ಹಾಸನ

ಎಲ್ಲ ಕೆರೆಗಳಿಗೆ ನೀರು

Published On :

ಅರಸೀಕೆರೆ:  ಕ್ಷೇತ್ರದ ಎಲ್ಲಾ ಗ್ರಾಮಗಳ ಕೆರೆಕಟ್ಟೆಗಳಿಗೂ ನೀರಾವರಿ ಯೋಜನೆ ಮೂಲಕ ನೀರು ತುಂಬಿಸುವ ಮತ್ತು ರಸ್ತೆಗಳಿಗೆ ಕಾಂಕ್ರೀಟ್ ಹಾಕಿಸುವುದು ತಮ್ಮ ಗುರಿಯಾಗಿದೆ ಎಂದು ಶಾಸಕ ಕೆ.ಎಂ.ಶಿವಲಿಂಗೇಗೌಡ ತಿಳಿಸಿದರು.
 ತಾಲೂಕಿನ ಗಂಡಸಿ ಹೋಬಳಿಯ ಕೊಂಡೇನಾಳು ಗ್ರಾಮದಲ್ಲಿ ಭಾನುವಾರ ಏರ್ಪಡಿಸಿದ್ದ ಗ್ರಾಮದ ಸಂಪರ್ಕ ರಸ್ತೆಯ ಅಭಿವೃದ್ದಿ ಕಾರ್ಯಕ್ಕೆ ಗುದ್ದಲಿ ಪೂಜೆಯನ್ನು ನೆರವೇರಿಸಿದ ನಂತರ ಮಾತನಾಡಿದರು.
ನೀರು ಪೂರೈಕೆ: ಬೇಲೂರಿನ ಯಗಚಿ ನದಿ ಮೂಲದಿಂದ ತಾಲೂಕಿನ ಜಾವಗಲ್ ಮತ್ತು ಕಸಬಾ ಹೋಬಳಿಯ ನೂರಾರು ಗ್ರಾಮಗಳಿಗೆ ಪೈಪು ಮೂಲಕ ಕುಡಿಯುವ ಶುದ್ದ ನೀರು ಪೂರೈಕೆಯಾಗಿ ನೀರಿನ ಸಮಸ್ಯೆ ಸ್ವಲ್ಪ ಪ್ರಮಾಣದಲ್ಲಿ ಕಡಿಮೆಯಾಗಿದೆ ಎಂದರು.
 ಪಟ್ಟಣದ ಜನತೆಯ ಬಹದಿನದ ಕನಸಾದ ಹೇಮಾವತಿ ಕುಡಿಯುವ ನೀರು ಯೋಜನೆಯಡಿ ಪ್ರಾಯೋಗಿಕವಾಗಿ ಅರಸೀಕೆರೆ ಪಟ್ಟಣಕ್ಕೆ ನೀರು ಪೂರೈಸಲಾಗುತ್ತಿದೆ. ವರ್ಷಾತ್ಯಕ್ಕೆ ಎಲ್ಲರಿಗೂ ಶುದ್ದ ಕುಡಿಯುವ ನೀರು ಪೂರೈಕೆ ಮಾಡಲಾಗುವುದು ಎಂದರು.
ಏತ ನೀರಾವರಿ: ಇತ್ತೀಚೆಗೆ ರಾಜ್ಯ ಸರ್ಕಾರ ಕೈಗೆತ್ತಿಕೊಂಡಿರುವ ಎತ್ತಿನ ಹೊಳೆ ಏತ ನೀರಾವರಿ ಯೋಜನೆ ಅನುಷ್ಠಾನಗೊಂಡಲ್ಲಿ ತಾಲೂಕಿನ ಅನೇಕ ಕೆರೆಗಳಿಗೆ ನೀರು ತುಂಬಿಸಲು ಹೆಚ್ಚಿನ ಸಹಕಾರ ಆಗುತ್ತಿದ್ದು, ತಾವು ಈ ನಿಟ್ಟಿನಲ್ಲಿ ಅತ್ಯಂತ ಪರಿಶ್ರಮ ವಹಿಸಿ ಹೋರಾಟ ನಡೆಸುವುದಾಗಿ ಹೇಳಿದರು.  
 ಇಂದು ಗುದ್ದಲಿ ಪೂಜೆ ನೆರವೇರಿಸುವ ರಸ್ತೆಯ ಅಭಿವೃದ್ದಿ ಕಾಮಾಗಾರಿ ಸುಮಾರು 4 ಕೋಟಿ ರು. ಅಂದಾಜು ವೆಚ್ಚದ್ದಾಗಿದ್ದು, ಉರುಗಲವಾಡಿ ಗ್ರಾಮದಿಂದ ಕೊಂಡೇನಾಳು ಮಾರ್ಗದಲ್ಲಿ ಬರುವ ವಿವಿಧ ಗ್ರಾಮಗಳಲ್ಲಿ ಒಟ್ಟಾರೆ ಸೇರಿ 1400 ಮೀಟರ್ ರಸ್ತೆಕಾಂಕ್ರೀಟ್ ರಸ್ತೆಗಳು ಮತ್ತು 8.4 ಕಿ.ಮೀ ದೂರದವರೆಗೂ ಡಾಂಬರೀಕರಣದ ರಸ್ತೆಯನ್ನು ನಿರ್ಮಾಣ ಮಾಡುವ ಜೊತೆಗೆ 10 ಕಡೆಗಳಲ್ಲಿ ಕಲ್ವರ್ಟ್ಗಳನ್ನು ನಿರ್ಮಿಸಲಾಗುತ್ತದೆ ಎಂದು ಹೇಳಿದರು.
 ಜಿಪಂ ಸದಸ್ಯ ಹುಚ್ಚೇಗೌಡ, ರಾಷ್ಟ್ರೀಯ ಹೆದ್ದಾರಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ಅನಂತರಾಜ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ನಟೇಶ್, ನವಭಾರತ ವಿದ್ಯಾಸಂಸ್ಥೆ ಅಧ್ಯಕ್ಷ ನಾಗರಾಜ್, ಕೊಂಡೇನಾಳು ಗ್ರಾಪಂ ಅಧ್ಯಕ್ಷ ಶಂಕರಪ್ಪ, ಉಪಾಧ್ಯಕ್ಷ ಶಿವಲಿಂಗೇಗೌಡ, ಹೆಗ್ಗಟ್ಟ ಗ್ರಾಪಂ  ಅಧ್ಯಕ್ಷ ಪಾಪಣ್ಣ, ಹಾಲು ಉತ್ಪಾದಕರ ಸಂಘದ ಮಾಜಿ ಅಧ್ಯಕ್ಷ ರಂಗಸ್ವಾಮಿ ಸೇರಿದಂತೆ ಅನೇಕ ಮುಖಂಡರು ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.