿಯಿಂದ ಸಸಿಗಳನ್ನು ನೆಟ್ಟು ಉತ್ತಮ ವಾತಾವರಣ ರೂಪಿಸಲಾಗುವುದು. ಅರಣ್ಯ ಇಲಾಖೆ ಪ್ರಸಕ್ತ ವರ್ಷ ಜಿಲ್ಲೆಯಲ್ಲಿ ರೈತರಿಗೆ 30 ಲಕ್ಷ ಸಸಿಗಳನ್ನು ವಿತರಿಸುವ ಗುರಿಯನ್ನು ಹೊಂದಿದೆ. ಜೊತೆಗೆ 2ರಿಂದ 3 ವರ್ಷ ಪೋಷಣೆ ಮಾಡುವವರಿಗೆ ಪ್ರೋತ್ಸಾಹಧನವನ್ನೂ ನೀಡಲಾಗುತ್ತಿದೆ ಎಂದರು.
ಪಶು ಮಹಾ ವಿದ್ಯಾಲಯದ ಪ್ರಭಾರ ಡೀನ್ ಸಹದೇವ್ ಅಧ್ಯಕ್ಷತೆ ವಹಿಸಿದ್ದರು. ಕೃಷಿ ವಿಜ್ಞಾನ ಕಾಲೇಜಿನ ಮುಖ್ಯಸ್ಥ ಬಸವರಾಜ್ ಮಾತನಾಡಿದರು.
ಮಹೋತ್ಸವಕ್ಕೆ ಚಾಲನೆ: ಇದಕ್ಕೂ ಮುನ್ನ ಪಶು ವೈದ್ಯ ಮಹಾ ವಿದ್ಯಾಲಯದ ಆವರಣದಲ್ಲಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಗಣ್ಯರು ಸಸಿಗಳನ್ನು ನೆಟ್ಟು ವನಮಹೋತ್ಸವಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಹೆಚ್ಚುವರಿ ಪ್ರಧಾನ ನ್ಯಾಯಾಧೀಶ ವಿಜಯ್ ಕುಮಾರ್ ಹಾಗೂ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

