ಬೆಂಗಳೂರು-ಹೊನ್ನಾವರ ಹೆದ್ದಾರಿ ಅಗಲೀಕರಣ ಆತಂಕ ಬೇಡ: ಶಿವಲಿಂಗೇಗೌಡ ಭರವಸೆ
ಅರಸೀಕೆರೆ: ಪಟ್ಟಣದ ಹೃದಯ ಭಾಗದಲ್ಲಿ ಹಾದು ಹೋಗಿರುವ ಬೆಂಗಳೂರು-ಹೊನ್ನಾವರ ರಾಷ್ಟ್ರೀಯ ಹೆದ್ದಾರಿ 206 ಅಗಲೀಕರಣದ ಬಗ್ಗೆ ಸಾರ್ವಜನಿಕರು ಯಾವುದೇ ರೀತಿಯಲ್ಲಿ ಆತಂಕಕ್ಕೆ ಒಳಗಾಗಬಾರದು ಎಂದು ಶಾಸಕ ಕೆ.ಎಂ. ಶಿವಲಿಂಗೇಗೌಡ ಭರವಸೆ ನೀಡಿದ್ದಾರೆ. ಪಟ್ಟಣದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪಟ್ಟಣದ ಒಳಗೆ ರಸ್ತೆ ಅಗಲೀಕರಣದಿಂದ ಪಟ್ಟಣದ ಸೌಂದರ್ಯ ಹಾಳಾಗುವುದಲ್ಲದೆ ನೂರಾರು ಕುಟುಂಬಗಳು ಬೀದಿ ಪಾಲಾಗಲಿವೆ ಎಂಬುದನ್ನು ಸದನದಲ್ಲಿ ಸರ್ಕಾರಕ್ಕೆ ಮನದಟ್ಟು ಮಾಡಿದ್ದು, ಅಲ್ಲದೇ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದು ಹಾಗೂ ಸಂಬಂಧಪಟ್ಟ ರಾಷ್ಟೀಯ ಹೆದ್ದಾರಿ ಇಲಾಖೆಯ ಎಂಜಿನಿಯರ್ಗಳೊಂದಿಗೆ ಮಾತನಾಡಿ ಪಟ್ಟಣದ ಹೊರವಲಯದ ಮೂಲಕ ಬೈಪಾಸ್ ರಸ್ತೆ ನಿರ್ಮಾಣಕ್ಕೆ ಮನವೊಲಿಸಿರುವುದಾಗಿ ತಿಳಿಸಿದರು. ಬೆಂಗಳೂರು ಹೊನ್ನಾವರ ರಾಷ್ಟ್ರೀಯ ಹೆದ್ದಾರಿಯನ್ನು ತುಮಕೂರಿನಿಂದ ಶಿವಮೊಗ್ಗದವರೆಗೆ ಚತುಷ್ಪಥ ರಸ್ತೆಯನ್ನಾಗಿ ಪರಿವರ್ತಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಖಾಸಗಿ ಸಂಸ್ಥೆಯ ಸಹಭಾಗಿತ್ವದಲ್ಲಿ ಮುಂದಾಗಿದ್ದು, ಅರಸೀಕೆರೆ ಪಟ್ಟಣದ ಮಧ್ಯೆ ಹಾದು ಹೋಗಿರುವ ಈ ರಾಷ್ಟ್ರೀಯ ಹೆದ್ದಾರಿಯ ಎರಡು ಬದಿಗಳ ಕಟ್ಟಡದ ಮಾಲೀಕರಿಗೆ ಹಾಗೂ ವ್ಯಾಪಾರಸ್ಥರಿಗೆ ತೀವ್ರ ಅತಂಕ ಉಂಟಾಗಿದೆ. ಪಟ್ಟಣದ ಮಧ್ಯಭಾಗದಲ್ಲಿ ಸುಮಾರು 3.5 ಕಿಮೀ ದೂರದವರೆಗೂ ರಾಷ್ಟ್ರಿಯ ಹೆದ್ದಾರಿ 206 ಬಿ.ಎಚ್.ರಸ್ತೆಯು ಹಾದು ಹೋಗಿರುವ ಕಾರಣ ಅನೇಕ ಜನರ ನಿರೀಕ್ಷೆಯಂತೆ ಚತುಷ್ಪದ ರಸ್ತೆ ಅಗಲೀಕರಣದ ಅಭಿವೃದ್ಧಿ ಕಾಮಾಗಾರಿಗಳು ಆರಂಭಗೊಂಡರೆ ರಸ್ತೆಯ ಎರಡು ಕಡೆಗಳಲ್ಲಿ ನೂರಾರು ವಾಣಿಜ್ಯ ಕಟ್ಟಡಗಳು ಕೇಡವಬೇಕಾಗುತ್ತದೆ.
ಇದರಿಂದ ಅನೇಕ ಕಟ್ಟಡಗಳ ಮಾಲೀಕರು ಕಟ್ಟಡಗಳನ್ನು ಬಾಡಿಗೆಗೆ ಪಡೆದು ವ್ಯಾಪಾರ ವಹಿವಾಟುಗಳನ್ನು ನಡೆಸುತ್ತಿರುವ ವರ್ತಕರಿಗೆ ಅಪಾರ ಪ್ರಮಾಣದಲ್ಲಿ ಕಷ್ಟ ನಷ್ಟಗಳು ಉಂಟಾಗುವ ಸಾಧ್ಯತೆಗಳು ಹೆಚ್ಚಿನ ಪ್ರಮಾಣದಲ್ಲಿ ಕಂಡು ಬರುತ್ತಿರುವ ಕಾರಣ ಈ ಸಮಸ್ಯೆ ಪರಿಹಾರ ಮಾರ್ಗವಾಗಿ ಪಟ್ಟಣದ ಹೊರವಲಯದಲ್ಲಿ ನೂತನವಾಗಿ ಬೈಪಾಸ್ ರಸ್ತೆಯೊಂದನ್ನು ನಿರ್ಮಿಸುವಂತೆ ತಾವು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಪತ್ರ ಬರೆದು ಮನವಿ ಸಲ್ಲಿಸಿರುವುದಾಗಿ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

